ಸ್ವಾತಂತ್ರ್ಯ, ಸಮಾನತೆ ದೇಶದ ಅಭಿವೃದ್ಧಿಯ ದಿಕ್ಸೂಚಿ
Team Udayavani, Apr 16, 2022, 1:28 PM IST
ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲರಿಗೂ ಅಡಕಗೊಳಿಸಿ ರುವ ಸ್ವಾತಂತ್ರ್ಯ, ಸಮಾನತೆ, ಸಹೋದರತೆ ಅಂಶಗಳು ದೇಶದ ಅಭಿವೃದ್ಧಿಯ ದಿಕ್ಸೂಚಿಯಾಗಿದೆ ಎಂದು ಬೆಂಗಳೂರು ಕ್ರೈಸ್ಟ್ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಹ. ರಾ.ಮಹೇಶ್ ಅಭಿಪ್ರಾಯಪಟ್ಟರು.
ನಗರದ ಪೇಟೆ ಪ್ರçಮರಿ ಶಾಲೆಯ ಅವರಣದಲ್ಲಿ, ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ವೇದಿಕೆ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿ ಮಾತನಾಡಿದರು.
ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ದಲಿತರ ಹಕ್ಕು, ಅವಕಾಶಗಳಿಗಾಗಿ ಮಾತ್ರ ಹೋರಾಟ ಮಾಡಿದವರಲ್ಲ. ತಮ್ಮ ವೈಯಕ್ತಿಕ ಬದುಕನ್ನು ಬದಿಗಿಟ್ಟು, ಶೋಷಿತರು, ಹಿಂದುಳಿದ ವರ್ಗಗಳು, ಮಹಿಳೆಯರು ಸೇರಿದಂತೆ ದೇಶದ ಎಲ್ಲಾ ಸಮುದಾಯಗಳ ಸರ್ವಾಂಗೀಣ ಪ್ರಗತಿಗಾಗಿ ಹೋರಾಡಿದರು. ಅಂಬೇಡ್ಕರ್ ಅವರು ಜ್ಞಾನ, ವ್ಯಕ್ತಿತ್ವ, ರಾಜೀಯಾಗದ ಹೋರಾಟದ ಮೂಲಕ ಭಾರತಕ್ಕೆ ನೀಡಿದ ಸಂವಿಧಾನ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದೆ ಎಂದರು.
ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಪೂರ್ವದಲ್ಲಿ ಬಸವಣ್ಣ, ಕನಕದಾಸರು, ಸೇರಿದಂತೆ ಮಹಾನ್ ಸಾಧಕರ ಸಿದ್ಧಾಂತಗಳನ್ನು ಅಳವಡಿಸಿಕೊಂಡು ದೇಶದ ಇಡೀ ಸಮಾಜ, ಸಮುದಾಯವನ್ನು ಮುಂಚೂಣಿಯಲ್ಲಿ ತರಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅಂಬೇ ಡ್ಕರ್ ಅವರ ಆದರ್ಶ ಸಿದ್ಧಾಂತಗಳು ಇಂದಿಗೂ ಎಲ್ಲರಿಗೂ ಅನುಕರಣೀಯವಾಗಿವೆ ಎಂದರು.
ಕೇಂದ್ರ ಪರಿಹಾರ ಸಮಿತಿ ಅಧ್ಯಕ್ಷ ಎಂ. ರಾಮಚಂದ್ರ ಮಾತನಾಡಿ, ಇಡೀ ವಿಶ್ವವೇ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಿ ಗೌರವ ನೀಡುತ್ತಿದೆ. ಶಿಕ್ಷಣ, ಸಂಘಟನೆ, ಹೋರಾಟ ಅಂಬೇಡ್ಕರ್ ಅವರ ಧ್ಯೇಯವಾಗಿತ್ತು. ದೇಶದಲ್ಲಿ ಶೋಷಿತರು ಸೇರಿದಂತೆ ಎಲ್ಲ ಹಿಂದುಳಿದವರು ಆಡಳಿತ ಚುಕ್ಕಾಣಿ ಹಿಡಿಯುವ ಆಶಯಗಳ ಈಡೇರಿಕೆಗಾಗಿ ಶಿಲ್ಪಿ ವಿಗ್ರಹ ಕೆತ್ತುವ ಮಾದರಿಯಲ್ಲಿ ಶ್ರೇಷ್ಠ ಸಂವಿಧಾನವನ್ನು ಭಾರತಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದರು.
ಟಿ. ನರಸೀಪುರ ನಳಂದ ಬುದ್ಧವಿಹಾರದ ಪೂಜ್ಯ ಬೋಧಿರತ್ನ ಬಂತೇಜಿಯವರು ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಸಂದರ್ಭಕ್ಕೆ ನೀಡಿದ ಸಂದೇಶವನ್ನು ವಾಚಿಸಲಾಯಿತು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿ ಹಾಗೂ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ ಪ್ರೋತ್ಸಾಹಧನ ವಿತರಿಸಲಾಯಿತು.
ನಗರಸಭೆ ಅಧ್ಯಕ್ಷೆ ಆಶಾನಟರಾಜು, ಚುಡಾ ಅಧ್ಯಕ್ಷ ಶಾಂತಮೂರ್ತಿ ಕುಲಗಾಣ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿ.ಪಂ. ಸಿಇಒ ಗಾಯತ್ರಿ, ಎಡಿಸಿ ಎಸ್. ಕಾತ್ಯಾಯಿನಿದೇವಿ, ಎಎಸ್‌ಪಿ ಕೆ.ಎಸ್. ಸುಂದರರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಎಚ್.ಸಿ. ಭಾಗೀರಥಿ, ಜಿ.ಪಂ. ಮಾಜಿ ಸದಸ್ಯರಾದ ಕೆರೆಹಳ್ಳಿ ನವೀನ್, ಎ.ಆರ್. ಬಾಲರಾಜು ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.