ಬೆಳಗಾವಿ: ಸಿಡಿಲು ಬಡಿದು ಮಗ ಸಾವು, ತಾಯಿ ಗಂಭೀರ
Team Udayavani, Apr 14, 2022, 8:20 PM IST
ಬೆಳಗಾವಿ: ನಗರ ಸೇರಿದಂತೆ ತಾಲೂಕಿನ ವಿವಿಧ ಕಡೆಗಳಲ್ಲಿ ಸುರಿದ ಗುಡುಗು-ಸಿಡಿಲು ಮಿಶ್ರಿತ ಧಾರಾಕಾರ ಮಳೆ ಸುರಿದಿದ್ದು, ತಾಲ್ಲೂಕಿನ ತುಮ್ಮರಗುದ್ದಿಯಲ್ಲಿ ಸಿಡಿಲು ಬಡಿದು ಮಗ ಮೃತಪಟ್ಟಿದ್ದು, ತಾಯಿ ಗಂಭೀರವಾಗಿ ಗಾಯಗೊಂಡ ದುರ್ಘಟನೆ ಗುರುವಾರ ಸಂಜೆ ನಡೆದಿದೆ.
ತುಮ್ಮರಗುದ್ದಿ ಗ್ರಾಮದ ಭೀಮಪ್ಪ ಅಡಿವೆಪ್ಪ ಬಸರಿಮರದ(25) ಎಂಬ ಯುವಕ ಮೃತಪಟ್ಟಿದ್ದಾನೆ. ತಾಯಿ ಹೊಳಡವ್ವ ಅಡಿವೆಪ್ಪ ಬಸರಿಮರದ(47) ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ತುಮ್ಮರಗುದ್ದಿ ಗ್ರಾಮದ ಹೊರವಲಯದ ಹೊಲದಲ್ಲಿ ಗುಡಿಸಲಿನಲ್ಲಿ ವಾಸಿಸುತ್ತಿದ್ದರು. ತಾಯಿ-ಮಗ ಸೇರಿಂದತೆ ನಾಲ್ಕೈದು ಜನ ಇರುತ್ತಿದ್ದರು. ತಾಯಿ-ಮಗನಿಗೆ ಸಿಡಿಲು ಬಡಿದಿದೆ. ಗಂಭೀರ ಗಾಯಗೊಂಡಿದ್ದ ಇವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮಗ ಮೃತಪಟ್ಟಿದ್ದಾನೆ.
ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಗುಡುಗು-ಸಿಡಿಲು ಮಿಶ್ರಿತ ಗಾಳಿ-ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕೆಲವು ಕಡೆಗೆ ಗಿಡದ ಟೊಂಗೆಗಳು ಮುರಿದು ಬಿದ್ದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.