ಪುರಿಬಾಜಿಯಲ್ಲಿ ಹಲ್ಲಿ ಬಿದ್ದ ಪ್ರಕರಣ; ಹೋಟೆಲ್ ಮಾಲೀಕರಿಂದ ಪರಿಹಾರ
90 ಸಾವಿರ ರೂ. ಪರಿಹಾರ ನೀಡಲು ಹೋಟೆಲ್ ಮಾಲೀಕನಿಗೆ ಆದೇಶ
Team Udayavani, Apr 12, 2022, 1:28 PM IST
ಹುಬ್ಬಳ್ಳಿ: ವರೂರಿನ ಹೋಟೆಲ್ ವೊಂದರಲ್ಲಿ ಪೂರೈಸಿದ್ದ ಪುರಿ ಬಾಜಿಯಲ್ಲಿ ಹಲ್ಲಿ ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇವಾ ನ್ಯೂನತೆ ಕಾರಣ ಇಬ್ಬರು ಗ್ರಾಹಕರಿಗೆ ಸೇರಿ ಒಟ್ಟು 90 ಸಾವಿರ ರೂ. ಪರಿಹಾರ ನೀಡಲು ಹೋಟೆಲ್ ಮಾಲೀಕರಿಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.
2018ರ ಸೆ.26ರಂದು ಹುಬ್ಬಳ್ಳಿಯ ವರೂರಿನ ಕಾಮತ ಉಪಚಾರ ಹೋಟೆಲ್‌ಗೆ ಬೆಳಗಿನ ಉಪಹಾರಕ್ಕಾಗಿ ಹೋಗಿದ್ದ ಗ್ರಾಹಕರಾದ ವಿನಾಯಕ ಮತ್ತು ಸಹನಾ ಅವರು, ಪುರಿ ಭಾಜಿ ಹೇಳಿದ್ದರು.
ಪೂರೈಸಿದ ಉಪಹಾರದಲ್ಲಿ ಹಲ್ಲಿ ಬಿದ್ದಿರುವುದನ್ನು ಗಮನಿಸಿ ಹೋಟೆಲ್ ಸಿಬ್ಬಂದಿ ಗಮನಕ್ಕೆ ತಂದಿದ್ದರು. ಸಿಬ್ಬಂದಿ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ವಿಷಪೂರಿತ ಉಪಹಾರ ಸೇವಿಸಿದ್ದ ಗ್ರಾಹಕ ವಿನಾಯಕ ಅವರಿಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡ ಕಾರಣ ಶಿಗ್ಗಾಂವಿ ಹಾಗೂ ಹುಬ್ಬಳ್ಳಿಯ ತತ್ವದರ್ಶ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ಈ ಕುರಿತು ಧಾರವಾಡದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ ಆಯೋಗವು ಕಾಮತ ಉಪಚಾರ ಹೋಟೆಲ್‌ನವರಿಂದ ಗ್ರಾಹಕರಿಗೆ ಸೇವಾ ನ್ಯೂನತೆ ಆಗಿದೆ ಎಂದು ತೀರ್ಮಾನಿಸಿ, ಹೋಟೆಲ್ ನವರು ಇಬ್ಬರೂ ಗ್ರಾಹಕರಿಗೆ ಒಟ್ಟು 90 ಸಾವಿರ ರೂ. ಪರಿಹಾರ ನೀಡಬೇಕೆಂದು ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ಪಿ.ಸಿ.ಹಿರೇಮಠ ಮತ್ತು ವಿ.ಎ. ಬೋಳಶೆಟ್ಟಿ ಅವರು ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.