ಹಾವೇರಿ ನುಡಿಜಾತ್ರೆ ಸದ್ಯಕ್ಕಿಲ್ಲ?

­ಮೇ 20ರಿಂದ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಯಾಗಿತ್ತು

Team Udayavani, Apr 18, 2022, 10:05 AM IST

6

ಹಾವೇರಿ: ಹಾವೇರಿಯಲ್ಲಿ 86ನೇ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ನಡೆಸಲು ಹಲವು ಬಾರಿ ಮುಹೂರ್ತ ನಿಗದಿ ಮಾಡಿದ್ದರೂ ಇನ್ನೂ ಕಾಲ ಕೂಡಿ ಬಂದಂತೆ ಕಾಣುತ್ತಿಲ್ಲ. ಮೇ 20ರಿಂದ ಮೂರು ದಿನಗಳ ಕಾಲ ನಡೆಸಲು ತಾತ್ಕಾಲಿಕ ದಿನಾಂಕ ನಿಗದಿ ಮಾಡಿದ್ದರೂ ಇದುವರೆಗೆ ಸರ್ಕಾರದಿಂದ ಅಧಿಕೃತ ಘೋಷಣೆಯಾಗಿಲ್ಲ. ಹೀಗಾಗಿ ಮೇ ತಿಂಗಳಲ್ಲಿ ನುಡಿ ಜಾತ್ರೆ ನಡೆಯುವ ಬಗ್ಗೆ ಅನಿಶ್ಚಿತತೆ ಎದುರಾಗಿದೆ.

ಈಗಾಗಲೇ ಕೋವಿಡ್‌ ಕಾರಣದಿಂದ ಎರಡು ವರ್ಷಗಳಿಂದ ಸಾಹಿತ್ಯ ಸಮ್ಮೇಳನ ನಡೆಸಲು ಸಾಧ್ಯವಾಗಿರಲಿಲ್ಲ. ಸದ್ಯ ಕೋವಿಡ್‌ ಸಂಪೂರ್ಣ ನಿಯಂತ್ರಣಕ್ಕೆ ಬಂದಿರುವುದರಿಂದ ಮೇ ತಿಂಗಳಲ್ಲಿ ಸಮ್ಮೇಳನ ನಡೆಸಲು ಕಳೆದ ಮಾರ್ಚ್‌ ತಿಂಗಳಲ್ಲಿ ಕಸಾಪ ರಾಜ್ಯಾಧ್ಯಕ್ಷ ಮಹೇಶ ಜೋಶಿ ಅಧ್ಯಕ್ಷ‌ತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮೇ 20, 21 ಮತ್ತು 22ರಂದು ಸಮ್ಮೇಳನ ನಡೆಸುವ ಬಗ್ಗೆ ತಾತ್ಕಾಲಿಕ ದಿನಾಂಕ ನಿಗದಿ ಮಾಡಲಾಗಿತ್ತು.

ಈ ಬಗ್ಗೆ ಸಿಎಂ ಜತೆ ಚರ್ಚಿಸಿ ನಿರ್ದಿಷ್ಟ ದಿನಾಂಕ ಘೋಷಿಸುವುದಾಗಿ ಅವರು ತಿಳಿಸಿದ್ದರು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ ಅವರೊಂದಿಗೆ ಮಹೇಶ ಜೋಶಿ ಅವರು ಸಿಎಂ ಭೇಟಿಯಾಗಿ ಚರ್ಚಿಸಿದ್ದರು. ಆದರೆ ಇದುವರೆಗೂ ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟ ಸೂಚನೆ ನೀಡದಿರುವುದರಿಂದ ಮೇ ತಿಂಗಳಲ್ಲಿ ಸಮ್ಮೇಳನ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

ಕೋವಿಡ್‌ ಮೊದಲ ಅಲೆ ಮುಗಿದ ಬಳಿಕ ಕಳೆದ ವರ್ಷ ಫೆ.26ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕೆಲವೇ ದಿನಗಳಲ್ಲಿ ಎರಡನೇ ಅಲೆ ಶುರುವಾಗಿದ್ದರಿಂದ ನುಡಿಜಾತ್ರೆಯ ತಯಾರಿ ಬಂದ್‌ ಮಾಡಲಾಗಿತ್ತು. ಈಗ ಎರಡನೇ ಬಾರಿ ಸಮ್ಮೇಳನ ದಿನಾಂಕ ಮುಂದೂಡಲ್ಪಟ್ಟರೂ ಅಚ್ಚರಿಯಿಲ್ಲ ಎಂಬ ಮಾತು ಕೇಳಿ ಬರುತ್ತಿದೆ.

ಸಿದ್ಧತೆಗೆ ಬೇಕು ಸಮಯಾವಕಾಶ: ಲಕ್ಷಾಂತರ ಜನ ಸೇರುವ ಸಾಹಿತ್ಯ ಸಮ್ಮೇಳನಕ್ಕೆ ಕನಿಷ್ಟ ಮೂರು ತಿಂಗಳ ಮುಂಚಿತವಾಗಿಯೇ ಸಿದ್ಧತಾ ಕಾರ್ಯ ಆರಂಭಿಸಬೇಕಾಗುತ್ತದೆ. ಇಲ್ಲಿಯ ಜಿಎಚ್‌ ಕಾಲೇಜು ಪಕ್ಕದ ಖಾಲಿ ಜಾಗದಲ್ಲಿ ಸಮ್ಮೇಳನ ನಡೆಸಲು ಸ್ಥಳ ಗುರುತಿಸಲಾಗಿದೆ. ಆದರೆ ಅಲ್ಲಿ ಗಿಡ ಗಂಟಿ ಬೆಳೆದಿದ್ದು, ಎತ್ತರ ತಗ್ಗುಗಳಿಂದ ಕೂಡಿದೆ. ಅಲ್ಲಿ ಸ್ವತ್ಛತಾ ಕಾರ್ಯ ಕೈಗೊಂಡು ಜಾಗ ಸಮತಟ್ಟು ಮಾಡಬೇಕಿದೆ.

ಈ ಸಲ ಸಮ್ಮೇಳನ ನಡೆಸಲು ಅನುದಾನಕ್ಕೆ ಕಾಯುವ ಪ್ರಮೇಯವಿಲ್ಲ. ಬಜೆಟ್‌ನಲ್ಲೇ 20 ಕೋಟಿ ರೂ. ಘೋಷಣೆ ಮಾಡಲಾಗಿದೆ. ಆದರೆ ವೇದಿಕೆ ನಿರ್ಮಾಣ ಸೇರಿದಂತೆ ಅಗತ್ಯ ಸಿದ್ಧತೆಗೆ ಸಮಯಾವಕಾಶ ಬೇಕಾಗಲಿದೆ. ಈ ಸಲ ಸಮಾನಾಂತರ ವೇದಿಕೆಗಳನ್ನು ಮಾಡದೇ ಮುಖ್ಯ ವೇದಿಕೆಯಲ್ಲೇ ಎಲ್ಲ ಕಾರ್ಯಕ್ರಮ, ಗೋಷ್ಠಿ ನಡೆಸುವ ಬಗ್ಗೆ ಆಸಕ್ತಿ ತೋರಲಾಗಿದೆ. ಡಿಜಿಟಲ್‌ ಟಚ್‌ ಕೊಡುವ ಬಗ್ಗೆಯೂ ಕಸಾಪ ರಾಜ್ಯಾಧ್ಯಕ್ಷ‌ರು ಹೇಳಿದ್ದಾರೆ.  ಮೇ ತಿಂಗಳಲ್ಲಿ ನಡೆದರೆ ಬಿಸಿಲು, ಸೆಕೆ ಪ್ರಮಾಣ ಹೆಚ್ಚಿರುವುದರಿಂದ ಎಸಿ ಅಳವಡಿಸುವ ಬಗ್ಗೆಯೂ ಮಾತನಾಡಿದ್ದರು. ಇವೆಲ್ಲ ತಯಾರಿ ಆಗಬೇಕೆಂದರೆ ಹೆಚ್ಚಿನ ಸಮಯ ಬೇಕಾಗಲಿದೆ.

ಸ್ಪಷ್ಟ ನಿರ್ಧಾರ ಘೋಷಿಸಲಿ: ಸಮ್ಮೇಳನ ನಡೆಯುವ ದಿನಾಂಕಕ್ಕೆ ಇನ್ನು ಒಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ಲಕ್ಷಾಂತರ ಜನ ಸೇರುವ ಸಾಹಿತ್ಯ ಸಮ್ಮೇಳನವನ್ನು ಶಿಸ್ತುಬದ್ಧವಾಗಿ ಮಾಡದಿದ್ದರೆ ಹಾವೇರಿ ಜಿಲ್ಲೆಗೆ ಮತ್ತೂಮ್ಮೆ ಕೆಟ್ಟ ಹೆಸರು ತಪ್ಪಿದ್ದಲ್ಲ. ಸಮ್ಮೇಳನದ ಆಮಂತ್ರಣ ಪತ್ರಿಕೆ, ಸ್ಮರಣ ಸಂಚಿಕೆ, ವೇದಿಕೆ ನಿರ್ಮಾಣ, ಅತಿಥಿಗಳಿಗೆ ಊಟ ವಸತಿ ಸೌಲಭ್ಯ ಕಲ್ಪಿಸಲು ಅಗತ್ಯ ಸಿದ್ಧತೆ ನಡೆಸಬೇಕಿದೆ. ಸಮ್ಮೇಳನವನ್ನು ಈಗ ನಿಗದಿಪಡಿಸಿದ ತಾತ್ಕಾಲಿಕ ದಿನಾಂಕದಲ್ಲೇ ನಡೆಸುವುದಾದರೆ ಅಥವಾ ಮುಂದೂಡುವ ಬಗ್ಗೆಯಾದರೂ ಸರ್ಕಾರ ಸ್ಪಷ್ಟ ನಿರ್ಧಾರ ಘೋಷಿಸಬೇಕು. ಆ ಮೂಲಕ ಸಾರ್ವಜನಿಕರ ಗೊಂದಲಕ್ಕೆ ತೆರೆ ಎಳೆಯಬೇಕಿದೆ.

ತರಾತುರಿಯಲ್ಲಿ ಸಮ್ಮೇಳನ ಬೇಡ: ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಅವಾಂತರ ಶುರುವಾಗಿದೆ. ಸಮ್ಮೇಳನ ನಡೆಯುವ ಸ್ಥಳ ಕಪ್ಪು ಮಣ್ಣಿನಿಂದ ಕೂಡಿರುವುದರಿಂದ ಒಮ್ಮೆ ಮಳೆಯಾದರೆ ಹಲವು ದಿನ ತೇವಾಂಶ ಇರುತ್ತದೆ. ವೇದಿಕೆ ಇತ್ಯಾದಿ ತಯಾರಿ ಆದ ಮೇಲೆ ಗಾಳಿ, ಮಳೆಯಾದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಎನ್ನಲಾಗುತ್ತಿದೆ. ಸಮ್ಮೇಳನ ಆಯೋಜನೆಗೆ ತಾತ್ಕಾಲಿಕ ನಿಗದಿ ಮಾಡಿರುವ ದಿನಾಂಕಕ್ಕೆ ಕೇವಲ ಇನ್ನು ಒಂದು ತಿಂಗಳಷ್ಟೇ ಬಾಕಿ ಉಳಿದಿದ್ದು, ಇಷ್ಟು ಕಡಿಮೆ ಅವ ಧಿಯಲ್ಲಿ ಸಮ್ಮೇಳನ ನಡೆಸುವುದು ಕಷ್ಟ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ತರಾತುರಿಯಲ್ಲಿ ಸಮ್ಮೇಳನ ನಡೆಸುವುದಕ್ಕಿಂತ ಮಳೆಗಾಲ ಬಳಿಕ ನವೆಂಬರ್‌, ಡಿಸೆಂಬರ್‌ ವೇಳೆಗೆ ನಡೆಸುವುದೇ ಸೂಕ್ತ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿವೆ. ಆದ್ದರಿಂದ ಸರ್ಕಾರ ಹಾಗೂ ಕಸಾಪ ಪದಾಧಿಕಾರಿಗಳು ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಿದೆ.

ಸಮ್ಮೇಳನದ ದಿನಾಂಕ ನಿಗದಿ ಕುರಿತು ಉಸ್ತುವಾರಿ ಸಚಿವರು ಹಾಗೂ ಕಸಾಪ ರಾಜ್ಯಾಧ್ಯಕ್ಷ‌ರು ಒಮ್ಮೆ ಸಿಎಂ ಅವರನ್ನು ಭೇಟಿಯಾಗಿದ್ದಾರೆ. ಆದರೆ ಸಿಎಂ ಯಾವುದೇ ಅಭಿಪ್ರಾಯ ತಿಳಿಸಿಲ್ಲ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಅವಾಂತರ ಶುರುವಾಗಿದ್ದು, ಸಮ್ಮೇಳನ ಆಯೋಜಿಸಿದರೆ ತೊಂದರೆ ಎದುರಾಗಬಹುದು ಎಂಬ ಬಗ್ಗೆ ಆತಂಕವಿದೆ. ನವಂಬರ್‌, ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸುವುದು ಸೂಕ್ತವಾಗಿದ್ದು, ಮುಖ್ಯಮಂತ್ರಿಗಳು ಕೈಗೊಳ್ಳುವ ತೀರ್ಮಾನದ ಮೇಲೆ ಎಲ್ಲವೂ ನಿಂತಿದೆ.   -ಲಿಂಗಯ್ಯ ಹಿರೇಮಠ,ಕಸಾಪ ಜಿಲ್ಲಾಧ್ಯಕ್ಷ‌          ­

ವೀರೇಶ ಮಡ್ಲೂರ

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.