ಗಾಳ ಹಾಕಿ ಮೀನು ಹಿಡಿಯುವ ಉತ್ಸವಕ್ಕೆ ಯತ್ನ

ಬೈತಖೋಲದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ

Team Udayavani, Apr 18, 2022, 5:18 PM IST

25

ಕಾರವಾರ: ಗಾಳಹಾಕಿ ಮೀನು ಹಿಡಿಯುವ ಉತ್ಸವವನ್ನು ಮುಂದಿನ ದಿನಗಳಲ್ಲಿ ಮಾಡುವ ಯೋಚನೆಯಿದೆ. ಗಾಳ ಹಾಕುವ ರಾಷ್ಟ್ರೀಯ, ಅಂತಾರಾಷ್ಟ್ರೀಯ ಸ್ಪರ್ಧಾಳುಗಳನ್ನು ಆಹ್ವಾನಿಸಿ ಆ ಮೂಲಕ ಪ್ರವಾಸೋದ್ಯಮ ಉತ್ತೇಜಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಹೇಳಿದರು.

ಅವರು ಸರ್ವಋತು ಬಂದರು ಪ್ರದೇಶ ಕಾರವಾರದ ಬೈತಖೋಲದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಗಾಳ ಹಾಕುವ ಸ್ಪರ್ಧೆ ಮುಂದಿನ ದಿನದಲ್ಲಿ ದೊಡ್ಡ ಮಟ್ಟದಲ್ಲಿ ಮಾಡೋಣ ಎಂದರು.

ಸಮುದ್ರದಲ್ಲಿ ಮೀನಿಗಾಗಿ ಹರಸಹಾಸಪಟ್ಟರು ಖಾಲಿ ಕೈಯಲ್ಲಿ ಮರಳಬೇಕಾದ ಅನಿವಾರ್ಯತೆ ಇರುವ ಬಗ್ಗೆ ಕೇಳಿದ್ದೇನೆ. ಗಾಳ ಪದ್ಧತಿ ಮತ್ತೆ ಬೆಳೆಯಬೇಕು. ಮುಂದಿನ ದಿನದಲ್ಲಿ ಇಂಥ ಸ್ಪರ್ಧೆ ಉತ್ತಮ ರೀತಿಯಲ್ಲಿ ನಡೆಯಲಿ ಎನ್ನುವುದ ನನ್ನ ಆಸೆಯಾಗಿದ್ದು, ಇದಕ್ಕೆ ಬೇಕಾದ ಎಲ್ಲ ರೂಪುರೇಷೆಗಳನ್ನು ತಯಾರಿಸಿ ಎಂದರು.

ಸಾಗರದಲ್ಲಿ ಬಲೆ ಹಾಕಿ ಮೀನುಗಾರಿಕೆ ನಡೆಸುವುದನ್ನು ನೋಡಿ ತಿಳಿದುಕೊಳ್ಳಬೇಕೆಂಬ ಹಂಬಲ ಇದೆ. ಇದರಿಂದ ಸಮುದ್ರ ಮಧ್ಯದಲ್ಲಿ ಕಷ್ಟಪಡುವ ಮೀನುಗಾರರ ಬದುಕು ಹೇಗಿದೆ ಎಂಬುದನ್ನು ತಿಳಿದುಕೊಳ್ಳಬೇಕು. ಆದರೆ ಮೀನುಗಾರರ ಬಳಿ ಹೇಳಿದರೆ ಯಾರು ಕರೆದುಕೊಂಡು ಹೋಗಲು ಸಿದ್ಧರೇ ಇಲ್ಲ ಎಂದು ಮೀನುಗಾರ ಮುಖಂಡರಿಗೆ ತಿಳಿಸಿದರು.

ಸದ್ಯದಲ್ಲಿಯೇ ಮೀನುಗಾರಿಕೆ ತೆರಳಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮೀನು ಮಾರಾಟಗಾರ ಫೆಡರೇಶನ್‌ ಅಧ್ಯಕ್ಷ ರಾಜು ತಾಂಡೇಲ ಮಾತನಾಡಿ, ಸಮುದ್ರದಲ್ಲಿ ಮೀನುಗಾರರು ಮೀನು ಹಿಡಿಯುವ ಸಂದರ್ಭದಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಸೀಬರ್ಡ್‌ ಆದ ಮೇಲೆ ಅವರ ದಬ್ಟಾಳಿಕೆ ಹೆಚ್ಚಾಗಿದೆ. ಹೊಡೆಯುವುದು, ಬಂದೂಕು ತೋರಿಸುವುದು ಮಾಡುತ್ತಾರೆ. ಇದರಿಂದ ಮೀನುಗಾರರ ಭಯದ ವಾತಾವರಣದಲ್ಲೇ ಮೀನುಗಾರಿಕೆ ಮಾಡುವ ಅನಿವಾರ್ಯತೆ ಇದೆ. ಜಿಲ್ಲಾಧಿಕಾರಿಗಳಾದ ಮುಗಿಲನ್‌ ಅವರು ಗಮನಕ್ಕೆ ತಂದಾಗ, ಅವರು ಸೀಬರ್ಡ್‌ ಅಧಿಕಾರಿಗಳಿಗೆ ಕೆಲ ಸೂಚನೆ ನೀಡಿದ್ದಾರೆ. ಈಗ ಸೀಬರ್ಡ್‌ನವರ ದಬ್ಟಾಳಿಕೆ ಕಡಿಮೆಯಾಗಿದೆ ಎಂದರು.

ಮೀನುಗಾರರದ್ದು ಸಂಕಷ್ಟದ ಬದುಕು. ಮೀನುಗಾರಿಕೆಗೆ ತೆರಳಿದ ಎಲ್ಲರಿಗೂ ಮೀನು ದೊರೆಯುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಗಾಳಿ ಮಳೆ ನಡುವೆ ಮೀನಿಗಾಗಿ ಹೋರಾಡುವ ಮೀನುಗಾರರಿಗೂ ಇದೀಗ ಗಾಳ ಹಾಕಿ ಮೀನು ಹಿಡಿಯುವ ಪದ್ಧತಿ ಮರೆತುಹೋಗಿದೆ. ಆದರೆ ಈ ಪದ್ಧತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುವಕರು ಈ ಸ್ಪರ್ಧೆ ಆಯೋಜಿಸಿರುವುದು ಒಳ್ಳೆಯದು ಎಂದು ಹೇಳಿದರು.

ಮೀನುಗಾರಿಕಾ ಇಲಾಖೆ ಉಪನಿರ್ದೇಶಕಿ ಕವಿತಾ ಆರ್‌.ಕೆ., ಮೀನುಗಾರ ಮುಖಂಡ ರಾಜೇಶ ಮಾಜಾಳಿಕರ್‌, ನಗರಸಭೆ ಸದಸ್ಯೆ ಸ್ನೇಹಲ್‌ ಚೇತನ ಹರಿಕಂತ್ರ, ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಪ್ರತೀಕ ಶೆಟ್ಟಿ, ತುಕಾರಾಮ್‌ ಉಳ್ವೆàಕರ್‌, ಅಶೋಕ ಕುಡ್ತಲ್ಕರ್‌ ಸೇರಿದಂತೆ ಇನ್ನಿತರರು ಇದ್ದರು.

ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆಗೆ ಉತ್ತರ ಕನ್ನಡ ಜಿಲ್ಲೆ ಮಾತ್ರವಲ್ಲದೆ ಹುಬ್ಬಳ್ಳಿ ಸೇರಿ ವಿವಿಧ ಭಾಗಗಳಿಂದ ಸುಮಾರು 30ಕ್ಕೂ ಹೆಚ್ಚು ಸ್ಪರ್ಧಾಳುಗಳು ಆಗಮಿಸಿದ್ದರು. ಕೈಯಲ್ಲಿ ಮತ್ತು ರೇಡಿಯಂ ಮೂಲಕ ಹೀಗೆ ಎರಡು ವಿಧದಲ್ಲಿ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆಯೂ ಸಂಜೆವರೆಗೆ ನಡೆಯಿತು.

ಪರಿಣಿತ ಗಾಳ ಹಾಕುವ ಸ್ಪರ್ಧಾಳುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕೆಲವರು ಸಣ್ಣ ಪುಟ್ಟ ಮೀನುಗಳನ್ನು ಹಿಡಿದರೆ ಇನ್ನು ಕೆಲವರು ಎರಡು ಕೆ.ಜಿ ತೂಕದ ಮೀನನ್ನು ಸಹ ಹಿಡಿದು ಗಮನ ಸೆಳೆದರು. ಇನ್ನು ಕೇವಲ ಮೀನು ಹಿಡಿಯಲು ಮಾತ್ರವಲ್ಲದೆ ನೋಡಲು ಕೂಡ ಸಾಕಷ್ಟು ಮಂದಿ ಆಗಮಿಸಿದ್ದರು. ನಗರದ ಬೈತಖೋಲ್‌ನಲ್ಲಿ ಯುವ ಮೀನುಗಾರರ ಸಂಘರ್ಷ ಸಮಿತಿಯು ರವಿವಾರ ಆಯೋಜಿಸಿದ್ದ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ ಕಾರ್ಯಕ್ರಮ ಆಯೋಜಿಸಿತ್ತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ

3-dandeli

Dandeli: ಸಂಡೇ ಮಾರ್ಕೆಟ್ ಬಳಿ ಸರಣಿ ಕಳ್ಳತನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.