ಕಮಲ ಪಡೆಯಲ್ಲಿ ಶಾಸಕರ ಮೌಲ್ಯಮಾಪನ: ಕ್ಷೇತ್ರಗಳ ವಸ್ತು ಸ್ಥಿತಿ ವರದಿ ಪಡೆಯುತ್ತಿರುವ ಬಿಜೆಪಿ
Team Udayavani, Apr 15, 2022, 6:40 AM IST
ಬೆಂಗಳೂರು: ರಾಜ್ಯ ಬಿಜೆಪಿ 2023ರ ವಿಧಾನಸಭೆ ಚುನಾವಣೆ ಕಾರ್ಯತಂತ್ರ ಆರಂಭಿಸಿದ್ದು, ಸರ್ಕಾರದ ಸಾಧನೆಯ ಪರಾಮರ್ಶೆ ಜೊತೆಗೆ ಶಾಸಕರ ಕಾರ್ಯವೈಖರಿಯ ಪರೀಕ್ಷೆಯನ್ನೂ ನಡೆಸಲಾಗುತ್ತಿದ್ದು, ಮುಂದಿನ ಚುನಾವಣೆಗೆ ಈಗಿನಿಂದಲೇ ಅಭ್ಯರ್ಥಿಗಳನ್ನು ಪತ್ತೆ ಹಚ್ಚಲು ಬಿಜೆಪಿ ಮುಂದಾಗಿದೆ.
ಪ್ರಸ್ತುತ 119 ಶಾಸಕರನ್ನು ಹೊಂದಿರುವ ಬಿಜೆಪಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯಲು ಬೇಕಾದ ಸ್ಥಾನಗಳನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕೆಂಬ ಉದ್ದೇಶದಿಂದ ಟಾರ್ಗೆಟ್ 150 ಮಂತ್ರವನ್ನು ಜಪಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಂದರ್ಭದಲ್ಲಿ ಮುಂದಿನ ಚುನಾವಣೆಗೆ ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳುವುದು ಹಾಗೂ ಕಾರ್ಯತಂತ್ರದ ಬ್ಲೂé ಪ್ರಿಂಟ್ ನೀಡುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ತಿಳಿದು ಬಂದಿದೆ.
ಶಾಸಕರ ಮೌಲ್ಯಮಾಪನ:
ಪ್ರಸ್ತುತ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯ ಸರ್ಕಾರ ಅಧಿಕಾರದಲ್ಲಿದ್ದು, ಬಿಜೆಪಿ ಶಾಸಕರು ಇರುವ ಕ್ಷೇತ್ರಗಳಲ್ಲಿ ಎರಡೂ ಸರ್ಕಾರಗಳ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪಕ್ಷದ ಶಾಸಕರು ಎಷ್ಟರ ಮಟ್ಟಿಗೆ ಶ್ರಮಿಸಿದ್ದಾರೆ. ಹಾಗೂ ಪಕ್ಷದ ಸಂಘಟನೆ ವಿಚಾರದಲ್ಲಿ ಎಷ್ಟು ಸಕ್ರೀಯರಾಗಿದ್ದಾರೆ.
ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ವಿವಿಧ ಸಮುದಾಯಗಳ ಜೊತೆ, ಸಾರ್ವಜನಿಕರ ಜೊತೆ ಶಾಸಕರು ಯಾವ ರೀತಿಯ ಸಂಪರ್ಕ ಇಟ್ಟುಕೊಂಡಿದ್ದಾರೆ ಎನ್ನುವುದನ್ನು ಪಕ್ಷದ ಮುಖಂಡರು ಪರೋಕ್ಷವಾಗಿ ಮೌಲ್ಯಮಾಪನ ನಡೆಸುತ್ತಿದ್ದಾರೆ.
ಶಾಸಕರ ಸಾರ್ವಜನಿಕ ನಡವಳಿಕೆ ಹಾಗೂ ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರ ಜೊತೆ ಬೆರೆಯುವ ಕುರಿತು ಪಕ್ಷದ ಕೆಳ ಹಂತದ ಬೂತ್ ಮಟ್ಟದ ಕಾರ್ಯಕರ್ತ ಹಾಗೂ ವಿಸ್ತಾರಕರ ಮೂಲಕ ಸಂಪೂರ್ಣ ವಿವರ ಪಡೆದುಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಾಸಕರಿಂದಲೂ ಮಾಹಿತಿ:
ಪಕ್ಷದ ಮುಖಂಡರು ಶಾಸಕರ ಕಾರ್ಯ ವೈಖರಿ ಕುರಿತು ವಿವಿಧ ಪಕ್ಷದ ಕಾರ್ಯಕರ್ತರು, ಜಿಲ್ಲಾ ಮುಖಂಡರು ಹಾಗೂ ಪದಾಧಿಕಾರಿಗಳ ಮೂಲಕ ಮಾಹಿತಿ ಪಡೆದುಕೊಳ್ಳಲಾಗುತ್ತಿದ್ದು, ಅದರ ಜೊತೆಗೆ ಸ್ವತಃ ಶಾಸಕರಿಂದಲೂ ಅವರ ಕಾರ್ಯ ವೈಖರಿ ಮತ್ತು ಸಾಧನೆ ಕುರಿತು ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕ್ಷೇತ್ರದ ವಸ್ತಸ್ಥಿತಿ ವರದಿ:
ಈಗಾಗಲೇ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡೇ ಮೂರು ತಂಡಗಳಾಗಿ ರಾಜ್ಯ ಪ್ರವಾಸ ಆರಂಭಿಸಿರುವ ರಾಜ್ಯ ನಾಯಕರು ಪ್ರತಿ ಕ್ಷೇತ್ರದ ವಾಸ್ತವ ಚಿತ್ರಣವನ್ನು ಪಡೆದುಕೊಳ್ಳುತ್ತಿದ್ದು, ಕ್ಷೇತ್ರದಲ್ಲಿರುವ ಜಾತಿವಾರು ಜನಸಂಖ್ಯೆ, ನಿರ್ಣಾಯಕ ಪಾತ್ರವಹಿಸುವ ಸಮುದಾಯ, ಪ್ರತಿ ಕ್ಷೇತ್ರಕ್ಕೂ ಸರ್ಕಾರದಿಂದ ಜಾರಿಯಾಗಿರುವ ಯೋಜನೆಗಳು, ಕ್ಷೇತ್ರದ ಪ್ರಮುಖ ಸಮಸ್ಯೆ, ಯೋಜನೆಗಳ ಅನುಷ್ಠಾನದಲ್ಲಿ ಹಾಲಿ ಶಾಸಕರ ಪಾಲ್ಗೊಳ್ಳುವಿಕೆ ಒಂದು ವೇಳೆ ಬಿಜೆಪಿ ಶಾಸಕರಿಲ್ಲದ ಕ್ಷೇತ್ರದಲ್ಲಿ ಸಕ್ರೀಯರಾಗಿ ಕಾರ್ಯ ನಿರ್ವಹಿಸುತ್ತಿರುವ ನಾಯಕರ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.
ಎಲ್ಲರಿಗೂ ಟಿಕೆಟ್ ಖಾತ್ರಿಯಿಲ್ಲ:
ಪ್ರಸ್ತುತ ಬಿಜೆಪಿ ಶಾಸಕರಾಗಿದ್ದರೂ, ಈಗ ನಡೆಸುತ್ತಿರುವ ಪರೋಕ್ಷ ಮೌಲ್ಯಮಾಪನದ ವೇಳೆ ಅವರ ಕಾರ್ಯ ವೈಖರಿಯ ಬಗ್ಗೆ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರಿಂದ ಅಪಸ್ವರಗಳು ಕೇಳಿ ಬಂದಿದ್ದರೆ, ಅಂತಹ ಶಾಸಕರಿಗೆ ಮುಂದಿನ ಚುನಾವಣೆಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.
ಉತ್ತರ ಪ್ರದೇಶದಲ್ಲಿ ಪಕ್ಷ ಸಂಘಟನೆ ಹಾಗೂ ಕ್ಷೇತ್ರದಲ್ಲಿ ಸರಿಯಾಗಿ ಜನರ ಜೊತೆ ಬೆರೆಯದ 80 ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್ ತಪ್ಪಿಸಿ ಬಿಜೆಪಿ ಹೊಸಬರಿಗೆ ಅವಕಾಶ ಕಲ್ಪಿಸಿತ್ತು. ಅದೇ ಮಾದರಿಯನ್ನು ಬಿಜೆಪಿ ರಾಜ್ಯದಲ್ಲಿಯೂ ಪ್ರಯೋಗ ಮಾಡಲು ಮುಂದಾಗಿದ್ದು, ಸಕ್ರೀಯರಾಗಿಲ್ಲದ ಪಕ್ಷದ ಶಾಸಕರ ಕ್ಷೇತ್ರಗಳಲ್ಲಿ ಪರ್ಯಾಯ ಸಕ್ರೀಯ ಅಭ್ಯರ್ಥಿಯನ್ನೂ ಹುಡುಕುವ ಕೆಲಸವೂ ಈಗಿನಿಂದಲೇ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.