![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 16, 2022, 6:10 AM IST
ಕಾಪು: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೆ ಒಳಪಟ್ಟಿರುವ ಮೊಗವೀರ ಸಮಾಜದ ಪ್ರಧಾನ ಆರಾಧನ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶುಕ್ರವಾರ ಪಂಚ ಸಹಸ್ರಯಾಗ, ನಾಗ ಸನ್ನಿಧಿಯಲ್ಲಿ 108 ಕಲಶಾಭಿಷೇಕ, ಆಶ್ಲೇಷಾ ಬಲಿ, ಮಹಾ ಅನ್ನಸಂತರ್ಪಣೆ ಸಹಿತವಾಗಿ ರಾತ್ರಿ ಚತುಃಪವಿತ್ರ ನಾಗಮಂಡಲೋತ್ಸವ ಸಂಪನ್ನಗೊಂಡಿತು.
ಕ್ಷೇತ್ರದ ತಂತ್ರಿ ವಿದ್ವಾನ್ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದ ಹಿರಿಯ ಅರ್ಚಕ ವೇ|ಮೂ| ವೆಂಕಟನರಸಿಂಹ ಉಪಾಧ್ಯಾಯ, ವೇ|ಮೂ| ರಾಘವೇಂದ್ರ ಉಪಾ ಧ್ಯಾಯ, ವೇ|ಮೂ| ವಿಷ್ಣು ಮೂರ್ತಿ ಉಪಾಧ್ಯಾಯ ಅವರ ಸಹಭಾಗಿತ್ವದೊಂದಿಗೆ ವೈದಿಕರ ಸಹಕಾರದೊಂದಿಗೆ ಪಂಚ ಸಹಸ್ರ ಯಾಗ, ನಾಗ ಸನ್ನಿಧಿಯಲ್ಲಿ 108 ಕಲಶಾಭಿಷೇಕ, ಆಶ್ಲೇಷಾ ಬಲಿ ಸಹಿತ ಮಹಾ ಅನ್ನಸಂತರ್ಪಣೆ ಹಾಗೂ ರಾತ್ರಿ ಚತುಃಪವಿತ್ರ ನಾಗಮಂಡಲೋತ್ಸವ ಸಹಿತ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರಗಿದವು.
ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಮತ್ತು ಬ್ರಹ್ಮಕಲಶ ಪುಣ್ಯೋತ್ಸವ ಸಮಿತಿ ಅಧ್ಯಕ್ಷ ಡಾ| ಜಿ. ಶಂಕರ್, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ. ಅಮೀನ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಶಾಸಕ ಯು.ಆರ್. ಸಭಾಪತಿ, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ, ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್, ಉದ್ಯಮಿಗಳಾದ ಭುವನೇಂದ್ರ ಕಿದಿಯೂರು, ಹರಿಯಪ್ಪ ಕೋಟ್ಯಾನ್, ದ.ಕ. ಮೊಗವೀರ ಮಹಾಜನ ಸಂಘದ ಮುಂಬಯಿ ಸಮಿತಿಯ ಅಧ್ಯಕ್ಷ ಬಿ.ಜೆ. ಶ್ರೀಯಾನ್, ದ.ಕ. ಮೊಗ ವೀರ ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಅಪ್ಪಿ ಎಸ್. ಸಾಲ್ಯಾನ್, ಮಹಾಜನ ಸಂಘದ ಪದಾಧಿಕಾರಿಗಳು, ಜೀರ್ಣೋದ್ಧಾರ ಸಮಿತಿ, ಕ್ಷೇತ್ರಾ ಡಳಿತ ಸಮಿತಿಯ ಪದಾಧಿಕಾರಿಗಳು ಮತ್ತು ವಿವಿಧ ಸಮಿತಿ ಪದಾಧಿಕಾರಿಗಳು, ಮುಖಂಡರು ಇದ್ದರು.
You seem to have an Ad Blocker on.
To continue reading, please turn it off or whitelist Udayavani.