ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ
Team Udayavani, Apr 14, 2022, 11:28 AM IST
ಮಣಿಪಾಲ: ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ರೋಗಗಳಿಂದ ದೂರವಿರಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಅವರು ಬುಧವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಡೆಂಗ್ಯೂ ಮತ್ತು ಮಲೇರಿಯಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ರೋಗಗಳು ಬರುವ ಸಾಧ್ಯತೆ ಹೆಚ್ಚಿದ್ದು, ಮಳೆ ನೀರು ಎಲ್ಲೆಂದರಲ್ಲಿ ನಿಲ್ಲುವುದರಿಂದ ಸೊಳ್ಳೆಗಳ ಸಂತಾನೋತ್ಪತ್ತಿಗೆ ಕಾರಣವಾಗುತ್ತಿದೆ. ಹೆಚ್ಚಿನ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಮತ್ತಿತರ ರೋಗಗಳು ಹರಡುತ್ತವೆ ಎಂದರು. ಸೊಳ್ಳೆ ನಿಯಂತ್ರಣಕ್ಕೆ ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಸ್ಥಳೀಯ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆಗಳು ಕೈಗೊಳ್ಳಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದರು.
ಬಹು ಮಹಡಿ ಕಟ್ಟಡಗಳ ಮೇಲ್ಛಾವಣಿಗಳಲ್ಲಿ ನೀರಿನ ಟ್ಯಾಂಕ್‌ಗಳನ್ನು ತೆರೆದಿಟ್ಟಿರುವ ಹಿನ್ನೆಲೆ ಅಲ್ಲಿ ಸೊಳ್ಳೆಗಳ ಉತ್ಪತ್ತಿ ತಾಣಗಳಾಗಿವೆ. ನಗರಸಭೆ, ಪುರಸಭೆ ಹಾಗೂ ಗ್ರಾ.ಪಂ. ಸಿಬಂದಿ ಪರಿವೀಕ್ಷಣೆ ಮಾಡಿ, ಸಂಬಂಧ ಪಟ್ಟವರಿಗೆ ಸೂಚನೆ ನೀಡುವುದು ಸೂಕ್ತ ಎಂದರು. ಆರೋಗ್ಯ ಶಿಕ್ಷಣ ನೀಡಿ ಮಲೇರಿಯಾ, ಡೆಂಗ್ಯೂ ರೋಗಗಳು ಹೆಚ್ಚು ಕಂಡುಬರುವ ಪ್ರದೇಶ ಗುರುತಿಸುವುದರೊಂದಿಗೆ ವಿಶೇಷ ಕಾರ್ಯಕ್ರಮಗಳನ್ನು, ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ಶಿಕ್ಷಣ ನೀಡುವುದರೊಂದಿಗೆ ಸೊಳ್ಳೆಗಳ ಉತ್ಪತ್ತಿಯಾಗದಂತೆ ಕ್ರಮ ವಹಿಸಬೇಕು ಎಂದರು.
ಕಟ್ಟಡ ನಿರ್ಮಾಣ ಹಾಗೂ ಮೀನುಗಾರಿಕೆ ಸೇರಿದಂತೆ ಮತ್ತಿತರ ಕಾರ್ಯಗಳಿಗೆ ಹೊರ ರಾಜ್ಯಗಳಿಂದ ಕಾರ್ಮಿಕರು ಹಾಗೂ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಸಹ ಹೆಚ್ಚು ಜನರು ಹೊರಗಿನಿಂದ ಬರುತ್ತಾರೆ. ಹಾಗಾಗಿ ಇದರಿಂದ ರೋಗಗಳು ಹರಡುವ ಸಾಧ್ಯತೆ ಇದ್ದು ಇದರಿಂದ ಎಚ್ಚರ ವಹಿಸುವುದು ಅಗತ್ಯ ಎಂದರು.
ಕಳೆದ ವರ್ಷಗಳಲ್ಲಿ ಮಲೇರಿಯಾ, ಡೆಂಗ್ಯೂ ಪ್ರಕರಣ ನಗರ ಪ್ರದೇಶಗಳಲ್ಲಿ ಹಾಗೂ ಕೊಲ್ಲೂರು ವ್ಯಾಪ್ತಿಯಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿದೆ. ಡೆಂಗ್ಯೂ, ಮಲೇರಿಯಾ, ಕೀಟಜನ್ಯ ರೋಗಗಳ ಸಾಮಾನ್ಯ ಲಕ್ಷಣಗಳು ಕಂಡುಬಂದಲ್ಲಿ ಅವರುಗಳಿಗೆ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡುವುದರೊಂದಿಗೆ ರೋಗ ಹರಡುವುದನ್ನು ತಡೆಯಲು ಸಾಧ್ಯ ಎಂದರು. ಜಿ.ಪಂ. ಸಿಇಒ ಡಾ|ನವೀನ್ ಭಟ್, ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.