ಜಾತ್ರೆಯಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಿ

ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದ ಸಭೆ

Team Udayavani, Apr 14, 2022, 4:33 PM IST

20

ಕೊಪ್ಪಳ: ಜಿಲ್ಲೆಯ ಹುಲಿಗಿ ಗ್ರಾಮದಲ್ಲಿ ಮೇ 23ರಿಂದ 27 ರವರೆಗೆ ನಡೆಯಲಿರುವ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಸಾರ್ವಜನಿಕರ ಹಿತದೃಷ್ಟಿಯಿಂದ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್‌-19 ಕಾರಣದಿಂದ ಎರಡು ವರ್ಷಗಳಿಂದ ಜಾತ್ರೆಯನ್ನು ಸರಳ ಹಾಗೂ ಸಾಂಪ್ರದಾಯಿಕ ಆಚರಣೆಗೆ ಸೀಮಿತಗೊಳಿಸಲಾಗಿತ್ತು. ಆದರೆ ಪ್ರಸ್ತುತ ಕೋವಿಡ್‌ -19 ಸೋಂಕಿನ ಹರಡುವಿಕೆ ಪ್ರಮಾಣ ಕಡಿಮೆ ಇರುವುದರಿಂದ ಸುಮಾರು ಐದು ಲಕ್ಷ ಜನರು ಜಾತ್ರೆಗೆ ಆಗಮಿಸುವ ನಿರೀಕ್ಷೆ ಇದೆ. ಆದ್ದರಿಂದ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಸಹಕಾರದೊಂದಿಗೆ ಜಾತ್ರೆಗೆ ಆಗಮಿಸುವ ಎಲ್ಲ ಭಕ್ತರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಜಾತ್ರೆಯಲ್ಲಿ ಪ್ರಾಣಿ ಬಲಿ, ಪ್ರಾಣಿ ಹತ್ಯೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಹುಲಗಿ ಗ್ರಾಮದ ಯಾವುದೇ ಪ್ರದೇಶದಲ್ಲಿ ಹರಕೆ ಹೆಸರಲ್ಲಿ ಪ್ರಾಣಿ ಹತ್ಯೆ ಮಾಡಬಾರದು. ಇಂತಹ ಪ್ರಕರಣಗಳು ಕಂಡುಬಂದರೆ ಸಂಬಂಧಿಸಿದವರ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು. ಈ ಕುರಿತು ಜಾತ್ರೆಗೆ ಆಗಮಿಸುವ ಎಲ್ಲ ಸಾರ್ವಜನಿಕ ಭಕ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಅಲ್ಲಲ್ಲಿ ಪೋಸ್ಟರ್‌, ಧ್ವನಿವರ್ಧಕಗಳ ಮೂಲಕ ಪ್ರಾಣಿ ಬಲಿ ನಿಷೇಧದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ಜಾತ್ರೆಯಲ್ಲಿ ಅತಿಹೆಚ್ಚಿನ ಜನರು ಭಾಗವಹಿಸುವುದರಿಂದ ಅವರಿಗೆ ಅಲ್ಲಲ್ಲಿ ಅರವಟಿಗೆ, ಆರ್‌ಒ ಪ್ಲಾಂಟ್‌ ಮೂಲಕ ಶುದ್ಧ ಕುಡಿಯುವ ನೀರು, ಯಾತ್ರಿ ನಿವಾಸದಲ್ಲಿ ವಸತಿ, ತಾತ್ಕಾಲಿಕ ಶೌಚ ಗೃಹಗಳು, ವಾಹನಗಳ ನಿಲುಗಡೆ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಲಭ್ಯವಿರುವ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ. ಕಾರ್ಯಕ್ರಮದ ವೇಳೆ ಸೇರಬಹುದಾದ ಜನಸಂಖ್ಯೆಗೆ ಅನುಗುಣವಾಗಿ ಸೂಕ್ತ ಕ್ರಮಗಳನ್ನು ಪಟ್ಟಿ ಮಾಡಿ. ಲಕ್ಷಗಟ್ಟಲೆ ಜನ ಒಂದೆಡೆ ಸೇರುವುದರಿಂದ ಸಾಂಕ್ರಾಮಿಕ ರೋಗ, ಕೋವಿಡ್‌-19 ಹರಡುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಅಲ್ಲಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ, ಕಾರ್ಯಕರ್ತರು, ವೈದ್ಯರು ಮುಂಜಾಗ್ರತಾ ಕ್ರಮವಾಗಿ ವೈದ್ಯಕೀಯ ಸೌಲಭ್ಯ ಒದಗಿಸಲು ಯೋಜನೆ ರೂಪಿಸಬೇಕು. ಕಡ್ಡಾಯವಾಗಿ ಆಂಬ್ಯುಲೆನ್ಸ್‌ಗಳನ್ನು ಒದಗಿಸಬೇಕು ಎಂದರು.

ಮಹಿಳೆಯರು ತಮ್ಮ ಚಿನ್ನಾಭರಣಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವಂತೆ, ಮುಖ್ಯವಾಗಿ ನದಿಯ ಸ್ನಾನಘಟ್ಟದಲ್ಲಿ ಹೆಚ್ಚಿನ ಜಾಗರೂಕತೆ ವಹಿಸುವಂತೆ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಿ. ವಾಹನಗಳ ನಿಲುಗಡೆಗೆ ದೇವಸ್ಥಾನದ ಹತ್ತಿರ ಹಾಗೂ ಗ್ರಾಮದ ಹೊರವಲಯಗಳಲ್ಲಿ ನಿರ್ದಿಷ್ಟ ಪ್ರದೇಶ ಗುರುತಿಸಿ, ವ್ಯವಸ್ಥಿತ ವಾಹನ ನಿಲುಗಡೆಗೆ ಕ್ರಮ ಕೈಗೊಳ್ಳಿ. ಜಾತ್ರೆ ವೇಳೆ ಜಿಲ್ಲೆಯಲ್ಲಿರುವ ಪೊಲೀಸ್‌ ಸಿಬ್ಬಂದಿಯೊಂದಿಗೆ ಗೃಹರಕ್ಷಕ ದಳದಿಂದ ಹೆಚ್ಚಿನ ಪ್ರಮಾಣದ ಸಿಬ್ಬಂದಿಯನ್ನು ಒದಗಿಸಲಾಗುತ್ತದೆ. ಆದ್ದರಿಂದ ಯಾವುದೇ ಅಹಿತಕರ ಘಟನೆ ಅಥವಾ ಅವಘಡಗಳು ಸಂಭವಿಸದಂತೆ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಜಾತ್ರೆ ನಡೆಯುವ ಐದು ದಿನಗಳೂ ಸಾರ್ವಜನಿಕರಿಗೆ ಅನುಕೂಲವಾಗುವ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ, ಸೂಕ್ತ ನಿಗಾ ವಹಿಸಬೇಕು. ಸಾರಿಗೆ ಇಲಾಖೆಯಿಂದ ಜಾತ್ರೆಯ ಅಂಗವಾಗಿ ಹುಲಿಗೆ ಗ್ರಾಮಕ್ಕೆ ತೆರಳಲು ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ ಗಳನ್ನು ಒದಗಿಸಬೇಕು. ಈ ಬಾರಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸೂಕ್ತ ನೆರಳಿನ ವ್ಯವಸ್ಥೆ ಕಲ್ಪಿಸಬೇಕು. ದೇವಸ್ಥಾನ ಹಾಗೂ ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ಸ್ವತ್ಛತೆ ಕಾಪಾಡುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಎಡಿಸಿ ಎಂ.ಪಿ. ಮಾರುತಿ, ಎಸ್ಪಿ ಅರುಣಾಂಗ್ಸು ಗಿರಿ, ಪ್ರೊಬೇಷನರಿ ಐಎಎಸ್‌ ಅಧಿಕಾರಿ ಹೇಮಂತ್‌ ಕುಮಾರ್‌, ಹುಲಿಗೆಮ್ಮ ದೇವಿ ದೇವಸ್ಥಾನದ ಸಿಇಒ ಅರವಿಂದ ಸುತಗುಂಡಿ, ಡಿಎಚ್‌ಒ ಡಾ| ಅಲಕನಂದಾ ಮಳಗಿ, ತಹಶೀಲ್ದಾರ್‌ ಅಮರೇಶ ಬಿರಾದಾರ, ಸಿಪಿಐ ವಿಶ್ವನಾಥ ಹಿರೇಗೌಡರ್‌, ಡಿಎಸ್‌ ಬಿಯ ಪಿಐ ವಿ. ನಾರಾಯಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.