ತೆರವುಗೊಳ್ಳುವ ಶಾಲೆಗೆ ಪರ್ಯಾಯ ವ್ಯವಸ್ಥೆ ಆಗಿಲ್ಲ

ರೈಲ್ವೆ ನಿಲ್ದಾಣಕ್ಕಾಗಿ ತೆರವಾಗಲಿವೆ ಶಾಲೆ-ಅಂಗನವಾಡಿ

Team Udayavani, Apr 14, 2022, 4:52 PM IST

21

ಕುಷ್ಟಗಿ: ಪಟ್ಟಣದ ಹೊರವಲಯದ ಸಂತ ಶಿಶುನಾಳ ಶರೀಫ್‌ ನಗರದ ಬಳಿ ಗದಗ-ವಾಡಿ ವಿದ್ಯುತ್‌ ಲೈನ್‌ ರೈಲು ಮಾರ್ಗದ ಉದ್ದೇಶಿತ ರೈಲು ನಿಲ್ದಾಣ ನಿರ್ಮಾಣಕ್ಕಾಗಿ ಈಗಾಗಲೇ ಭೂಮಿ ಸ್ವಾಧೀನಗೊಂಡಿದೆ. ಇದರ ವ್ಯಾಪ್ತಿಯಲ್ಲಿ ಮನೆ ಕಳೆದುಕೊಳ್ಳುವವರಿಗೆ ಪರಿಹಾರವೂ ಸಿಕ್ಕಿದೆ. ಆದರೆ ತೆರವುಗೊಳ್ಳಲಿರುವ ಸರ್ಕಾರಿ ಶಾಲಾ ಕಟ್ಟಡ ಹಾಗೂ ಅಂಗನವಾಡಿ ಕೇಂದ್ರಕ್ಕೆ ಇದುವರೆಗೂ ಯಾವುದೇ ಪರ್ಯಾಯ ಕ್ರಮವಾಗಿಲ್ಲ.

ಈ ಭಾಗದ ಮಹತ್ವಾಕಾಂಕ್ಷಿ ನೈರುತ್ಯ ವಲಯದ ರೈಲ್ವೆ ಯೋಜನೆ 257 ಕಿ.ಮೀ. ಇದ್ದು, 2,841 ಕೋಟಿ ರೂ. ವೆಚ್ಚದ ಯೋಜನೆಯಾಗಿದೆ. ಪಟ್ಟಣದಲ್ಲಿ 2.02 ಕೋಟಿ ರೂ. ಅಂದಾಜು ವೆಚ್ಚದಲ್ಲಿ ರೈಲು ನಿಲ್ದಾಣ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಕುಷ್ಟಗಿ ವ್ಯಾಪ್ತಿಯ ಸಂತ ಶಿಶುನಾಳ ಶರೀಫ್‌ ನಗರ ಹಾಗೂ ಮಾರುತಿ ನಗರದ ನಡುವಿನೆ 1.04 ಕಿ.ಮೀ. ಉದ್ದ ಹಾಗೂ 35-80 ಮೀಟರ್‌ ಅಗಲ ರೈಲ್ವೆ ನಿಲ್ದಾಣ ನಿರ್ಮಿಸಲು ಜಾಗೆ ಗುರುತಿಸಲಾಗಿದೆ.

ಈ ಜಾಗೆಯಲ್ಲಿ 35 ಮನೆಗಳು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ನಿರ್ಮಾಣ ಹಂತದ ಅಂಗನವಾಡಿ ಕಟ್ಟಡ ಇದೆ. ಈಗಾಗಲೇ ಮನೆ ಕಳೆದುಕೊಂಡವರಿಗೆ ತಲಾ 3 ಲಕ್ಷ ರೂ. ಪರಿಹಾರ ಸಿಕ್ಕಿದೆ. ಶಾಲೆ ಹಾಗೂ ಅಂಗನವಾಡಿ ಕೇಂದ್ರಕ್ಕೆ ಇಲ್ಲಿವರೆಗೂ ರೈಲ್ವೇ ಇಲಾಖೆ, ತಾಲೂಕಾಡಳಿತದಿಂದ ಯಾವೂದೇ ಮುನ್ಸೂಚನೆ ಬಂದಿಲ್ಲ.

ರೈಲ್ವೆ ಇಲಾಖೆಯವರು ಕೆಲವು ಮನೆಗಳು, ಶಾಲೆ, ಅಂಗನವಾಡಿ ಕೇಂದ್ರ ಇಲಾಖೆ ಪರಿಮಿತಿಯಲ್ಲಿವೆ ಎನ್ನುತ್ತಿದ್ದಾರೆ. ಇಲ್ಲಿ ರೈಲು ನಿಲ್ದಾಣವಾದರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮಾರುತಿ ನಗರ ಇಲ್ಲವೇ ಕೃಷ್ಣಗಿರಿ ಸರ್ಕಾರಿ ಶಾಲೆಯಲ್ಲಿ ವಿಲೀನಗೊಳಿಸಬೇಕೆ? ಎನ್ನುವ ಬಗ್ಗೆ ಚರ್ಚೆ ನಡೆದಿದೆ. ಆದರೆ ಸಂತ ಶಿಶುನಾಳ ಶರೀಫ್‌ ನಗರದ ನಿವಾಸಿಗಳಿಂದ ನಮ್ಮ ಬಡಾವಣೆಗೆ ಹೊಂದಿಕೊಂಡಿರುವ ಜಮೀನು ಖರೀ ದಿಸಿ ಶಾಲೆ, ಅಂಗನವಾಡಿ ನಿರ್ಮಿಸುವ ಬೇಡಿಕೆ ವ್ಯಕ್ತವಾಗಿದೆ.

ರೈಲು ನಿಲ್ದಾಣದಿಂದ ಶಾಲೆ ಸ್ಥಳಾಂತರ ಬಗ್ಗೆ ಮಾಹಿತಿ ಇಲ್ಲ. ಕೂಡಲೇ ಮಾಹಿತಿ ತರಿಸಿಕೊಂಡು, ಪರಿಶೀಲಿಸಿ ಹೊಸ ಶಾಲೆ ನಿರ್ಮಾಣಕ್ಕಾಗಿ ಮೇಲಾಧಿಕಾರಿಗಳಲ್ಲಿ ಪ್ರಸ್ತಾಪಿಸುವೆ. –ಸುರೇಂದ್ರ ಕಾಂಬ್ಳೆ, ಕ್ಷೇತ್ರ ಶಿಕ್ಷಣಾಧಿಕಾರಿ

ಅಲೆಮಾರಿ ಬುಡಕಟ್ಟು ಸಮುದಾಯದ ಜನರ ಹೋರಾಟದ ಹಿನ್ನೆಲೆಯಲ್ಲಿ ಈ ಜಾಗೆ ಬಂದಿದೆ. ರೈಲು ಮಾರ್ಗ, ನಿಲ್ದಾಣಕ್ಕಾಗಿ ಇಲಾಖೆಯ ಸೂಚನೆಯಂತೆ 35 ಮನೆಗಳನ್ನು ಬಿಟ್ಟುಕೊಟ್ಟಿದ್ದೇವೆ. ಶಾಲೆ, ಅಂಗನವಾಡಿ ಕೇಂದ್ರಕ್ಕೆ ಹೊಸ ಜಾಗೆ ಖರೀದಿ ಸುವ ಬಗ್ಗೆ ಇಲ್ಲಿವರೆಗೂ ಚಕಾರವೆತ್ತಿಲ್ಲ. 70 ಮಕ್ಕಳಿರುವ ಶಾಲೆಗಾಗಿ ಬಡಾವಣೆಗೆ ಹೊಂದಿಕೊಂಡಿರುವ ಜಮೀನು ಖರೀದಿಧಿಸಿ, ಅಲ್ಲಿಯೇ ಶಾಲೆ, ಅಂಗನವಾಡಿ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. –ಮಹಿಬೂಬಸಾಬ್‌ ಮದಾರಿ, ಶಾಲೆ ಎಸ್‌ಡಿಎಂಸಿ ಅಧ್ಯಕ್ಷ

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.