ಐಪಿಎಲ್ ಬೆಟ್ಟಿಂಗ್: ಇಬ್ಬರ ಬಂಧನ
48 ಜನರ ವಿರುದ್ಧ ಪ್ರಕರಣ ದಾಖಲು
Team Udayavani, Apr 12, 2022, 3:00 PM IST
ಬಳ್ಳಾರಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿದ್ದ ಅಡ್ಡೆಗಳ ಮೇಲೆ ಪ್ರತ್ಯೇಕವಾಗಿ ದಾಳಿ ನಡೆಸಿರುವ ಗಾಂಧಿನಗರ, ಬ್ರೂಸ್‌ಪೇಟೆ ಪೊಲೀಸ್ ಠಾಣೆಗಳ ಪೊಲೀಸರು ಇಬ್ಬರನ್ನು ಬಂಧಿಸಿ 3.10 ಲಕ್ಷ ರೂ. ನಗದು, 2 ಮೊಬೈಲ್‌ಗಳನ್ನು ವಶಪಡಿಸಿಕೊಂಡು 48 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಐಪಿಎಲ್ ಕ್ರಿಕೇಟ್ ಲೀಗ್‌ನ ಏ. 8ರಂದು ನಡೆದ ಪಂಚಾಬ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯಕ್ಕೆ ನಗರದ ನಟರಾಜ್ ಚಿತ್ರಮಂದಿರ ಬಳಿ ಸಾರ್ವಜನಿಕ ಸ್ಥಳದಲ್ಲಿ ಬೆಟ್ಟಿಂಗ್ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ದಾಳಿ ನಡೆಸಿರುವ ಬ್ರೂಸ್‌ಪೇಟೆ ಠಾಣೆ ಪೊಲೀಸರು, ಬಾಪೂಜಿನಗರದ ಮಂಜುನಾಥ್ (35) ಎನ್ನುವನನ್ನು ಬಂಧಿಸಿ, ಆತನೊಂದಿಗೆ ಸಂಪರ್ಕದಲ್ಲಿದ್ದ 24 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದಾಳಿಯಲ್ಲಿ ಬೆಟ್ಟಿಂಗ್ ಕಟ್ಟಿದ್ದ 1.55 ಲಕ್ಷ ರೂ. ನಗದು, 1 ಮೊಬೈಲ್‌ನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಇದೇ ಮ್ಯಾಚ್‌ಗೆ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗಾಂನಗರ ಠಾಣೆ ಪೊಲೀಸರು ಸಹ ನಗರದ ಅಮ್ರತ ಲ್ಯಾಬ್ ಮುಂದಿನ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ್ದು, ಬಾಪೂಜಿ ನಗರದ ಸಣ್ಣ ತಾಯಪ್ಪ (36) ಎನ್ನುವನನ್ನು ಬಂಧಿಸಿ 1.55 ಲಕ್ಷ ರೂ. ನಗದು, ಒಂದು ಮೊಬೈಲ್‌ನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ಬಳಿ ದೊರೆತ ಮಾಹಿತಿ ಮೇರೆಗೆ 24 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಎಸ್‌ಪಿ ಸೈದುಲು ಅಡಾವತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.