ಜಗಳೂರಿಗೆ ಶೀಘ್ರ ಸಿಎಂ ಭೇಟಿ: ಡಿಸಿ-ಎಸ್ಪಿ ಪರಿಶೀಲನೆ
Team Udayavani, Apr 12, 2022, 1:14 PM IST
ಜಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ತಿಂಗಳ ಅಂತ್ಯಕ್ಕೆ ಜಗಳೂರು ತಾಲೂಕಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಸೋಮವಾರ ಪಟ್ಟಣಕ್ಕೆ ಭೇಟಿ ನೀಡಿ ನೂತನ ವಿಐಪಿ ಅತಿಥಿಗೃಹ ಕಟ್ಟಡ ಕಾಮಗಾರಿ ಪರಿಶೀಲಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2500 ಕೋಟಿಗೂ ಹೆಚ್ಚು ಅನುದಾನದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜಗಳೂರು ಕ್ಷೇತ್ರದ 57 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಸೇರಿದಂತೆ ಪಟ್ಟಣದ ಪ್ರವಾಸಿಮಂದಿರ ಆವರಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣವಾಗಿರುವ ವಿಐಪಿ ಅತಿಥಿಗೃಹವನ್ನು ವೀಕ್ಷಿಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಯವರು, ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನು ಗುರುಭವನದ ಬಳಿ ಮಾಡಬೇಕು ಎಂದು ನಿರ್ಧಾರ ಮಾಡಲಾಗಿದೆ.
ಹೀಗಾಗಿ ಸ್ಥಳ ಪರಿಶೀಲನೆ ಮಾಡಲು ಬಂದಿದ್ದೇವೆ. ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಾಣ ಮಾಡುವ ಕುರಿತು ಚರ್ಚೆ ಮಾಡಿದ್ದೇವೆ.ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಕಲ ಸಿದ್ದತೆ ಮಾಡಿಕೊಂಡಿದ್ದೇವೆ ಎಂದರು. ಪ್ರವಾಸಿಮಂದಿರಕ್ಕೆ ಕಾಯಕಲ್ಪ ನೀಡುವ ಬಗ್ಗೆ ಲೋಕೋಪಯೋಗಿ ಇಲಾಖೆ ಎಇ ಪುರುಷೋತ್ತಮ ರೆಡ್ಡಿ ಅವರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂತೋಷ್‌ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾ ಧಿಕಾರಿ ಸಿ. ಲೋಕ್ಯಾ ನಾಯ್ಕ, ಆರೋಗ್ಯ ನಿರೀಕ್ಷಿಕ ಕಿಫಾಯತ್, ಪಿಎಸ್‌ಐ ಸಂತೋಷ್ ಬಾಗೋಜಿ, ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಮಹೇಶ್ವರಪ್ಪ, ತಾಪಂ ಇಒ ಲಕ್ಷ್ಮೀಪತಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.