ಕರಾವಳಿಯಲ್ಲಿ ಸಂಭ್ರಮದ ಈಸ್ಟರ್‌ ಆಚರಣೆ

Team Udayavani, Apr 18, 2022, 6:15 AM IST

ಕರಾವಳಿಯಲ್ಲಿ ಸಂಭ್ರಮದ ಈಸ್ಟರ್‌ ಆಚರಣೆ

ಮಂಗಳೂರು/ಉಡುಪಿ : ಯೇಸುಕ್ರಿಸ್ತರ ಪುನರುತ್ಥಾನದ ಹಬ್ಬ ಈಸ್ಟರನ್ನು ಕ್ರೈಸ್ತರು ಎ. 17ರಂದು ಕರಾವಳಿಯಾದ್ಯಂತ ಚರ್ಚ್‌ಗಳಲ್ಲಿ ಶ್ರದ್ಧೆ ಮತ್ತು ಭಕ್ತಿಯಿಂದ ಆಚರಿಸಿದರು.

ಚರ್ಚ್‌ಗಳಲ್ಲಿ ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಈಸ್ಟರ್‌ ಹಬ್ಬದ ಬಲಿಪೂಜೆಗಳು ನಡೆದವು. ಮಂಗಳೂರು ಬಿಷಪ್‌ ರೆ|ಫಾ| ಡಾ| ಪೀಟರ್‌ ಪಾವ್ಲ್ ಸಲ್ದಾನ್ಹಾ ಅವರು ಬಂಟ್ವಾಳ ತಾಲೂಕಿನ ಶಂಭೂರು ಸೇಕ್ರೆಡ್‌ ಹಾರ್ಟ್‌ ಚರ್ಚ್‌ನಲ್ಲಿ ರವಿವಾರ ಈಸ್ಟರ್‌ ಹಬ್ಬದ ಸಂಭ್ರಮದ ಬಲಿ ಪೂಜೆಯನ್ನು ನಡೆಸಿದರು. ಶಂಭೂರು ಚರ್ಚ್‌ನ ಧರ್ಮಗುರು ಫಾ| ಸಂತೋಷ್‌ ಡಿ’ಸೋಜಾ ಜತೆಗಿದ್ದರು. ಚರ್ಚ್‌ ಉಪಾಧ್ಯಕ್ಷ ಇನಾಸ್‌ ವೇಗಸ್‌, ಕಾರ್ಯದರ್ಶಿ ವಿನಿತಾ ಕ್ರಾಸ್ತಾ ಉಪಸ್ಥಿತರಿದ್ದರು.

ಉಡುಪಿ ಬಿಷಪ್‌ ರೆ| ಫಾ|ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ನೇತೃತ್ವದಲ್ಲಿ ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ ನಲ್ಲಿ ಶನಿವಾರ ರಾತ್ರಿ ವಿಶೇಷ ಪೂಜೆ ನಡೆಯಿತು.

ಆಯಾ ಚರ್ಚ್‌ಗಳಲ್ಲಿ ಸ್ಥಳೀಯ ಧರ್ಮಗುರುಗಳ ಮುಖಂಡತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು.

ಹೊಸ ಅಗ್ನಿಯ ಆಶೀರ್ವಚನದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಹೊಸ ಅಗ್ನಿಯಿಂದ ಈಸ್ಟರ್‌ ಮೊಂಬತ್ತಿಯನ್ನು ಧರ್ಮಾಧ್ಯಕ್ಷರು, ಗುರುಗಳು ಬೆಳಗಿಸಿದ ಬಳಿಕ ಭಾಗವಹಿಸಿದ್ದ ಸಮಸ್ತ ಕ್ರೈಸ್ತರು ಆ ಅಗ್ನಿಯ ಮೂಲಕ ಮೇಣದ ಬತ್ತಿಗಳನ್ನು ಉರಿಸಿ ಪ್ರಾರ್ಥನೆ ಸಲ್ಲಿಸಿದರು. ಬೈಬಲಿನ ಹಳೆಯ ಮತ್ತು ಹೊಸ ಒಡಂಬಡಿಕೆಯ ಆಯ್ದ ಭಾಗಗಳ ವಾಚನದ ಬಳಿಕ ಬಿಷಪರು, ಧರ್ಮಗುರುಗಳು ಪ್ರವಚನ ಮತ್ತು ಸಂದೇಶ ನೀಡಿದರು.

ಪವಿತ್ರ ಜಲದ ಆಶೀರ್ವಚನ ಹಾಗೂ ಕ್ರೈಸ್ತ ವಿಶ್ವಾಸದ ಸತ್ಯದ ಮರು ದೃಢೀಕರಣ ಈ ಸಂದರ್ಭದಲ್ಲಿ ನಡೆಯಿತು. ಕ್ರೈಸ್ತ ಸಂತರನ್ನು ಸ್ಮರಿಸಿ ಅವರ ಶುಭಾಶೀರ್ವಾದಗಳನ್ನು ಕೋರಲಾಯಿತು.

ಸಂಭ್ರಮದ ಬಲಿ ಪೂಜೆಯ ಬಳಿಕ ಭಾಗವಹಿಸಿದ ಕ್ರೆಸ್ತ ಬಾಂಧವರು ಈಸ್ಟರ್‌ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ರವಿವಾರ ಕ್ರೈಸ್ತ ಬಾಂಧವರು ತಂತಮ್ಮ ಮನೆಗಳಲ್ಲಿ ಈಸ್ಟರ್‌ ಹಬ್ಬದ ಊಟವನ್ನು ಸವಿದರು.

ಈಸ್ಟರ್‌ ಹಬ್ಬ ಸಂಭ್ರಮದಿಂದ ಆಚರಣೆ
ಕಾಸರಗೋಡು: ಜಿಲ್ಲೆಯಲ್ಲಿ ಈಸ್ಟರ್‌ ಹಬ್ಬವನ್ನು ಕ್ರೈಸ್ತ ಬಾಂಧವರು ಸಂಭ್ರಮದಿಂದ ಆಚರಿಸಿದರು. ಜಿಲ್ಲೆಯ ಕ್ರೈಸ್ತ ದೇವಾಲಯಗಳಲ್ಲಿ ಶನಿವಾರ ರಾತ್ರಿ ಮತ್ತು ರವಿವಾರ ಬೆಳಗ್ಗೆ ಬಲಿ ಪೂಜೆ ನೆರವೇರಿತು. ಕಯ್ನಾರು ಕ್ರಿಸ್ತ ರಾಜ ದೇವಾಲಯದಲ್ಲಿ ನಡೆದ ಬಲಿ ಪೂಜೆಯಲ್ಲಿ ಪ್ರಧಾನ ಧರ್ಮಗುರುಗಳಾಗಿ ತಲಪಾಡಿ ಫ್ರೆಂಡ್‌ಶಿಫ್‌ ಹೌಸ್‌ನ ನಿರ್ದೇಶಕ ಫಾ| ಅರುಣ್‌ ಲೋಬೊ ವಿಧಿ ವಿಧಾನ ನೆರವೇರಿಸಿದರು. ಕಯ್ನಾರು ಕ್ರಿಸ್ತರಾಜ ದೇವಾಲಯದ ಧರ್ಮಗುರು ಹ್ಯಾರಿ ಡಿ’ಸೋಜಾ ಉಪಸ್ಥಿತರಿದ್ದರು.

ಕ್ರೈಸ್ತ ಸಂತರನ್ನು ಸ್ಮರಿಸಿ ಅವರ ಶುಭಾಶೀರ್ವಾದ ಕೋರಲಾಯಿತು. ಸಂಭ್ರಮದ ಬಲಿ ಪೂಜೆ ಬಳಿಕ ಭಾಗವಹಿಸಿದ ಕ್ರೈಸ್ತ ಬಾಂಧವರು ಈಸ್ಟರ್‌ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಕ್ರೈಸ್ತ ಸಭೆಯು ವಿಭೂತಿ ಬುಧವಾರದಿಂದ ಮೊದಲ್ಗೊಂಡು ಈಸ್ಟರ್‌ ಹಬ್ಬದ ವರೆಗಿನ 40 ದಿನಗಳ ತನಕ ವ್ರತಾಚರಣೆಗೆ ಕರೆ ನೀಡುತ್ತದೆ. ಈ ಅವಧಿಯ ಕೊನೆಯ 7 ದಿನಗಳನ್ನು ಪವಿತ್ರ ಸಪ್ತಾಹವನ್ನಾಗಿ ಆಚರಿಸಲಾಗುತ್ತದೆ. ಗರಿಗಳ ರವಿವಾರದೊಂದಿಗೆ ಪ್ರಾರಂಭಗೊಳ್ಳುವ ಈ ಸಪ್ತಾಹ ಈಸ್ಟರ್‌ ರವಿವಾರ ಮುಕ್ತಾಯಗೊಳ್ಳುತ್ತದೆ. ಈ ಸಪ್ತಾಹದ ಗುರುವಾರ ಯೇಸುಕ್ರಿಸ್ತರ ಕೊನೆಯ ಭೋಜನದ ದಿನ, ಶುಕ್ರವಾರ ಯೇಸು ಕ್ರಿಸ್ತರು ಶಿಲುಬೆಯಲ್ಲಿ ಮರಣಿಸಿದ ದಿನ, ಶನಿವಾರ ಈಸ್ಟರ್‌ ಹಬ್ಬದ ಜಾಗರಣೆ ಹಾಗೂ ರವಿವಾರ ಈಸ್ಟರ್‌ ಅಥವಾ ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನಗೊಂಡ ಹಬ್ಬವನ್ನು ಆಚರಿಸಲಾಗುತ್ತದೆ.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ

Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ

Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

BJP Protest: ರೈತರ ಜಮೀನು ವಕ್ಫ್ ಖಾತೆಗೆ ಭೂಪರಿವರ್ತನೆ

BJP Protest: ರೈತರ ಜಮೀನು ವಕ್ಫ್ ಖಾತೆಗೆ ಭೂಪರಿವರ್ತನೆ

Mangaluru: ಮಹಾಕಾಳಿಪಡ್ಪು ಕೆಳಸೇತುವೆ ಜನವರಿಯಲ್ಲಿ ಪೂರ್ಣ

Mangaluru: ಮಹಾಕಾಳಿಪಡ್ಪು ಕೆಳಸೇತುವೆ ಜನವರಿಯಲ್ಲಿ ಪೂರ್ಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.