ಭದ್ರಾ ಮೇಲ್ದಂಡೆ ಯೋಜನೆಗೆ ಮಂಜೂರಾತಿ ನೀಡಿದ್ದೇ ನಾವು

ಕೆಲವರಿಂದ ವಿನಾಕಾರಣ ಅಪಪ್ರಚಾರ: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಬೇಸರ

Team Udayavani, Apr 14, 2022, 5:50 PM IST

kumaraswamy

ಹರಿಹರ: ನಾನು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ, ಹರಿಹರದಿಂದ ಜಗಳೂರಿಗೆ ನದಿ ನೀರು ಪೂರೈಕೆ ಸೇರಿದಂತೆ ಹಲವು ನೀರಾವರಿ ಹಾಗೂ ಜನಪರ ಯೋಜನೆ ಜಾರಿಗೊಳಿಸಲಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ತಾಲೂಕಿನ ಬನ್ನಿಕೋಡು ಗ್ರಾಮದ ಊರಮ್ಮನ ಹಬ್ಬದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ ತಮ್ಮ ಅವಧಿಯಲ್ಲೆ ಮಂಜೂರಾತಿ ನೀಡಲಾಗಿದೆ. ಆದರೆ ಕೆಲವರು ತಾವೇ ಮಾಡಿದ್ದಾಗಿ ಪ್ರಚಾರ ಪಡೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಹರಿಯುತ್ತಿರುವ ನಮ್ಮ ನದಿಗಳ ನೀರನ್ನು ನಮಗಿಂತ ನೆರೆಯ ರಾಜ್ಯಗಳೇ ಹೆಚ್ಚು ಉಪಯೋಗ ಮಾಡಿಕೊಳ್ಳುತ್ತಿವೆ. ಇಂದಿನ ಸರ್ಕಾರಗಳ ನಡವಳಿಕೆ, ನೀರಾವರಿಗೆ ಹಣ ಹಂಚಿಕೆ ಮಾಡುತ್ತಿರುವುದನ್ನು ನೋಡಿದರೆ ಇನ್ನೂ ನೂರು ವರ್ಷವಾದರೂ ನಮ್ಮ ರಾಜ್ಯ ನಿರೀಕ್ಷಿತ ಗುರಿ ಸಾಧಿಸಲು ಸಾಧ್ಯವಿಲ್ಲ ಎಂದರು.

ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್‌ ಮಾತನಾಡಿ, ಜೆಡಿಯು ಮತ್ತು ಜೆಡಿಎಸ್‌ ಇಬ್ಭಾಗವಾಗಿದ್ದರಿಂದ ಮೂರನೇ ಪಕ್ಷಕ್ಕೆ ಶಕ್ತಿ ಬಂದಿದೆ. ಇವೆರಡೂ ಪಕ್ಷಗಳನ್ನು ಒಗ್ಗೂಡಿಸಲು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಹಾಗೂ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮಧ್ಯೆ ಮಾತುಕತೆಗೆ ಪ್ರಯತ್ನಿಸುತ್ತಿದ್ದೇನೆ. ಇಂದು ನಾನು ಮತ್ತು ಕುಮಾರಣ್ಣ ಸೇರುವ ಮೂಲಕ ಮಾತುಕತೆಗೆ ವೇದಿಕೆ ಸಿದ್ಧವಾಗಿದೆ ಎಂದು ಹೇಳಿದರು.

ಮಾಜಿ ಶಾಸಕ ಎಚ್.ಎಸ್. ಶಿವಶಂಕರ್‌ ಮಾತನಾಡಿ, ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಕುಮಾರಣ್ಣ ಮತ್ತೆ ಸಿಎಂ ಆಗುವ ಮುನ್ಸೂಚನೆ ಕಾಣುತ್ತಿದೆ. ಧರ್ಮಗಳ ಮಧ್ಯೆ ಕಂದಕ ಸೃಷ್ಟಿಸುವ ಕೆಟ್ಟ ರಾಜಕಾರಣದಿಂದ ಜನತೆ ಬೇಸತ್ತಿದ್ದಾರೆ. ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ತಮ್ಮ ಅವಧಿಯಲ್ಲಿ ತಾಲೂಕಿನ ಅಭಿವೃದ್ಧಿಗೆ 400 ಕೋಟಿಗೂ ಅಧಿಕ ಅನುದಾನ ತಂದು ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾಗಿ ತಿಳಿಸಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಚೌಡರೆಡ್ಡಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಮುಖಂಡರಾದ ಅಮಾನುಲ್ಲಾ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೀಲಾಕುಮಾರಿ, ಎಚ್‌. ಎಸ್.ಅರವಿಂದ, ದಾವಣಗೆರೆ ಮಹಾನಗರ ಪಾಲಿಕೆ ಮಾಜಿ ಮಹಾಪೌರ ಅಜಯ್‌ಕುಮಾರ್‌ ಬಿ.ಜಿ., ಗ್ರಾಮಸ್ಥರಾದ ಬಸವರಾಜ್‌, ಸುಭಾಷ್‌ ಇದ್ದರು.

 

 

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.