ಸ್ಥಗಿತಗೊಂಡ ಶುದ್ಧ ಕುಡಿವ ನೀರಿನ ಘಟಕ


Team Udayavani, Apr 13, 2022, 4:38 PM IST

ಸ್ಥಗಿತಗೊಂಡ ಶುದ್ಧ ಕುಡಿವ ನೀರಿನ ಘಟಕ

ದೇವನಹಳ್ಳಿ: ಸರ್ಕಾರ ಗ್ರಾಮೀಣ, ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಜನ ಆರೋಗ್ಯವಂತರಾಗಲು ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಟ್ಯಂತರ ರೂ. ವ್ಯಯ ಮಾಡುತ್ತಿದ್ದಾರೆ. ಆದರೆ, ಪಟ್ಟಣದ ಪುರಸಭೆ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 11ದಿನಗಳಿಂದ ಸ್ಥಗಿತಗೊಂಡಿದ್ದು, ಶುದ್ಧ ಕುಡಿಯುವ ನೀರಿಗಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದಲ್ಲಿ ಅಂರ್ತಜಲ ಕುಸಿತ ಹೆಚ್ಚಳದಿಂದ ಪ್ಲೊರೈಡ್‌ಯುಕ್ತ ನೀರು ಮಾರಕ ರೋಗಗಳಿಗೆ ಕಾರಣವಾಗಲಿದೆ ಎಂಬುವ ದೃಷ್ಟಿದಿಂದ ಅಸ್ತಿತ್ವಕ್ಕೆ ತರಲಾದ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿದ್ದು, ನೀರಿಗಾಗಿ ಪ್ಲೊರೈಡ್‌ಯುಕ್ತ ನೀರು ಬಳಕೆ ಮಾಡುವುದು ಅನಿವಾರ್ಯವಾಗಿದೆ. ಪಟ್ಟಣದ ಪುರಸಭೆ ಆವರಣದಲ್ಲಿರುವ ನೀರಿನ ಘಟಕ ಸ್ಥಗಿತಗೊಂಡು ಸುತ್ತಮುತ್ತಲಿನ ಜನ ಕುಡಿಯುವ ನೀರಿಗಾಗಿ ಪರದಾಡುವಂತಾಗಿದ್ದು, ಪುರಸಭೆ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ.

ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ವಿಜಯಪುರ ಪಟ್ಟಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಮಾಡುತ್ತಿದ್ದ ಎನ್‌ಜಿಒ ಸಂಸ್ಥೆ ಎಲ್ಲ ಮೂರು ಕಡೆ ಬೀಗ ಹಾಕಿ ಜಿಲ್ಲಾಧಿಕಾರಿ ಕಚೇರಿ ನಗರಾಭಿವೃದ್ಧಿಕೋಶದ ಯೋಜನಾ ಕಚೇರಿಗೆ ಬೀಗವನ್ನು ಕೊಟ್ಟು ಹೋಗಿದ್ದಾರೆ ಎಂದು ಪುರಸಭಾ ಅಧಿಕಾರಿಗಳು ಹೇಳುತ್ತಿದ್ದಾರೆ.

ಕ್ರಮ ಕೈಗೊಳ್ಳಿ: ಸಾರ್ವಜನಿಕರು ಆರೋಗ್ಯವಂತರಾಗಿ ಇರಬೇಕಾದರೆ ಶುದ್ಧ ಕುಡಿಯುವ ನೀರಿಗೆ ಹೆಚ್ಚಿನ ಮಹತ್ವವನ್ನು ಸರ್ಕಾರ ನೀಡಬೇಕು. ಸರ್ವರಿಗೂ ಶುದ್ಧ ಕುಡಿಯುವ ನೀರಿನ ಪೂರೈಕೆ ಆಶಯದೊಂದಿಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣವಾಗಿದೆ. ಕುಡಿಯುವ ನೀರಿನ ಘಟಕಗಳು ನಿಂತು ಹೋದರೆ ತಕ್ಷಣ ಅಧಿಕಾರಿಗಳು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಾರ್ವಜನಿಕರಿಗೆ ಅನುಕೂಲ: 13ನೇ ಹಣಕಾಸು ಹಾಗು ಜಿಲ್ಲಾ ನವಪ್ರವರ್ತನ ನಿಧಿಯಿಂದ ಪುರಸಭೆಯವರು ಘಟಕ ನಿರ್ಮಾಣ ಮಾಡಿ ಖಾಸಗಿಯವರಿಗೆ ಗುತ್ತಿಗೆ ನೀಡಿದ್ದರು. ಅವರು ಘಟಕವನ್ನು ನಡೆಸುತ್ತಿದ್ದು, ಅವರಿಗೆ ನೀಡಿರುವ ಗುತ್ತಿಗೆ ಮುಕ್ತಾಯವಾಗಿದ್ದರಿಂದ ಅವರು ಘಟಕವನ್ನು ಸ್ಥಗಿತಗೊಳಿಸಿದ್ದಾರೆ. ಇದೇ ಘಟಕದಿಂದ ಸುತ್ತಮುತ್ತಲಿನ ಬೀದಿಬದಿ ವ್ಯಾಪಾರಿಗಳು, ಪುರಸಭೆ ಸುತ್ತಮುತ್ತಲಿನ ಸಾರ್ವಜನಿಕರು ಕುಡಿಯುವ ನೀರಿನ ಘಟಕವನ್ನೇ ಅವಲಂಬಿಸಿದ್ದರು. ಘಟಕ ಮುಚ್ಚಿರುವುದರಿಂದ ನೀರಿಗಾಗಿ ಜನ ಬೇರೆ ಘಟಕಗಳಿಗೆ ತೆರಳಿ ಕುಡಿಯುವ ನೀರು ತರುವಂತಾಗಿದೆ. ಪುರಸಭೆ ಅಧಿಕಾರಿಗಳು ಘಟಕವನ್ನು ಮರು ಪ್ರಾರಂಭಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎನ್ನುತ್ತಾರೆ ಸಾರ್ವಜನಿಕರು.

ಬೇಸಿಗೆಗೆ ಹೆಚ್ಚಿದ ನೀರಿನ ಬೇಡಿಕೆ: ಬೇಸಿಗೆ ಪ್ರಾರಂಭವಾಗಿದ್ದು ಕುಡಿಯುವ ನೀರಿಗೆ ಬೇಡಿಕೆ ಹೆಚ್ಚಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಘಟಕ ಸ್ಥಗಿತವಾಗಿರುವುದರಿಂದ ಜನ ತೊಂದರೆ ಅನುಭವಿಸುವಂತಾಗಿದ್ದು, ಅದನ್ನು ತುರ್ತಾಗಿ ದುರಸ್ತಿ ಮಾಡಿಸಿ ಮರು ಚಾಲನೆ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಪ್ಲೊರೈಡ್‌ ಅಂಶ ಪತ್ತೆ: ಅಂರ್ತಜಲ ಕುಸಿದಿರುವ ಪರಿಣಾಮ ಕುಡಿಯುವ ನೀರಿನಲ್ಲಿ ಅತ್ಯಧಿಕ ಪ್ರಮಣದಲ್ಲಿ ಪ್ಲೊರೈಡ್‌ ಅಂಶ ಕಾಣಿಸಿಕೊಳ್ಳುತ್ತದೆ. ಕೊಳವೆಬಾವಿಯಲ್ಲಿ ನೀರು 1200ರಿಂದ 1500 ಅಡಿ ಆಳಕ್ಕೆ ಇಳಿದ ಕಾರಣದಿಂದ ಲಭ್ಯ ನೀರಿನಲ್ಲಿ ಅಪಾಯಕಾರಿ ಪ್ಲೊರೈಡ್‌ ಅಂಶ ಪತ್ತೆಯಾಗುತ್ತದೆ. ಅಕ್ಟೋಬರ್‌ ತಿಂಗಳಿನಲ್ಲಿ ಹೆಚ್ಚಿನ ಮಳೆ ಬಿದ್ದಿದ್ದರಿಂದ ಕೆರೆಗಳಿಗೆ ಹೆಚ್ಚಿನ ನೀರು ಬಂದಿದೆ. ನಾಗವಾರ ಮತ್ತು ಹೆಬ್ಟಾಳ ಕೆರೆಗಳ ಶುದ್ಧೀಕರಿಸಿದ ನೀರು ಕೆರೆಗಳಿಗೆ ಹರಿಸಿರುವುದರಿಂದ ಸುತ್ತಮುತ್ತಲಿನ ಬೋರ್‌ವೆಲ್‌ಗ‌ಳಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗಿದೆ.

ದೇವನಹಳ್ಳಿ ಹೃದಯ ಭಾಗದಲ್ಲಿರುವ ಪುರಸಭೆಯಲ್ಲಿ ಕಳೆದ 11ದಿನಗಳಿಂದ ಶುದ್ಧ ನೀರಿನ ಘಟಕ ಸ್ಥಗಿತಗೊಂಡಿದೆ. ಇದರಿಂದ ಬೇರೆ ಕಡೆ ಹೋಗಿ ನೀರನ್ನು ತೆಗೆದುಕೊಂಡು ಬರುವ ಸ್ಥಿತಿ ಬಂದಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಗೊಂಡು ಸ್ಥಗಿತಗೊಂಡಿರುವ ನೀರಿನ ಘಟಕವನ್ನು ಪುನಃ ಪ್ರಾರಂಭಿಸಬೇಕು. -ಶ್ರೀನಿವಾಸ್‌, ನಾಗರಿಕ

ಘಟಕವನ್ನು ನಿರ್ವಹಣೆಗೆ ನೀಡಲಾಗಿತ್ತು. ಆದರೆ, ಎನ್‌ಜಿಒ ಸಂಸ್ಥೆಯವರು ಜಿಲ್ಲಾಧಿಕಾರಿ ಕಚೇರಿಯ ನಗರಾಭಿವೃದ್ಧಿಕೋಶದ ಕಚೇರಿ ಅಧಿಕಾರಿಗಳಿಗೆ ಬೀಗ ಕೊಟ್ಟು ಹೋಗಿದ್ದಾರೆ. ಯೋಜನಾ ನಿರ್ದೇಶಕರು ಬೀಗವನ್ನು ಹಸ್ತಾಂತರಿಸಿದ ನಂತರ ಟೆಂಡರ್‌ ಕರೆದು ನೀರಿನ ಘಟಕದ ನಿರ್ವಹಣೆ ಮಾಡಲಾಗುವುದು. – ಎ.ಎಚ್‌.ನಾಗರಾಜ್‌, ಪುರಸಭಾ ಮುಖ್ಯಾಧಿಕಾರಿ

 

– ಎಸ್‌.ಮಹೇಶ್‌

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.