![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 12, 2022, 3:29 PM IST
ಲಕ್ನೋ: ಇತ್ತೀಚೆಗೆ ನಡೆದ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ ಜಯ ಸಾಧಿಸಿದ್ದ ಬೆನ್ನಲ್ಲೇ ವಿಧಾನಪರಿಷತ್ ಗೆ ನಡೆದ ಚುನಾವಣೆಯಲ್ಲಿಯೂ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುತ್ತಿರುವ ವಾರಣಾಸಿಯಲ್ಲಿ ಮುಖಭಂಗ ಅನುಭವಿಸಿದೆ.
ಇದನ್ನೂ ಓದಿ:ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ: ಸಚಿವ ಈಶ್ವರಪ್ಪ ಮನೆಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ
ಉತ್ತರಪ್ರದೇಶದ ವಿಧಾನಪರಿಷತ್ 100 ಸ್ಥಾನಗಳ ಸಂಖ್ಯಾಬಲವನ್ನು ಹೊಂದಿದ್ದು, ತೆರವುಗೊಂಡ 36 ಸ್ಥಾನಗಳಿಗೆ ಮತದಾನ ನಡೆದಿತ್ತು. ಈಗಾಗಲೇ ಒಂಬತ್ತು ಮಂದಿ ಬಿಜೆಪಿಯಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪೂರ್ಣಪ್ರಮಾಣದ ಫಲಿತಾಂಶ ಘೋಷಣೆಯಾದರೆ, ಮೇಲ್ಮನೆಯಲ್ಲಿ ಬಿಜೆಪಿ ಬಹುಮತ ಪಡೆಯಲಿದೆ. ಕಳೆದ ಒಂದು ದಶಕದ ನಂತರ ಇದೇ ಮೊದಲ ಬಾರಿಗೆ ಮೇಲ್ಮನೆಯಲ್ಲಿ ಬಹುಮತ ಪಡೆದಂತಾಗಲಿದೆ.
ಆದರೆ ವಾರಣಾಸಿ ಕ್ಷೇತ್ರದಲ್ಲಿ ಸ್ಥಳೀಯ ಪ್ರಭಾವಿ ವ್ಯಕ್ತಿ ಬ್ರಿಜೇಶ್ ಸಿಂಗ್ ಪತ್ನಿ ಅನ್ನಪೂರ್ಣ ಸಿಂಗ್ ಭರ್ಜರಿ ಮತಗಳಿಂದ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದು, ಬಿಜೆಪಿ ಅಭ್ಯರ್ಥಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.
2016ರಲ್ಲಿ ನಡೆದ ಮೇಲ್ಮನೆ ಚುನಾವಣೆಯಲ್ಲಿ ಬ್ರಿಜೇಶ್ ಸಿಂಗ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲವಾಗಿತ್ತು. ಈ ಬಾರಿ ಪ್ರತಿಷ್ಠೆಯ ಕಣದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಿತ್ತು.
ವಿರೋಧಪಕ್ಷವಾದ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ವಿಧಾನಪರಿಷತ್ ಚುನಾವಣೆಯಲ್ಲಿ ಒಂದು ಸ್ಥಾನದಲ್ಲಿಯೂ ಗೆಲುವು ಪಡೆಯಲಿಲ್ಲ. 2017ರಲ್ಲಿ ಗೋರಖ್ ಪುರ್ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿರುವ ಪ್ರಕರಣದಲ್ಲಿ ಶಾಮೀಲಾಗಿರುವ ಆರೋಪದಲ್ಲಿ ಜೈಲು ಸೇರಿದ್ದ ಡಾ.ಕಫೀಲ್ ಖಾನ್ ಕೂಡಾ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಪರಾಜಯಗೊಂಡಿರುವುದಾಗಿ ವರದಿ ತಿಳಿಸಿದೆ. ಮೇಲ್ಮನೆ ಚುನಾವಣೆಯಲ್ಲಿ ಸಂಸದರು, ಶಾಸಕರು, ಕಾರ್ಪೋರೇಟರ್ಸ್ ಗಳು ಮತ್ತು ಗ್ರಾಮ ಪಂಚಾಯ್ತಿ ಮಟ್ಟದ ಜನಪ್ರತಿನಿಧಿಗಳು ತಮ್ಮ ಮತ ಚಲಾಯಿಸುವ ಮೂಲಕ ವಿಧಾನಪರಿಷತ್ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.