ಹುಣಸೂರು: ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
Team Udayavani, Apr 13, 2022, 6:22 PM IST
ಹುಣಸೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಯಲ್ಲಿ ಭಾಗವಹಿಸುವ ಕೂಲಿಕಾರರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಇಂದು ಏರ್ಪಡಿಸಲಾಗಿದ್ದು, ಸ್ವತಃ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಕಾರಿ ಹೆಚ್.ಡಿ.ಗಿರೀಶ್ ಅವರೇ ಆರೋಗ್ಯ ತಪಾಸಣೆಗೊಳಪಡುವ ಮೂಲಕ ಚಾಲನೆ ನೀಡಿದರು.
ತಾಲೂಕಿನ ಹೆಗ್ಗಂದೂರು ಗ್ರಾಮ ಪಂಚಾಯಿತಿಯ ವಡ್ಡಂಬಾಳು ಗ್ರಾಮದಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಥಳದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದ್ದು, ಸುಮಾರು 20ಕ್ಕೂ ಹೆಚ್ಚು ನರೇಗಾ ಕೂಲಿಕಾರರು ಹಾಗೂ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.
ಈ ವೇಳೆ ಸಕ್ಕರೆ ಖಾಯಿಲೆ ಹಾಗೂ ಬಿಪಿ ಉಳ್ಳವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಮಾರ್ಗದರ್ಶನ ಮಾಡಲಾಯಿತು. ಈ ವೇಳೆ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು, ಸಹಾಯಕ ನಿರ್ದೇಶಕರಾದ ಹೆಚ್.ಡಿ.ಲೋಕೇಶ್, ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಕಾರಿ ಮಹದೇವ್, ಗ್ರಾಮಪಂಚಾಯಿತಿ ಆರೋಗ್ಯ ಅಭಿಯಾನ ಸಂಯೋಜಕರಾದ ವಸಂತ್ಕುಮಾರ್ ಸೇರಿದಂತೆ ತಾಲ್ಲೂಕು ಪಂಚಾಯತ್ ಸಿಬ್ಬಂದಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.