ಎಪ್ರಿಲ್ 15-16 : ಉತ್ತರ ಕನ್ನಡ ಜಿಲ್ಲೆ ಹಿಲ್ಲೂರಿನಲ್ಲಿ ಆರ್.ಅಶೋಕ್ ಗ್ರಾಮ ವಾಸ್ತವ್ಯ
ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ
Team Udayavani, Apr 14, 2022, 9:15 PM IST
ಬೆಂಗಳೂರು: ಎಪ್ರಿಲ್ 15 ಶುಕ್ರವಾರ ಮತ್ತು 16 ಶನಿವಾರ ಕಂದಾಯ ಸಚಿವ ಆರ್. ಅಶೋಕ್ ಉತ್ತರ ಕನ್ನಡ ಜಿಲ್ಲೆ ಹಿಲ್ಲೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಜನರ ಬಳಿಗೆ ಸರ್ಕಾರವೇ ಬಂದು ಸಮಸ್ಯೆ ಆಲಿಸಬೇಕು ಎನ್ನುವುದು “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದ್ದು, ಕಂದಾಯ ಸಚಿವ ಆರ್ ಅಶೋಕ್ ಅವರೇ ಇದರ ನೇತೃತ್ವವಹಿಸಿ ಈ ಕಾರ್ಯಕ್ರಮವನ್ನು ಮುನ್ನೆಡೆಸುತ್ತಿದ್ದಾರೆ. ಇದು ಆರ್ ಅಶೋಕ್ ಅವರ ಕನಸಿನ ಯೋಜನೆಗಳಲ್ಲಿ ಒಂದಾಗಿದ್ದು, ಈ ಬಾರಿ ಉತ್ತರ ಕನ್ನಡ ಜಿಲ್ಲೆಯ, ಹೊಲನಗದ್ದೆ, ಆಚವೆ, ಹಿಲ್ಲೂರು ಗ್ರಾಮದಲ್ಲಿ ಸಚಿವರು ಸ್ವತಃ ಭಾಗವಹಿಸಲಿದ್ದಾರೆ. ಮೆಟ್ರಿಕ್ ಪೂರ್ವ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಸಚಿವ ಆರ್ ಅಶೋಕ್ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
ಸಂದರ್ಭದಲ್ಲಿ ಸಚಿವರು ಕುಮಟಾ ತಾಲೂಕಿನ ಹೊಲನಗದ್ದೆಯಲ್ಲಿ ಜನಸ್ಪಂದನ, ಕುಂದು ಕೊರತೆಗಳ ಪರಿಶೀಲನೆ, ಹರಿಕಂತ್ರಕೇರಿಗೆ ಭೇಟಿ ನೀಡಿ ಸ್ಥಳೀಯರ ಜೊತೆ ಮಾತುಕತೆ ನಡೆಸಲಿದ್ದಾರೆ.
ನಂತರ ಸಚಿವರು ಬೆಳಿಗ್ಗೆ 11 ಗಂಟೆಗೆ ಅಚವೆ ಊರಿನ ಕುಂಟಗಣಿ ಗ್ರಾಮದ ಶಾಲಾ ಮೈದಾನದಲ್ಲಿ ವಿವಿಧ ಮಳಿಗೆ ಉದ್ಘಾಟನೆ ಮಾಡಿ, ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಂದಾಯ ಇಲಾಖೆ ಹಾಗೂ ಇತರ ಇಲಾಖೆಯ ವತಿಯಿಂದ ವಿವಿಧ ಸೌಲಭ್ಯಗಳ ವಿತರಣೆ ಮಾಡಲಿದ್ದಾರೆ.
ಸಂಜೆ 4ಗಂಟೆಗೆ ಅಡಿಕೆ ತೋಟಗಳಿಗೆ ಭೇಟಿ ನೀಡಿ, ಅಡಿಕೆ ಕೊನೆ ಕೊಯ್ಯುವ ಪ್ರಾತ್ಯಕ್ಷಿಕೆ, ಹಾಲಕ್ಕಿ ಮಹಿಳೆಯರ ಜಾನಪದ ಹಾಡು, ಜೇನುಕೃಷಿ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 7 ಗಂಟೆಗೆ ಸುಗ್ಗಿ, ಪುಗಡಿ , ಯಕ್ಷಗಾನ ಸಹಿತ ಸ್ಥಳೀಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ರಾತ್ರಿ ಹಿಲ್ಲೂರಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳ ಬಿಸಿಎಂ ವಸತಿ ನಿಲಯದಲ್ಲಿ ತಂಗಲಿದ್ದಾರೆ.
16 ನೇ ತಾರೀಖಿನಂದು ಬೆಳಿಗ್ಗೆ ವಸತಿ ನಿಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.
10ಗಂಟೆಗೆ ಯಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮದ ಗೌಳಿ ಕಾಲೋನಿಗೆ ಭೇಟಿ ನೀಡಿ, ಕುಂದುಕೊರತೆಗಳ ಕುರಿತು ಜನರೊಂದಿಗೆ ಸಂವಾದ ನಡೆಸಲಿದ್ದಾರೆ.
ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶಿಲ್ದಾರರು ಸಹ ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಪರಿಹಾರ ಮಾಡಲಿದ್ದಾರೆ. 24 ಗಂಟೆಗಳ ಕಾಲ ಹಳ್ಳಿಯಲ್ಲಿಯೇ ಇದ್ದು ಎಲ್ಲ ಅರ್ಜಿಗಳನ್ನು ಕಡ್ಡಾಯವಾಗಿ ಅಲ್ಲಿಯೇ ವಿಲೇವಾರಿ ಮಾಡುವುದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ವಿಶೇಷತೆ.
ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ದಿನಕರ ಶೆಟ್ಟಿ, ಸುನೀಲ್ ನಾಯ್ಕ್, ರೂಪಾಲಿ ನಾಯ್ಕ್ ಹಾಗೂ ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.