ಬಿಜೆಪಿ ವಿರುದ್ದ ತಿರುಗಿ ಬಿದ್ದ ಲಿಂಗಾಯತ ಸಮುದಾಯ?


Team Udayavani, Apr 16, 2022, 4:59 PM IST

patil

ಶಿವಮೊಗ್ಗ: ಸಂತೋಷ ಪಾಟೀಲ್‌ ಸಾವಿನ ಬೆನ್ನಲ್ಲೇ ಲಿಂಗಾಯತ ಸಮುದಾಯ ಬಿಜೆಪಿ ವಿರುದ್ಧ ತಿರುಗಿ ಬೀಳಲು ವೇದಿಕೆ ಸಿದ್ಧವಾಗಿದ್ದು, ಇದಕ್ಕೆ ಪುಷ್ಟಿ ನೀಡುವಂತೆ ಶಿವಮೊಗ್ಗದಲ್ಲಿ ಲಿಂಗಾಯತ ಮುಖಂಡರ ಸಭೆ ನಡೆದಿದೆ.

ಸಂತೋಷ ಪಾಟೀಲ್‌ ಅವರನ್ನು ಅಷ್ಟು ಹೀನಾಯವಾಗಿ ನಡೆಸಿಕೊಂಡರೂ ಬಿಜೆಪಿಯಲ್ಲಿರುವ ಸಮುದಾಯದ ಲೀಡರ್‌ಗಳು ತುಟಿ ಬಿಚ್ಚಲಿಲ್ಲ. ಅಷ್ಟೇ ಅಲ್ಲ ಸಮುದಾಯದ ಸ್ವಾಮೀಜಿಗಳು ಧ್ವನಿ ಎತ್ತಲಿಲ್ಲ. ನಮ್ಮ ಸಮುದಾಯ ಏಕೆ ಹೀಗಾಯ್ತು ಎಂದು ಸಭೆಯಲ್ಲಿ ಚರ್ಚೆಯಾಗಿದೆ. ಮೊದಲ ಹಂತದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಲೂಕುವಾರು ಮುಖಂಡರು ಮನೆ-ಮನೆಗೆ ತಲುಪಿ ದೇಣಿಗೆ ಸಂಗ್ರಹಿಸಲಿದ್ದಾರೆ. ಜಿಲ್ಲೆಯಲ್ಲಿ 4 ಲಕ್ಷಕ್ಕೂ ಅಧಿಕ ಲಿಂಗಾಯತ ಸಮುದಾಯ ಇದ್ದು ಪ್ರತಿಯೊಬ್ಬರೂ ಕೈಲಾದಷ್ಟು ದೇಣಿಗೆ ನೀಡುವಂತೆ ಮನವಿ ಮಾಡಲಾಗಿದೆ.

ಇದಕ್ಕಾಗಿ ಸಂತೋಷ್‌ ಪಾಟೀಲ್‌ ಭಾವಚಿತ್ರವುಳ್ಳ ವಾಹನ ಶಿವಮೊಗ್ಗ ನಗರದಲ್ಲಿ ಸಂಚರಿಸಲಿದೆ. ಅದಕ್ಕೂ ಮೊದಲು ಸಮುದಾಯದ ಹಿರಿಯ ಮುಖಂಡರು ದೇಣಿಗೆ ಡಬ್ಬಿ ಹಿಡಿದು ಲಿಂಗಾಯತರು ಹೆಚ್ಚು ಭೇಟಿ ಕೊಡುವ ದೇವಸ್ಥಾನಗಳಿಗೆ, ಸಮುದಾಯದ ಹಿರಿಯರ ಮನೆಗೆ ಸಂಚರಿಸಲಿದೆ. ನಂತರ ಸಂಗ್ರಹವಾದ ಹಣವನ್ನು ಸಂತೋಷ ಪಾಟೀಲ್‌ ಕುಟುಂಬಕ್ಕೆ ನೀಡಲು ತೀರ್ಮಾನಿಸಲಾಗಿದೆ.

ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸಂತೋಷ್‌ ಪಾಟೀಲ್‌ ಪ್ರಕರಣದಲ್ಲಿ ಮೌನವಾಗಿರುವುದಕ್ಕೆ ಮುಖಂಡರು ಅಸಮಾಧಾನ ಹೊರಹಾಕಿದ್ದಾರೆ. ನಾಲ್ಕು ಬಾರಿ ಸಿಎಂ ಆಗಿರುವುದಕ್ಕೆ ಬಿಜೆಪಿ ಕಾರಣವಲ್ಲ. ಸಮುದಾಯದ ಮುಖಂಡರೆನ್ನುವ ಕಾರಣಕ್ಕೆ ಪಕ್ಷಾತೀತವಾಗಿ  ಬೆಂಬಲ ನೀಡಲಾಗಿದೆ. ಆದರೆ ಅವರು ಏಕೆ ಮಾತನಾಡುತ್ತಿಲ್ಲ. ಕೆಲಸ ಮಾಡಿಸಿಕೊಂಡು, ಹೀನಾಯವಾಗಿ ನಡೆಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಲಾಗಿದೆ. ಇದನ್ನು ಖಂಡಿಸಬೇಕಿತ್ತು. ಸಾಂತ್ವನ ಹೇಳಿ ಸಹಾಯಧನ ನೀಡಬೇಕಿತ್ತು. ಆದರೆ ಅದ್ಯಾವುದೂ ಆಗಿಲ್ಲ ಎಂದು ಅಲವತ್ತುಕೊಂಡಿದ್ದಾರೆ.

ಸಂತೋಷ ಪಾಟೀಲ್‌ಗೆ ಶಿವಮೊಗ್ಗದಿಂದಲೇ ಅನ್ಯಾಯವಾಗಿದ್ದು ದೇಣಿಗೆ ಅಭಿಯಾನವನ್ನು ಶಿವಮೊಗ್ಗದಿಂದಲೇ ಆರಂಭಿಸಿ ನಾಡಿನಾದ್ಯಂತ ವಿಸ್ತರಿಸಲು ಯೋಚಿಸಲಾಗಿದೆ. ಇದರಲ್ಲಿ ಕಾಂಗ್ರೆಸ್‌ನ ಪ್ರಮುಖ ಮುಖಂಡರು ಮುಂಚೂಣಿಯಲ್ಲಿದ್ದಾರೆ. ಪಕ್ಷಾತೀತವಾಗಿ ಕಾರ್ಯಕ್ರಮ ರೂಪಿಸಲು ರೂಪುರೇಷೆ ಸಿದ್ಧಗೊಂಡಿದೆ.

ಶರತ್‌ ಭದ್ರಾವತಿ

ಟಾಪ್ ನ್ಯೂಸ್

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ

12-sagara

Sagara: ವಿದ್ಯುತ್ ಟ್ರಾನ್ಸ್‌ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

6-

Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

4-sagara

Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.