ಸಮಸ್ಯೆ ಪರಿಹಾರಕ್ಕೆ ಗರಿಷ್ಠ ಪ್ರಯತ್ನ: ಡಿಸಿ

ಹಾಲಾಡಿ, ಅಮಾಸೆಬೈಲಿನಲ್ಲಿ ಡಿಸಿ ಗ್ರಾಮ ವಾಸ್ತವ್ಯ

Team Udayavani, Apr 17, 2022, 10:35 AM IST

kurma

ಕುಂದಾಪುರ: ಹಳ್ಳಿಗಳಿಗೆ ಬಂದು, ಜನರ ಅಹವಾಲುಗಳನ್ನು ಸ್ವೀಕರಿಸುವ, ಸಾಧ್ಯವಾದಷ್ಟರ ಮಟ್ಟಿಗೆ ಸ್ಥಳದಲ್ಲೇ ಪರಿಹರಿಸುವ ರಾಜ್ಯ ಸರಕಾರದ ‘ಜಿಲ್ಲಾಧಿಕಾರಿಗಳ ನಡೆ- ಹಳ್ಳಿಯ ಕಡೆ’ ಕಾರ್ಯಕ್ರಮ ಮಹತ್ವಪೂರ್ಣವಾಗಿದೆ. ಈ ಗ್ರಾಮವಾಸ್ತವ್ಯದಲ್ಲಿ ಸ್ವೀಕಾರಗೊಂಡ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಗರಿಷ್ಠ ಪ್ರಯತ್ನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ಭರವಸೆ ನೀಡಿದರು.

ಅವರು ಶನಿವಾರ ಕುಂದಾಪುರ ತಾಲೂಕಿನ ಹಾಲಾಡಿ ಮತ್ತು ಅಮಾಸೆಬೈಲು ಗ್ರಾಮದಲ್ಲಿ ಗ್ರಾಮವಾಸ್ತವ್ಯ ನಡೆಸಿ ದರು. ಹಾಲಾಡಿಯ ಶಾಲಿನಿ ಜಿ.ಶಂಕರ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಭೆ, ಸಮಾರಂಭಗಳಿಗಿಂತ ಸಾರ್ವಜನಿಕ ಸಮಸ್ಯೆಗಳ ಬಗ್ಗೆಯೇ ಹೆಚ್ಚಿನ ಕಾಳಜಿ ವಹಿಸಿ, ಪರಿಹರಿಸಲು ನಿರಂತರ ಶ್ರಮಿಸುತ್ತಿರುವ ಕುಂದಾಪುರ ಶಾಸಕರು ಕಾರ್ಯಕ್ರಮದಲ್ಲಿದ್ದು, ಜನರ ಅಹವಾಲುಗಳನ್ನು ಆಲಿಸಲಿದ್ದಾರೆ. ವರ್ಷದಲ್ಲಿ ಒಂದು ಜಿಲ್ಲೆಯಲ್ಲಿ ತಿಂಗಳಿಗೊಂದರಂತೆ 12 ಗ್ರಾಮಗಳಲ್ಲಿ ಮಾತ್ರ ವಾಸ್ತವ್ಯ ಮಾಡಲಾಗುತ್ತದೆ. ಈ ದಿನ ಹಾಲಾಡಿ ಹಾಗೂ ಅಮಾಸೆಬೈಲು ಗ್ರಾಮವನ್ನು ಆಯ್ಕೆ ಮಾಡಿಕೊಂಡಿದ್ದು, ಇಲ್ಲಿನ ಜನರ, ಈ ಭಾಗದ ಸಮಸ್ಯೆಗಳನ್ನು ಆಲಿಸಲಾಗುವುದು ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಿದರು. ಈ ವೇಳೆ ನಿವೇಶನ ರಹಿತರು, ವಿಶೇಷ ಚೇತನರು, ಎಂಡೋ ಸಲ್ಫಾನ್‌, ವಿಧವಾ ವೇತನ, ವೃದ್ಧಾಪ್ಯ ವೇತನ ಸವಲತ್ತುಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.

ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಕೆ. ರಾಜು ಪ್ರಸ್ತಾವಿಸಿ, ಜಿಲ್ಲಾಧಿಕಾರಿಗಳು, ಶಾಸಕರು ಸಹಿತ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ನಿಮ್ಮ ಬಳಿಗೆ ಆಗಮಿಸಿದ್ದು, ನಿಮ್ಮ ಬೇಡಿಕೆಗಳನ್ನು, ಸಮಸ್ಯೆಗಳನ್ನು ಹೇಳಿಕೊಳ್ಳಿ ಎಂದು ಮನವಿ ಮಾಡಿಕೊಂಡರು.

ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್‌ ಕುಮಾರ್‌ ಕೊಡ್ಗಿ ಅವರು ಕೇಂದ್ರ ಸರಕಾರದ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆಯಡಿ ಫಲಾನುಭವಿಗಳಿಗೆ ಅಕ್ಕಿಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಹಾಲಾಡಿ ಗ್ರಾ.ಪಂ. ಅಧ್ಯಕ್ಷೆ ಸಾಧು, ಉಪಾಧ್ಯಕ್ಷ ಜನಾರ್ದನ, ಸದಸ್ಯರು, ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ, ಕುಂದಾಪುರ ಉಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್‌ ರೆಡ್ಡಿ, ಕುಂದಾಪುರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ವೇತಾ ಎನ್‌., ಹಾಗೂ ವಿವಿಧ ಇಲಾಖೆಯ ಎಲ್ಲ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕುಂದಾಪುರ ತಹಶೀಲ್ದಾರ್‌ ಕಿರಣ್‌ ಜಿ. ಗೌರಯ್ಯ ಸ್ವಾಗತಿಸಿ, ವಂಡ್ಸೆ ಹೋಬಳಿ ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ ವಂದಿಸಿ, ಉಪನ್ಯಾಸಕ ಅಕ್ಷಯ್‌ ಹೆಗ್ಡೆ ಮೊಳಹಳ್ಳಿ ನಿರೂಪಿಸಿದರು.

ಕೆಎಸ್‌ಆರ್‌ಟಿಸಿ ಬಸ್‌ ಬರುತ್ತಿಲ್ಲ

ಅಮಾಸೆಬೈಲು ಗ್ರಾಮದ ಮಚ್ಚಟ್ಟು ಗ್ರಾಮಕ್ಕೆ ಎರಡು ಕೆಎಸ್‌ಆರ್‌ ಟಿಸಿ ಬಸ್‌ ಪರವಾನಿಗೆ ಸಿಕ್ಕಿವೆ. ಆದರೆ ಈಗ ಒಂದು ಬಸ್‌ ಸಹ ಬರುತ್ತಿಲ್ಲ ಎಂದು ಗ್ರಾಮಸ್ಥರೊಬ್ಬರು ಮನವಿ ಸಲ್ಲಿಸಿದರು. ಇದಕ್ಕೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಕರೆದ ಜಿಲ್ಲಾಧಿಕಾರಿಗಳು, ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ, ಬಸ್‌ ಆರಂಭಿಸಲು ಕ್ರಮಕೈಗೊಳ್ಳಿ ಎಂದು ಡಿಸಿ ಹೇಳಿದರು.

3 ವರ್ಷವಾದರೂ ಗೊತ್ತಿಲ್ವಾ?

ತೊಂಬಟ್ಟುವಿನಿಂದ ಹೊಸಂಗಡಿಗೆ ಹೋಗುವ ಜಿ.ಪಂ. ರಸ್ತೆಯಲ್ಲಿ 4 ಕೋ.ರೂ. ವೆಚ್ಚದಲ್ಲಿ ಸೇತುವೆಯಾಗಿದೆ. ಆದರೆ ಮಧ್ಯದಲ್ಲಿ ಮೀಸಲು ಅರಣ್ಯ ಕಾರಣಕ್ಕೆ ರಸ್ತೆ ಸಮಸ್ಯೆಯಿದೆ. ಸೇತುವೆ ಇದ್ದರೂ ಪ್ರಯೋಜನವಾಗುತ್ತಿಲ್ಲ ಎನ್ನುವ ಪ್ರಶ್ನೆಯನ್ನು ಅಲ್ಲಿನ ಸ್ಥಳೀಯರೊಬ್ಬರು ಗಮನಕ್ಕೆ ತಂದರು. ಈ ಇಲಾಖೆಗೆ ಬಂದು 3 ವರ್ಷ ಆಯಿತು ಅಂತ ಹೇಳ್ತಿರಿ. ಆದರೂ ಈ ರಸ್ತೆ ಯಾವುದು ಅಂತ ನಿಮಗೆ ಗೊತ್ತಿಲ್ವಾ? ಮತ್ತೆ ಏನು ಕೆಲಸ ಮಾಡುತ್ತೀರಿ ಎನ್ನುವುದಾಗಿ ಜಿ.ಪಂ. ಎಂಜಿನಿಯರೊಬ್ಬರನ್ನು ಜಿಲ್ಲಾಧಿಕಾರಿ ಖಾರವಾಗಿಯೇ ಪ್ರಶ್ನಿಸಿದರಲ್ಲದೆ ಈ ಬಗ್ಗೆ ಕೂಡಲೇ ತಿಳಿದುಕೊಂಡು, ಅವರಿಗೆ ಉತ್ತರಿಸಿ ಎಂದರು.

ನಿವೇಶನ: ಲಿಂಗತ್ವ ಅಲ್ಪಸಂಖ್ಯಾತರ ಮನವಿ

ಕೋಟೇಶ್ವರ ಸಮೀಪದ ಕಾಗೇರಿ ಯಲ್ಲಿ ಬಾಡಿಗೆ ಮನೆಯಲ್ಲಿರುವ ಐವರು ಲಿಂಗತ್ವ ಅಲ್ಪಸಂಖ್ಯಾತರು ತಮಗೆ ನಿವೇಶನ ಒದಗಿಸಿಕೊಡಿ ಹಾಗೂ ಮತದಾನದ ಅವಕಾಶ ಕಲ್ಪಿಸಿ ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಐವರ ಪೈಕಿ ಇಬ್ಬರಿಗೆ ಮಾತ್ರ ಆಧಾರ್‌ ಕಾರ್ಡ್‌, ವೋಟರ್‌ ಐಡಿ ಇದ್ದು, ಎಲ್ಲರಿಗೂ ಮಾಡಿಕೊಡಿ ಎಂದು ಅಹವಾಲು ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಡಿಸಿ, ಈ ಬಗ್ಗೆ ಲಿಖೀತವಾಗಿ ಅರ್ಜಿ ಕೊಡಿ, ಜಾಗ ಗುರುತಿಸಿ, ಒದಗಿಸಲಾಗುವುದು ಎಂದರು. ಮುಂದಿನ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ನಡೆಸಿಕೊಡುವಂತೆ ತಾ.ಪಂ. ಇಒಗೆ ಸೂಚಿಸಿದರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.