ಸಂತೋಷ್ ಆತ್ಮಹತ್ಯೆ ಪ್ರಕರಣ ತನಿಖೆಯಾಗಲಿ: ರವಿ
ಸಿಎಂ ಬೊಮ್ಮಾಯಿ- ಕಟೀಲ್ ಸೂಕ್ತ ನಿರ್ಧಾರ
Team Udayavani, Apr 15, 2022, 2:36 PM IST
ಚಿಕ್ಕಮಗಳೂರು: ಕೆ.ಎಸ್. ಈಶ್ವರಪ್ಪ ರಾಜೀನಾಮೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್ ಸೂಕ್ತ ನಿರ್ಣಯ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ವಿಚಾರ, ಹೈಕಮಾಂಡ್ ಸೂಚನೆ ಬಗ್ಗೆ ನನಗೇನೂ ಗೊತ್ತಿಲ್ಲ. ಗಣಪತಿ ಆತ್ಮಹತ್ಯೆ ಪ್ರಕರಣ ಮತ್ತು ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಎರಡನ್ನೂ ಒಂದೇ ದೃಷ್ಟಿಯಲ್ಲಿ ನೋಡಬೇಕೆಂದು ಇಲ್ಲ. ಸಾರ್ವಜನಿಕರ ಅಭಿಪ್ರಾಯ ಗೌರವಿಸಬೇಕು. ಗಣಪತಿ ವಿಡಿಯೋ ಮಾಡಿ ಹೇಳಿಕೆ ನೀಡಿದ್ದರು. ಇಲ್ಲಿ ಸಂತೋಷ್ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಾದ ಮೇಲೆ ಆತ್ಮಹತ್ಯೆ ನಡೆದಿದೆ. ಎರಡಕ್ಕೂ ಹೋಲಿಕೆ ಮಾಡಲು ಬರುವುದಿಲ್ಲ. ಎರಡೂ ಪ್ರಕರಣದಲ್ಲಿ ಜೀವ ಹಾನಿಯಾಗಿರುವುದು ದುರದೃಷ್ಟಕರ. ಟೆಂಡರ್ ಕರೆಯದೆ, ಕೆಲಸ ಮಂಜೂರಾಗದೆ ಕೋಟಿಗಟ್ಟಲೆ ಕೆಲಸ ಮಾಡಿಸಲು ಬರುತ್ತಾ? ಫೇಕ್ ವರ್ಕ್ ಆರ್ಡರ್ ನೀಡಲಾಗಿದ್ಯಾ ಎಂಬ ಎಲ್ಲಾ ವಿಷಯಗಳು ತನಿಖೆಯಿಂದ ತಿಳಿದು ಬರಬೇಕು. ಆದರೆ ಸಾವಿನ ಸುತ್ತ ಅನುಮಾನದ ಹುತ್ತ ಇರುವುದು ಸ್ಪಷ್ಟ. ಸಮಗ್ರ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.
ರಾಹುಲ್ ಗಾಂಧಿ ಹೆಸರಿನಲ್ಲಿ ನಕಲಿ ಸಹಿ ಮಾಡಿ ಜಿಪಂ ಟಿಕೆಟ್ ಪಡೆಯಲು ಯತ್ನಿಸಿದ್ದರು ಎಂಬ ಆರೋಪ ಸಂತೋಷ ಮೇಲೆ ಇದೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದರು. ರಾಜಕಾರಣ ಗೊತ್ತಿದ್ದವರು ಏಕೆ ಆತ್ಮಹತ್ಯೆಗೆ ಶರಣಾದರು. ನಿಜವಾಗಿ ಆತ್ಮಹತ್ಯೆ ನಡೆದಿದ್ಯಾ? ಇದರ ಹಿಂದೆ ಬೇರೆ ಏನಾದರೂ ಇದ್ಯಾ? ಈ ಎಲ್ಲಾ ಅಂಶಗಳ ಮೇಲೆ ಸಮಗ್ರ ತನಿಖೆಯಾಗಬೇಕು. ಪ್ರತಿಭಟನೆ ನಡೆಸಲು ಎಲ್ಲರಿಗೂ ಹಕ್ಕಿದೆ. ಪ್ರತಿಭಟನೆ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡರೆ ಅವರ ವಿರುದ್ಧ ಕ್ರಮವಾಗುತ್ತದೆ. ಕಾನೂನು ಮಿತಿಯೊಳಗೆ ಪ್ರತಿಭಟನೆ ನಡೆಸಲು ಎಲ್ಲರಿಗೂ ಅವಕಾಶವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.