ಸರಕಾರ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ

ಸುಟ್ಟತ್‌ಮಲೆ ಪ್ರದೇಶಕ್ಕೆ ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷರ ಭೇಟಿ

Team Udayavani, Apr 13, 2022, 6:15 AM IST

ಸರಕಾರ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ

ಸುಬ್ರಹ್ಮಣ್ಯ: ಹರಳುಕಲ್ಲು ದಂಧೆ ಅವ್ಯಾತವಾಗಿ ನಡೆಯುತ್ತಿದೆ ಎನ್ನಲಾಗಿರುವ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯ ಗಡಿ ಪ್ರದೇಶ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಸಮೀಪದ ಸುಟ್ಟತ್‌ಮಲೆಗೆ ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ ಅವರು ಸೋಮವಾರಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಸುಟ್ಟತ್‌ಮಲೆ ಆಸುಪಾಸಿನಲ್ಲಿ ಹರಳು ಕಲ್ಲು ದಂಧೆ ವ್ಯಾಪಕವಾಗಿರುವ ಬಗ್ಗೆ ಮಾಧ್ಯಮಗಳ ವರದಿಯ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದರು. ಇದೀಗ ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷರು ಭೇಟಿ ನೀಡಿದ್ದು, ಹರಳು ಕಲ್ಲು ತೆಗೆಯಲು 50 ಅಡಿಗಿಂತಲೂ ಹೆಚ್ಚು ಆಳದ ಹಲವು ಗುಂಡಿಗಳನ್ನು ತೋಡಿರುವುದು ಪತ್ತೆಯಾಯಿತು. ಕೆಲವು ಹೊಂಡಗಳಿಗೆ ಮರದ ಹಲಗೆಗಳನ್ನು ಹಾಕಿ ಮುಚ್ಚಿರುವುದೂ ಗಮನಕ್ಕೆ ಬಂದಿದೆ ಎನ್ನಲಾಗಿದೆ.

ಚರ್ಚಿಸಿ ಕ್ರಮ
ಸುಟ್ಟತ್‌ನಲೆ, ಕಡಮಕಲ್ಲು ಪ್ರದೇಶದ ಕೆಲವು ಸ್ಥಳಗಳು ದ.ಕ. ಜಿಲ್ಲಾ ಅರಣ್ಯ ವ್ಯಾಪ್ತಿಗೆ ಬರುತ್ತದೋ ಕೊಡಗು ಜಿಲ್ಲಾ ವ್ಯಾಪ್ತಿಗೆ ಬರುತ್ತದೋ ಎಂಬ ಮಾಹಿತಿ ಇಲ್ಲದಿರುವುದು ಮತ್ತು ಉಭಯ ಜಿಲ್ಲೆಯ ಅರಣ್ಯ ಇಲಾಖೆಯವರಲ್ಲಿ ಸಮನ್ವಯದ ಕೊರತೆ ಇರುವುದರಿಂದ ಅನ್ಯರು ಕಾಡು ಪ್ರವೇಶಿಸಲು ಅವಕಾಶವಾಗುತ್ತಿದೆ. ಕೊಡಗು ಭಾಗದಿಂದ ಇಲ್ಲಿಗೆ ಬಂದು ದಂಧೆ ನಡೆಸುತ್ತಿರುವುದೇ ಇದಕ್ಕೆ ಸಾಕ್ಷಿ. ಇಲಾಖೆಯಲ್ಲಿ ಸಿಬಂದಿ ಕೊರತೆ, ಆಧುನಿಕ ಉಪಕರಣಗಳ ಕೊರತೆ ಇದೆ. ಅರಣ್ಯ ಇಲಾಖೆಯ ಶೆಡ್‌ಗಳಲ್ಲಿ ಮೂಲ ಸೌಕರ್ಯ ಕೊರತೆಯೂ ಕಂಡುಬಂದಿದೆ. ಇಲ್ಲಿನ ಸಮಸ್ಯೆಗಳ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಸಿಬಂದಿಗೆ ಮೂಲ ಸೌಕರ್ಯ
ಅರಣ್ಯ ರಕ್ಷಕರಿಗೇ ರಕ್ಷಣೆ ಇಲ್ಲದ ಸ್ಥಿತಿ ಇದೆ. ಅವರಿಗೆ ಮೂಲಸೌಕರ್ಯ, ಸೂಕ್ತ ಆಯುಧಗಳು, ಉತ್ತಮ ವೇತನ ನೀಡುವ ಬಗ್ಗೆ ಸದ್ಯದಲ್ಲೇ ದ.ಕ., ಕೊಡಗು ಅರಣ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸುತ್ತೇನೆ ಎಂದು ರವಿ ಕುಶಾಲಪ್ಪ ಹೇಳಿದರು.

ವನ್ಯಜೀವಿ ಅಪರಾಧ ನಿಯಂತ್ರಣ ದಳದ ಭುವನೇಶ್‌ ಕೈಕಂಬ, ಸುಬ್ರಹ್ಮಣ್ಯ ಠಾಣೆ ಎಎಸ್‌ಐ ಕರುಣಾಕರ, ಸಿಬಂದಿ ಬಸವರಾಜ್‌, ಉಪ ವಲಯಾ ರಣ್ಯಾಧಿಕಾರಿಗಳಾದ ಪ್ರಕಾಶ್‌, ರವಿಚಂದ್ರ, ಸಿಬಂದಿ ಉಪಸ್ಥಿತರಿದ್ದರು.

ಏನಿದು ಪ್ರಕರಣ?
ಸುಟ್ಟತ್‌ಮಲೆ ಅರಣ್ಯ ಪ್ರದೇಶದಲ್ಲಿ ಕೆಜಿಗೆ ಸಾವಿರಾರು ರೂ. ಬೆಲೆ ಬಾಳುವ ಹರಳು ಕಲ್ಲುಗಳ ನಿಕ್ಷೇಪವಿದ್ದು, ಅಕ್ರಮವಾಗಿ ಹಣ ಗಳಿಸುವ ದುರುದ್ದೇಶದಿಂದ ಕೆಲವು ಅಲ್ಲಿ ನೆಲವನ್ನು ಬಗೆದು ಹರಳು ಕಲ್ಲುಗಳನ್ನು ಸಂಗ್ರಹಿಸುವ ಪ್ರಕ್ರಿಯೆ ಹಲವು ವರ್ಷಗಳ ಹಿಂದೆಯೇ ನಡೆಯುತ್ತಿರುವ ಬಗ್ಗೆ ವರದಿಯಾಗಿತ್ತು. ಒಂದೊಮ್ಮೆ ನಿಂತಿದ್ದ ಈ ದಂಧೆ ಇದೀಗ ಮತ್ತೆ ಆರಂಭವಾಗಿದೆ.

ಹರಳು ಕಲ್ಲು ದಂಧೆಯನ್ನು ನಿಲ್ಲಿಸದೇ ಇದ್ದಲ್ಲಿ ದುರಂತ ಕಟ್ಟಿಟ್ಟ ಬುತ್ತಿ. ಪಶ್ಚಿಮ ಘಟ್ಟ, ಪರಿಸರ ಉಳಿಯಲು ಇದನ್ನು ತಡೆಯುವುದು ಅನಿವಾರ್ಯ. ಸರಕಾರ, ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು. ಇದು ಆನೆಗಳ ಆವಾಸ ಸ್ಥಾನವಾಗಿದ್ದು, ಇಂತಹ ಚಟುವಟಿಕೆಗಳಿಂದ ಅವುಗಳ ಸ್ವತ್ಛಂದ ಓಡಾಟಕ್ಕೆ ಅಡ್ಡಿಯಾಗುತ್ತಿದೆ. ಇದೇ ಕಾರಣದಿಂದ ಇತ್ತೀಚಿನ ದಿನಗಳಲ್ಲಿ ಆನೆಗಳು ನಾಡಿನತ್ತ ನುಗ್ಗಿ ಸಂಘರ್ಷಕ್ಕೆ ಕಾರಣವಾಗುತ್ತಿದೆ.
– ರವಿಕುಶಾಲಪ್ಪ,
ಅಧ್ಯಕ್ಷರು ಪಶ್ಚಿಮ ಘಟ್ಟಗಳ ಕಾರ್ಯಪಡೆ

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.