ಮಂಗಳೂರು: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ಎಸ್.ಡಿ.ಪಿ.ಐ
Team Udayavani, Apr 13, 2022, 12:03 PM IST
ಮಂಗಳೂರು: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್.ಡಿ.ಪಿ.ಐ ಕಾರ್ಯಕರ್ತರು ಸಿ.ಎಂ ಗೆ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ಮಂಗಳೂರಿನ ನಗರ ಹೊರವಲಯದ ವಳಚ್ಚಿಲ್ ನಲ್ಲಿ ನಡೆದಿದೆ.
ಸಿ.ಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಿಂದ ಬಂಟ್ವಾಳದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಸಚಿವ ಈಶ್ವರಪ್ಪ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಎಸ್.ಡಿ.ಪಿ.ಐ ಕಾರ್ಯಕರ್ತರು ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿ ಧಿಕ್ಕಾರ ಕೂಗಿದರು.
ತಕ್ಷಣ ಪ್ರತಿಭಟನಾಕಾರರನ್ನು ಪೊಲೀಸರು, ಮುಖ್ಯಮಂತ್ರಿ ಭದ್ರತಾ ಸಿಬ್ಬಂದಿಗಳು ಚದುರಿಸಿ,ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಯತ್ನಿಸಿದರು.
ಇದನ್ನೂ ಓದಿ:ಆಧಾರ ರಹಿತ ದೂರಿಗೆ ಮಾನ್ಯತೆ ಕೊಡಲು ಸಾಧ್ಯವೇ?: ಸಚಿವ ಡಾ. ಕೆ. ಸುಧಾಕರ್
ಗುತ್ತಿಗೆದಾರ ಸಂತೋಷ್ ಪಾಟೀಲ್ 40% ಕಮಿಷನ್ ಆರೋಪ ಹಾಕಿ, ಉಡುಪಿಯ ಖಾಸಗಿ ಹೊಟೇಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಚಿವ ಈಶ್ವರಪ್ಪ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದೆ.
ಈಗಾಗಲೇ ಈ ಪ್ರಕರಣದಲ್ಲಿ ಪೊಲೀಸರು ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಕೊಟ್ಟ ದೂರಿನ ಮೇಲೆ ಸಚಿವ ಈಶ್ವರಪ್ಪ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.