ಗ್ರಾಮೀಣ ಪ್ರದೇಶದಲ್ಲಿ ಜಾನಪದ ಬೇರು ಸುಭದ್ರ

ಜಾನಪದ ವಸ್ತು ಪ್ರದರ್ಶನ ಉದ್ಘಾಟಿಸಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಭಿಮತ

Team Udayavani, Apr 18, 2022, 2:46 PM IST

villa

ಸಾಗರ: ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಜಾನಪದ ಬೇರುಗಳು ಭದ್ರವಾಗಿದೆ. ಆದರೆ ಜಾನಪದ ಸಂಸ್ಕೃತಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಾಮೂಹಿಕ ಪ್ರಯತ್ನ ಅಗತ್ಯ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.

ತಾಲೂಕಿನ ಸಿರಿವಂತೆಯಲ್ಲಿ ಭಾನುವಾರ ಕರ್ನಾಟಕ ಜಾನಪದ ಪರಿಷತ್‌, ಜಿಲ್ಲಾ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ಸಿರಿವಂತೆ ಗ್ರಾಪಂ, ಕನ್ನಡ ಸಾಹಿತ್ಯ ಪರಿಷತ್‌ ಮತ್ತು ತಾಳಗುಪ್ಪ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಪಂ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಎರಡನೇ ಜಾನಪದ ಸಮ್ಮೇಳನದಲ್ಲಿ ಜಾನಪದ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಜಾನಪದ ಕಲೆ ಜೀವಂತವಾಗಿದೆ. ಹಳ್ಳಿಯ ಜನರ ಬದುಕಿನ ಜೊತೆ ಬೆಸೆದುಕೊಂಡಿರುವ ಜಾನಪದ ಕಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಸಮ್ಮೇಳನಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದರು. ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿಗಂದೂರು ಕ್ಷೇತ್ರದ ಧರ್ಮದರ್ಶಿ ಡಾ| ರಾಮಪ್ಪ ಸಿಗಂದೂರು, ಯುವಜನಾಂಗ ಜಾನಪದ ಕ್ಷೇತ್ರದತ್ತ ಆಸಕ್ತಿ ಬೆಳೆಸಿಕೊಳ್ಳಬೇಕು. ಅನಾದಿ ಕಾಲದಿಂದಲೂ ಆಧುನಿಕತೆಯ ಅಬ್ಬರದ ನಡುವೆಯೂ ಜಾನಪದ ಕಲೆ ಜೀವಂತವಾಗಿದೆ ಎಂದರೆ ಅದಕ್ಕೆ ಗ್ರಾಮೀಣ ಜನರ ಬದ್ಧತೆ ಕಾರಣವಾಗಿದೆ. ಇಂತಹ ಜೀವಂತ ಕಲೆಯನ್ನು ಉಳಿಸಿಕೊಳ್ಳುವ ಸಂಕಲ್ಪ ಮನೆ- ಮನೆಯಲ್ಲೂ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಮ್ಮೇಳನದ ಸರ್ವಾಧ್ಯಕ್ಷ ಶಿಕಾರಿಪುರದ ಡೊಳ್ಳಿನ ಹುಚ್ಚಪ್ಪ ಮಾತನಾಡಿ, ಜಾನಪದ ಕಲೆ ಬಗ್ಗೆ ಸರ್ಕಾರದ ನಿರಾಸಕ್ತಿ ಸಲ್ಲದು. ಅನಕ್ಷರಸ್ಥರ ಮೂಲಕ ಅಸ್ತಿತ್ವ ಕಂಡುಕೊಂಡ ಜಾನಪದ ಕಲೆಗೆ ಪೋಷಣೆಯ ಕೊರತೆ ಇದೆ. ಜಾನಪದ ಕಲೆ ಮತ್ತು ಕಲಾವಿದರ ಸಂಕಷ್ಟವನ್ನು ಅರಿತು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಯೋಜನೆಗಳನ್ನು ಸರ್ಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಸಾಹಿತಿ ವಿ. ಗಣೇಶ್‌ ಬರೆದಿರುವ ‘ಜಾನಪದ ಕಥೆಗಳು’ ಪುಸ್ತಕ ಬಿಡುಗಡೆ ಮಾಡಲಾಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಿ. ಮಂಜುನಾಥ್‌ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾಗತ ಸಮಿತಿ ಅಧ್ಯಕ್ಷ ಮನೋಜ್‌ ಜನ್ನೆಹಕ್ಲು, ಗುಡ್ಡಪ್ಪ ಜೋಗಿ, ಡಾ|ಮೋಹನ್‌ ಚಂದ್ರಗುತ್ತಿ, ಸಾವಿತ್ರಿ ಚಂದ್ರಪ್ಪ, ಲೋಕೇಶ್‌ ಗಾಳಿಪುರ, ಲೋಕೇಶ್‌ ಎಸ್‌.ಎಲ್‌., ವಿ.ಟಿ. ಸ್ವಾಮಿ, ಬಿ.ಡಿ. ರವಿಕುಮಾರ್‌ ಇನ್ನಿತರರು ಇದ್ದರು. ಸ್ನೇಹಸಾಗರ ಮಹಿಳಾ ಮಂಡಳಿ ಸದಸ್ಯರು ಪ್ರಾರ್ಥಿಸಿದರು. ಸತ್ಯನಾರಾಯಣ ಸ್ವಾಗತಿಸಿದರು. ಅನಿಲ್‌ ಗೌಡ ವಂದಿಸಿದರು. ಪರಮೇಶ್ವರ ನಿರೂಪಿಸಿದರು.

ಇದಕ್ಕೂ ಮೊದಲು ದುರ್ಗಾಂಬಾ ದೇವಸ್ಥಾನದಿಂದ ಹೊರಟ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಜಾನಪದ ಕಲಾವಿದೆ ಲಕ್ಷ್ಮಮ್ಮ ಗಡೇಮನೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಅನೇಕ ಜಾನಪದ ಕಲಾತಂಡಗಳು ಪಾಲ್ಗೊಂಡು ಜಾನಪದ ಸೊಗಡನ್ನು ಪರಿಚಯ ಮಾಡಿಕೊಟ್ಟರು.‌

ಟಾಪ್ ನ್ಯೂಸ್

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ

police-ban

Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.