ಬೆಲೆ ಏರಿಕೆ, ದುರಾಡಳಿತವನ್ನು ಜನರ ಮನೆ ಮನೆಗೆ ಕೊಂಡೊಯ್ಯಲಿದ್ದೇವೆ: ಎಂ.ಡಿ ಲಕ್ಷ್ಮಿನಾರಾಯಣ
ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ನಡಿಗೆ ಜನರ ಕಡೆಗೆ ಕಾರ್ಯಕ್ರಮ
Team Udayavani, Apr 14, 2022, 6:20 PM IST
ಬೆಂಗಳೂರು: ಬೆಲೆ ಏರಿಕೆ ಹಾಗೂ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರದ ದುರಾಡಳಿತವನ್ನು ಜನರ ಮನೆ ಮನೆಗೆ ತಲುಪಿಸುವ ಮೂಲಕ ಜಾಗೃತಿ ಮೂಡಿಸಲಿದ್ದೇವೆ. ಸಚಿವ ಈಶ್ವರಪ್ಪನವರನ್ನು ಮಂದುವರೆಸಿದಲ್ಲಿ ರಾಜ್ಯದ ಜನರೇ ಬುದ್ದಿ ಕಲಿಸಿಲಿದ್ದಾರೆ ಎಂದು ಕೆಪಿಸಿಸಿ ಓಬಿಸಿ ಘಟಕದ ಅಧ್ಯಕ್ಷರಾದ ಎಂ.ಡಿ ಲಕ್ಷ್ಮಿನಾರಾಯಣ ಹೇಳಿದರು.
ನಗರದ ಯಶವಂತಪುರ ವಿಧಾನಸಭಾ ವ್ಯಾಪ್ತಿಯಲ್ಲಿ ಬಾಲ್‌ರಾಜ್ ಗೌಡ ಎಸ್ ಅವರ ಉಸ್ತುವಾರಿಯಲ್ಲಿ ನಡೆದ ನಮ್ಮ ನಡಿಗೆ ಜನರ ಕಡೆಗೆ – ಸದಸ್ಯತ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಸರಕಾರದ ದುರಾಡಳಿತ ಹೆಚ್ಚಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ ಕೆ.ಜೆ ಜಾರ್ಜ್ ಅವರ ಮೇಲೆ ಹರಿಹಾಯ್ದಿದ್ದ ಪಕ್ಷದವರು ಈಗ ಬಾಯಿಗೆ ಬೀಗ ಹಾಕಿಕೊಂಡಿದ್ದಾರೆ. ಆತ್ಮಹತ್ಯೆ ನಂತರ ಸಂತೋಷ್ ಮೊಬೈಲ್‌ನಿಂದ ಬಂದಂತಹ ಮೇಸೇಜ್‌ನಲ್ಲಿ ಸಚಿವ ಈಶ್ವರಪ್ಪನವರ ಹೆಸರು ಇದೆ. ಅಲ್ಲದೆ, ಅವರ ಮೇಲೆ ಏಫ್‌ಐಆರ್ ಕೂಡಾ ದಾಖಲಾಗಿದೆ. ಈ ಹಿನ್ನೆಲೆಯಲಿ ಈಗಾಗಲೇ ರಾಜೀನಾಮೆ ಕೊಡಬೇಕಾಗಿತ್ತು. ಭಂಡತನ ತೋರಿಸುತ್ತಿರುವ ಸಚಿವ ಈಶ್ವರಪ್ಪನವರು 2019 ರಿಂದ ಇಲ್ಲಿಯವರೆಗೆ ನೀಡಿರುವ ಅನುದಾನದ ಬಗ್ಗೆ ನ್ಯಾಯಾಧೀಶರಿಂದ ತನಿಖೆ ಮಾಡಿಸಿದಲ್ಲಿ ಹಗರಣದ ತೀವ್ರತೆ ತಿಳಿಯಲಿದೆ. ರಾಜೀನಾಮೆ ನೀಡದೇ ಇದ್ದಲ್ಲಿ ರಾಜ್ಯದ ಮತದಾರರು ಸ್ಪಷ್ಟವಾದ ಉತ್ತರ ನೀಡಲಿದ್ದಾರೆ ಎಂದರು.
ಯಶವಂತಪುರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಬಾಲ್‌ರಾಜ್ ಗೌಡ.ಎಸ್ ಮಾತನಾಡಿ ಬೆಂಗಳೂರು ವ್ಯಾಪ್ತಿಯಲ್ಲಿರುವ ಅತಿದೊಡ್ಡ ವಿಧಾನಸಭಾ ಕ್ಷೇತ್ರವಾಗಿರುವ ಯಶವಂತಪುರದಲ್ಲಿ ನಮ್ಮ ನಡಿಗೆ ಜನರ ಕಡೆಗೆ ಎನ್ನುವ ಕಾರ್ಯಕ್ರಮದ ಮೂಲಕ ಜನರ ಮನೆ ಮನೆಗೆ ಬಿಜೆಪಿಯ ದುರಾಡಳಿತ ಹಾಗೂ ಬೆಲೆ ಏರಿಕೆಯಂತಹ ವಿಷಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಲ್ಲದೇ, ಇದೇ ಸಂಧರ್ಭದಲ್ಲಿ ಕಾಂಗ್ರೆಸ್ ಸದಸ್ಯತ್ವ ಕಾರ್ಯಕ್ರಮವನ್ನೂ ನಡೆಸಲಾಗುತ್ತಿದ್ದು, ಹೆಚ್ಚಿನ ಜನರನ್ನು ಸದಸ್ಯರನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದರು.
ಬಿಜೆಪಿಯ ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದು ಮುಂದಿನ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ನತ್ತ ಒಲವು ತೋರಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ನಿಶಾಲ್ ಚಾರಿಟೇಬಲ್ ಟ್ರಸ್ಟ್‌ನ ನಿರ್ದೇಶಕ ನಿಖಿಲ್ ಗೌಡ ಎಸ್.ಬಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.