“ಒಂದು ದೇಶ, ಒಂದು ಪರೀಕ್ಷೆಯಿಂದ ಸ್ಥಳೀಯರಿಗೆ ಅನ್ಯಾಯ?

ಕೇಂದ್ರದಿಂದಲೇ ಎಲ್ಲವನ್ನೂ ನಿರ್ವಹಿಸುವ ವ್ಯವಸ್ಥೆ ಮಾರಕವಾಗಲಿದೆ: ತಜ್ಞರ ಅಭಿಮತ

Team Udayavani, Apr 14, 2022, 12:11 PM IST

8

ಬೆಂಗಳೂರು: ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ಆರಂಭಿಸಲು ಹೊರಟಿರುವ ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ)ಯಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವುದು ಮಾತ್ರವಲ್ಲ, ಸ್ಥಳೀಯ ಶಿಕ್ಷಣ ಸಂಸ್ಥೆಗಳ ಸಂಪನ್ಮೂಲ ಬೇರೊಬ್ಬರಿಗೆ ನೀಡಿದಂತಾಗುತ್ತದೆಯೇ?

ಇತ್ತೀಚಿನ ದಿನಗಳಲ್ಲಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ತಮ್ಮ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿ ಗಳಲ್ಲಿರುವ ಹೊಸ ಚಿಂತನೆಗಳಿಗೆ ವೇದಿಕೆ ಕಲ್ಪಿಸುತ್ತಿವೆ. ಸ್ಟಾರ್ಟ್‌ ಅಪ್‌ ಆರಂಭಿಸಲು ಬೇಕಾಗುವ ಅವಶ್ಯ ಅನುದಾನ ಮತ್ತು ಇನ್ನಿತರ ಸಹಾಯಗಳನ್ನು ಮಾಡಿಕೊಡುತ್ತಿವೆ. ಈ ಎಲ್ಲಾ ಕಾರಣ ಗಳಿಂದ ವಿದ್ಯಾರ್ಥಿಗಳ ಮೊದಲ ಆಯ್ಕೆ ಬೆಂಗ ಳೂರು ಇರಲಿದೆ ಎಂಬುದರಲ್ಲಿ ಅನುಮಾನವಿಲ್ಲ. ಇದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಹಲವಾರು ರೀತಿಯಲ್ಲಿ ಸಮಸ್ಯೆಯಾಗಲಿದೆ ಎಂದು ತಜ್ಞರು ಹೇಳುತ್ತಾರೆ.

ಭಾರತವು ಪ್ರತಿ ಕ್ಷೇತ್ರದಲ್ಲಿಯೂ ಪ್ರಾದೇಶಿಕವಾಗಿ ವೈವಿಧ್ಯತೆ ಹೊಂದಿದೆ. ಇದನ್ನು ಕೇಂದ್ರೀಕರಣ ಮಾಡು ವುದು ಸರಿ ಯಲ್ಲ. “ಒಂದು ದೇಶ, ಒಂದು ಪರೀಕ್ಷೆ’ ಯಿಂದ ಸ್ಥಳೀಯ ರಿಗೆ ಹಾಗೂ ಅವಕಾಶ ವಂಚಿತ ಸಮು ದಾಯಗಳು ಮತ್ತಷ್ಟು ಅವಕಾಶ ವಂಚಿತ ರಾಗ ಲಿದ್ದಾರೆ ಎನ್ನುತ್ತಾರೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಎಸ್‌. ಜಾಫೆಟ್‌.

ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿದೆ: ಕೇಂದ್ರ ಸರ್ಕಾರವು ರಾಜ್ಯ ಗಳಿಗೂ ಅಧಿಕಾರ ನೀಡಬೇಕು. ಕೇಂದ್ರದಿಂದಲೇ ಎಲ್ಲವನ್ನೂ ನಿರ್ವಹಿಸುವ ವ್ಯವಸ್ಥೆ ಮಾರಕ ವಾಗಲಿದೆ. ಉದಾಹರಣೆಗೆ: ನ್ಯಾಷನಲ್‌ ಲಾ ಸ್ಕೂಲ್‌ಗ‌ಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಕ್ಲಾಟ್‌) ಪರೀಕ್ಷೆಯಲ್ಲಿ ಕಳೆದ 25 ವರ್ಷಗಳಲ್ಲಿ ಕನ್ನಡಿಗರ ಆಯ್ಕೆ ಬೆರಳೆಣಿಕೆ ಯಷ್ಟಿದೆ. ಹೀಗಾಗಿ ಕನ್ನಡಿಗರಿಗೆ ಶೇ.25ರಷ್ಟು ಮೀಸ ಲಾತಿ ನೀಡುವ ಕಾನೂನು ತರಲಾಯಿತು. ಇದರಿಂದ ಸ್ಥಳೀಯ ವಿದ್ಯಾರ್ಥಿ ಗಳಿಗೆ ಅವಕಾಶ ಸಿಕ್ಕಿತು. ಇದು ಕೇವಲ ಒಂದು ಪರೀಕ್ಷೆಗೆ ಸೀಮಿತವಾಗಿಲ್ಲ. ಪ್ರಾಧ್ಯಾಪಕರ ನೇಮಕಾತಿಗೆ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್‌), ಬ್ಯಾಂಕಿಂಗ್‌, ರೈಲ್ವೆ ನೇಮಕಾತಿ ಪರೀಕ್ಷೆ ಸೇರಿದಂತೆ ಸಾರ್ವತ್ರಿಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗಲಿದೆ ಎಂದು ಹೇಳುತ್ತಾರೆ.

ರಾಜ್ಯಮಟ್ಟದಲ್ಲಿ ಪರೀಕ್ಷೆ ನಡೆಯಲಿ: ರಾಷ್ಟ್ರ ಮಟ್ಟ ದ ಬದಲಾಗಿ ರಾಜ್ಯಮಟ್ಟದಲ್ಲಿ ಪರೀಕ್ಷೆ ನಡೆಸುವುದರಿಂದ ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಸೌಲಭ್ಯ ಸಿಗುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು ಅನುಕೂಲವಾಗಲಿದೆ. ರಾಷ್ಟ್ರ ಮಟ್ಟದಲ್ಲಿ ಪರೀಕ್ಷೆ ನಡೆಸುವುದರಿಂದ ನಮ್ಮ ಸಂಪನ್ಮೂಲವಾಗಿ ಬೇರೆಯವರಿಗೆ ಬಿಟ್ಟುಕೊಟ್ಟು, ರಾಜ್ಯಕ್ಕೆ ಅನ್ಯಾಯ ಮಾಡಿಕೊಂಡಂತೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯಬೇಕಿದೆ. ಅದರಲ್ಲಿಯೂ ಫ‌ಲಾನುಭವಿಗಳಾದ ವಿದ್ಯಾರ್ಥಿಗಳು, ಪೋಷಕರು, ಜನಸಾಮಾನ್ಯರು, ಪ್ರಾಧ್ಯಾಪಕರು, ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಮೊದಲು ದೊಡ್ಡ ಮಟ್ಟದಲ್ಲಿ ಚರ್ಚೆಗಳು ನಡೆಸಬೇಕಿದೆ. ದಿಢೀರ್‌ ಏಕಮುಖ ನಿರ್ಧಾರ ಕೈಗೊಳ್ಳುವುದು ಉತ್ತಮ ನಿರ್ಧಾರವಲ್ಲ ಎಂಬುದು ತಜ್ಞರ ಅಭಿಮತ.

ಯಾವುದೇ ವಿಶ್ವವಿದ್ಯಾಲಯವು ತನ್ನ ಸುತ್ತಲಿನ ಪ್ರದೇಶದ ಅಗತ್ಯತೆಗಳಿಗೆ ಇರಬೇಕು. ಒಂದು ವೇಳೆ ಸಾರ್ವತ್ರಿಕರಣ ಗೊಳಿಸಿದರೆ, ಸ್ವಾಯತ್ತತೆ ಹಾಳಾಗುವ ಜೊತೆಗೆ ತನ್ನದೇ ಅಸ್ಮಿತೆ ಕಳೆದು ಕೊಳ್ಳಲಿದೆ. ಸಾಮಾನ್ಯ ಪ್ರವೇಶ ಪರೀಕ್ಷೆ, ಸಾಮಾನ್ಯ ಪಠ್ಯಕ್ರಮ, ಸಾಮಾನ್ಯ ಬೋಧನಾ ಸಿಬ್ಬಂದಿ… ಹೀಗೆ ಎಲ್ಲವೂ ಸಾಮಾನ್ಯ ಮಾಡುವುದಾದರೆ, ವಿವಿಗಳು ಏಕೆ ಬೇಕು. ವಿವಿ ಗಳನ್ನು ಉನ್ನತ ಶಿಕ್ಷಣದ ಒಂದು ಭಾಗ ಮಾಡಿಬಿಡಿ ಸಾಕು ಎಂದು ಅಸಮಾಧಾನ ವ್ಯಕ್ತಪಡಿಸುತ್ತಾರೆ ಬೆಂ.ವಿವಿ ವಿಶ್ರಾಂತ ಕುಲಪತಿ ಡಾ. ಎಂ.ಎಸ್‌. ತಿಮ್ಮಪ್ಪ .

ಸ್ಥಳೀಯರಿಗೆ ಕೈತಪ್ಪಲಿಗೆ ಸೀಟುಗಳು: ರಾಷ್ಟ್ರ ಮಟ್ಟದಲ್ಲಿ ಪ್ರವೇಶ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಪ್ಲೇಸ್‌ಮೆಂಟ್‌ ಇರುವ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಉತ್ತಮ ಪ್ಲೇಸ್‌ ಮೆಂಟ್‌ ಇರುವ ಕಾಲೇಜುಗಳು ಹೆಚ್ಚಿನ ಅಂಕ ಪಡೆಯುವವರ ಪಾಲಾಗಲಿವೆ. ವಿಶ್ವವಿದ್ಯಾಲಯದ ಮಟ್ಟದ ಪರೀಕ್ಷೆಗಳನ್ನು ನಡೆಸಿದರೆ, ಸ್ಥಳೀಯ ವಿದ್ಯಾರ್ಥಿಗಳು ಮಾತ್ರ ಸ್ಪರ್ಧಿಸುತ್ತಾರೆ. ಸಿಯುಇಟಿ ಆರಂಭವಾದರೆ, ದೇಶಾದ್ಯಂತ ವಿದ್ಯಾರ್ಥಿಗಳು ಒಂದೇ ವೇದಿಕೆಗೆ ಬರಲಿದ್ದಾರೆ. ಇದರಿಂದ ಉನ್ನತ ಶಿಕ್ಷಣದಲ್ಲಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮತ್ತು ಗುಣಮಟ್ಟದ ವ್ಯಾಸಂಗ ಇರದ ರಾಜ್ಯದ ವಿದ್ಯಾರ್ಥಿಗಳು ಬೆಂಗಳೂರಿನತ್ತ ವಲಸೆ ಬರುತ್ತಾರೆ. ಇದರಿಂದ ರಾಜ್ಯದ ವಿದ್ಯಾರ್ಥಿಗಳು ಅವಕಾಶ ವಂಚಿತರಾಗಲಿದ್ದಾರೆ ಎಂದು ತಜ್ಞರು ಹೇಳುತ್ತಾರೆ.

-ಎನ್‌.ಎಲ್‌.ಶಿವಮಾದು

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.