ಪಡಿತರದಲಿ 1 ಕೆ.ಜಿ ಹೆಚ್ಚುವರಿ ಅಕ್ಕಿ ವಿತರಣೆ


Team Udayavani, Apr 16, 2022, 1:48 PM IST

Untitled-1

ಮಂಡ್ಯ: ಪ್ರಸ್ತುತ ದಿನಗಳಿಂದ ಕೇಂದ್ರ ಸರ್ಕಾರ ಉಚಿತವಾಗಿ ನೀಡುತ್ತಿದ್ದ 5 ಕೆಜಿ ಅಕ್ಕಿಯೊಂದಿಗೆ ಒಂದು ಕೆ.ಜಿ ಹೆಚ್ಚುವರಿ ಪಡಿತರ ನೀಡಲಾಗುತ್ತಿದೆ ಎಂದು ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಎಂ.ಬಿ.ರಮೇಶ್‌ ತಿಳಿಸಿದರು.

ನಗರದ ರೈತರ ಸೊಸೈಟಿ ಆವರಣದಲ್ಲಿ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾದಿಂದ ಕೋವಿಡ್‌-19ರ ಹಿನ್ನೆಲೆಯಲ್ಲಿ ಕೇಂದ್ರದ ಗರೀಬ್‌ ಕಲ್ಯಾಣ ಯೋಜನೆಯಡಿ ನೀಡುತ್ತಿದ್ದ ಪಡಿತರವನ್ನು ಮತ್ತೆ ಉಚಿತವಾಗಿ ಮುಂದಿರಿಸಿ, ಹೆಚ್ಚುವರಿ ಪಡಿತರ ನೀಡುತ್ತಿರುವುದಕ್ಕೆ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿ, ಕೊರೊನಾ ಸಂಕಷ್ಟಕದಲ್ಲಿ ಕೇಂದ್ರ ಗರಿಬ್‌ ಕಲ್ಯಾಣ ಯೋಜನೆಯಡಿ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ ಮಹತ್ವದ ಘೋಷಣೆ ಮಾಡಿ, ಕೊರೊನಾ ಸಮಯದಲ್ಲಿ ಬಡವರಿಗೆ ನೀಡಲಾಗುತ್ತಿದ್ದ ಉಚಿತ ಆಹಾರ ಧಾನ್ಯ ಯೋಜನೆಯಾದ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯನ್ನು ಮತ್ತೆ 6 ತಿಂಗಳಿಗೆ ವಿಸ್ತರಿಸಲಾಗಿದೆ ಎಂದರು.

ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್‌ ಪಡಿತರ ಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ ಈಗಾಗಲೇ 5 ಕೆ.ಜಿ ಅಕ್ಕಿಯನ್ನು ಪ್ರತಿ ತಿಂಗಳು ಹಂಚಲಾಗುತ್ತಿದೆ. ಇದೀಗ 1 ಕೆ.ಜಿ ಅಕ್ಕಿ ಹೆಚ್ಚುವರಿ ಯಾಗಿ ನೀಡಲಾಗುವುದು. ಉಚಿತ ಆಹಾರ ಧಾನ್ಯ ವಿತರಣೆ ಯೋಜನೆ ವಿಸ್ತರಿಸರಣೆಯಿಂದ ದೇಶದ 80 ಕೋಟಿ ಜನರು ಪ್ರಯೋಜನ ಪಡೆಯಲಿದ್ದಾರೆ. 2020ರಲ್ಲಿ ಉಚಿತ ಪಡಿತರ ಯೋಜನೆ ಘೋಷಣೆ ಮಾಡಿದಾಗ 1.75 ಲಕ್ಷ ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು ಎಂದು ಮಾಹಿತಿ ನೀಡಿದರು.

ಗರೀಬ್‌ ಕಲ್ಯಾಣ ಯೋಜನೆ ಘೋಷಣೆ: ಮೊದಲ ಲಾಕ್‌ಡೌನ್‌ ವೇಳೆ ವಲಸೆ ಕಾರ್ಮಿಕರು ಕೆಲಸ ಕಳೆದುಕೊಂಡು ಸಂಕಷ್ಟ ಅನುಭವಿಸಿದ್ದರು. ಸರಿ ಸುಮಾರು 120 ಮಿಲಿಯನ್‌ ವಲಸೆ ಕಾರ್ಮಿಕರು ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಇದನ್ನು ಅರಿತಿದ್ದ ಕೇಂದ್ರ ಲಾಕ್‌ಡೌನ್‌ ಘೋಷಿಸಿದ ಬೆನ್ನಲ್ಲೇ ಗರೀಬ್‌ ಕಲ್ಯಾಣ ಯೋಜನೆ ಘೋಷಿಸಿದ್ದರು. ಕೊರೊನಾದಿಂದ ಹಲವು ಬಾರಿ ವಿಸ್ತರಣೆಯಾಗಿದ್ದ ಗರೀಬ್‌ ಕಲ್ಯಾಣ ಯೋಜನೆ ಮಾರ್ಚ್‌ 2022ಕ್ಕೆ ಅಂತ್ಯಗೊಳ್ಳುತ್ತಿತ್ತು. ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ ಮೋದಿ, ಸೆಪ್ಟೆಂಬರ್‌ 2022ರ ವರೆಗೆ ವಿಸ್ತರಿಸಲಾಗಿದೆ. ಕೊರೊನಾ ಮೊದಲ ಅಲೆ, ಲಾಕ್‌ಡೌನ್‌ ಸಂಕಷ್ಟದಿಂದ ನಲುಗಿದ ಬಡವರಿ ಗೆ ಉಚಿತ ಆಹಾರ ಧಾನ್ಯ ನೀಡಲು ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಯೋಜನೆ ಆರಂಭಿಸಲಾಗಿತ್ತು. ಬಳಿಕ ಹಲವು ಬಾರಿ ವಿತರಿಸಲಾಗಿತ್ತು. ಮತ್ತೆ ವಿಸ್ತರಣೆಗೊಂಡು ಒಂದು ಕೆಜಿ ಅಕ್ಕಿ ಹೆಚ್ಚುವರಿಯಾಗಿ ನೀಡಲು ಮುಂದಾಗಿದೆ ಫಲಾನುಭವಿಗಳು ಪಡೆದುಕೊಳ್ಳಿ ಎಂದು ಹೇಳಿದರು.

ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆ ಅನ್ವಯ 80 ಕೋಟಿ ಪಡಿತರ ಫಲಾನುಭವಿಗಳಿಗೆ ಇದರ ಲಾಭ ಸಿಗಲಿದೆ. ಇದಕ್ಕಾಗಿ 53,344 ಕೋಟಿ ರೂ. ಹೆಚ್ಚುವರಿ ವೆಚ್ಚವನ್ನು ಸರ್ಕಾರ ಮಾಡಲಿದೆ. ಇದರೊಂದಿಗೆ ಉಚಿತ ಪಡಿತರಕ್ಕೆಂದು ಸರ್ಕಾರ ಮಾಡಿದ ಈವರೆಗಿನ ವೆಚ್ಚ 2.6 ಲಕ್ಷ ಕೋಟಿ ರೂ.ಗೆ ಏರಲಿದೆ ಎಂದರು.

ನಗರಸಭಾ ಸದಸ್ಯ ಶಿವಕುಮಾರ್‌ ಕೆಂಪಯ್ಯ, ಬಿಜೆಪಿ ನಗರಾಧ್ಯಕ್ಷ ವಿವೇಕ್‌, ಒಬಿಸಿ ಮೋರ್ಚಾ ಉಪಾಧ್ಯಕ್ಷ ಎಲ್‌.ಎಸ್‌.ಸಿದ್ದರಾಜು, ನವೀನ್‌ ಕುಮಾರ್‌, ಆನಂದ್‌, ಮಹೇಶ್‌, ಎಲ್ಲೇ ಗೌಡ, ಪುಟ್ಟಸ್ವಾಮಿ, ಶರತ್‌, ಧನಂಜಯ್‌ ಇದ್ದರು.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.