ವಿಧಾನಸಭಾ ಚುನಾವಣೆಗೆ 50 ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ: ಶ್ರೀ ಬ್ರಹ್ಮಾನಂದ ಸರಸ್ವತಿ
ಸರಕಾರ ಸಂಬಳ, ಪಿಂಚಣಿ ಬೇಡ, ಕೇವಲ ರೇಷನ್ ಕೊಟ್ಟರೆ ಸಾಕು
Team Udayavani, Apr 18, 2022, 7:15 PM IST
ಭಟ್ಕಳ: ರಾಜಕೀಯ ಕ್ಷೇತ್ರ ಸಂಪೂರ್ಣ ಹಾಳಾಗಿದ್ದು ರಾಜ್ಯಾಂಗದ ವ್ಯವಸ್ಥೆಯೇ ದಿಕ್ಕು ತಪ್ಪಿದೆ, ರಾಜ್ಯಾಂಗದಲ್ಲಿ ಸಮಗ್ರ ಬದಲಾವಣೆ ತರಲು ಮುಂದಿನ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ನಾನೂ ಸೇರಿದಂತೆ 50 ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ ಎಂದು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಹೇಳಿದ್ದಾರೆ.
ಶಿರಾಲಿಯ ಹಳೇಕೋಟೆ ಹನುಮಂತ ದೇವಸ್ಥಾನದ ಶಿಲಾಮಯ ದೇಗುಲ ಸಮರ್ಪಣೆ, ಶ್ರೀ ದೇವರ ಪುನರ್ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಇಂದು ಶಾಸಕನಾಗುವವನ್ಜು ತಾನೆಷ್ಟು ಗಳಿಸುತ್ತೇನೆ ಎನ್ನುವ ಲೆಕ್ಕಾಚಾರದೊಂದಿಗೆ ಚುನಾವಣೆಗೆ ನಿಲ್ಲುತ್ತಾನೆ. ನಮಗೆ ಸರಕಾರ ಸಂಬಳ ಕೊಡುವುದೂ ಬೇಡ, ಕೇವಲ ರೇಷನ್ ಕೊಟ್ಟರೆ ಸಾಕು, ಕ್ಷೇತ್ರ ಸುತ್ತುವ ಭತ್ಯೆಯನ್ನು ಕೂಡಾ ನಾವು ಕೇಳುವುದಿಲ್ಲ, ಪಿಂಚಣಿಯಂತೂ ಬೇಡವೇ ಬೇಡ ಎಂದ ಸ್ವಾಮೀಜಿಗಳು,ಪ್ರಜೆಗಳ ದುಡ್ದು ಅನಾವಶ್ಯಕ ದುಂದು ವೆಚ್ಚವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಚುನಾವಣೆ ಆಖಾಡಕ್ಕೆ ಧುಮುಕಲು ನಮಗೆ ಮೋದೀಜಿ ಹಾಗೂ ಯೋಗೀಜಿ ಪ್ರೇರಣೆ ಎಂದ ಅವರು ನಾವು ಎಲ್ಲರೂ ಯಾವುದೇ ಪಕ್ಷದಿಂದ ನಿಲ್ಲುವುದಿಲ್ಲ, ನಮಗೆ ಭಗವದ್ಗೀತೆಯೇ ಚಿಹ್ನೆ ಎಂದೂ ಹೇಳಿದರು.
ವಿಧಾನ ಸಭೆಯ ಪ್ರವೇಶಕ್ಕೆ ಕನಿಷ್ಟ ವಿದ್ಯಾರ್ಹತೆ ನಿಗದಿಯಾಗಬೇಕು, ಮಂತ್ರಿಗಳಾಗಲು ಕೂಡಾ ವಿದ್ಯಾರ್ಹತೆಯನ್ನು ಮಾನದಂಡವನ್ನಾಗಿಸಬೇಕು, ಇಂದು ವಿದ್ಯೆಯಿಲ್ಲದ ಮಂತ್ರಿಗಳು ನಮ್ಮನ್ನಾಳುತ್ತಿದ್ದಾರೆ ಎಂದರೆ ಇದೊಂದು ವಿಡಂಬನೆಯಲ್ಲದೇ ಬೇರೇನೂ ಅಲ್ಲ. ಶಾಸಕರಿಗೆ ಪ್ರತಿ ತಿಂಗಳೂ ಒಂದು ತರಬೇತಿಯನ್ನು ಕಡ್ದಾಯಗೊಳಿಸಬೇಕು, ಅವರ ಹಕ್ಕು ಬಾಧ್ಯತೆಗಳನ್ನು, ಸಂವಿಧಾನದ ಆಶಯವನ್ನು ತಿಳಿಸಬೇಕು ಎಂದೂ ಶ್ರೀಗಳು ಹೇಳಿದರು.
ವಿಧಾನ ಸೌಧದಲ್ಲಿ ಇನ್ನಿಲ್ಲದಂತೆ ಕಚ್ಚಾಡಿಕೊಳ್ಳುವವರು ಹೊರ ಬಂದ ತಕ್ಷಣ ಟೇಬಲ್ ಹಂಚಿಕೊಂಡು ಚಹಾ ಸೇವಿಸುತ್ತಾರೆ. ಕೇವಲ ಕ್ಷುಲ್ಲಕ ಕಾರಣಕ್ಕಾಗಿ ಜಗಳ ಮಾಡುತ್ತಾ ಜನರ ಹಣ ದುರುಪಯೋಗವಾಗುತ್ತಿದೆ. ವಿಧಾನ ಸಭಾಧ್ಯಕ್ಷ ಕಾಗೇರಿಯವರು ಸಭೆಯನ್ನು ನಡೆಸಲು ಪಡುವ ಪಡಿಪಾಟಿಲು ನೋಡಿಯೇ ನಮಗೆ ಬೇಸರವೆನಿಸುತ್ತಿದೆ, ಇದು ಸರಿಯಾಗಬೇಕು, ರಾಜ್ಯಾಂಗ ಹಳಿತಪ್ಪಿದ್ದನ್ನು ಸರಿಪಡಿಸಬೇಕು ಎನ್ನುವುದೇ ನಮ್ಮ ಸ್ಪರ್ಧೆಯ ಉದ್ದೇಶ ಎಂದರು.
ನಮ್ಮ ಪ್ರಚಾರಕ್ಕೆ ಜನ ಬೇಡ, ಹಿಮಾಲಯದಿಂದ ಸಾಧು ಸಂತರು ಸಾವಿರ ಸಂಖ್ಯೆಯಲ್ಲಿ ಬರುತ್ತಾರೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು. ವಿದೇಶ ಯಾತ್ರೆಯ ನೆಪದಲ್ಲಿ ಕೋಟ್ಯಂತರ ರೂಪಾಯಿ ಜನರ ತೆರಿಗೆಯ ಹಣವನ್ನು ವೆಚ್ಚ ಮಾಡಲಾಗುತ್ತಿದ್ದು ವಿದೇಶ ಯಾತ್ರೆಯ ಪರಿಣಾಮ ಮಾತ್ರ ಶೂನ್ಯ ಎಂದರು.
ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ರಾಜಕೀಯ ಕ್ಷೇತ್ರ ಸ್ವಚ್ಚವಾಗಬೇಕು ಎನ್ನುವ ಮಾರ್ಮಿಕ ನುಡಿಗಳನ್ನು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಡಿದ್ದಾರೆ. ಅವರ ಮಾತಿನಲ್ಲಿ ಬಲವಾದ ಒಂದು ಎಚ್ಚರಿಕೆಯ ಸಂದೇಶವೂ ಇದೆ. ರಾಜಕೀಯ ಕ್ಷೇತ್ರದಲ್ಲಿರುವವರು ಸಂತರ ನೋವುಗಳನ್ನು, ಸಮಾಜದ ಆಶಯಗಳನ್ನು ಅರಿತು ಕೆಲಸ ಮಾಡಿದರೆ ಅದು ಅವರಿಗೆ ಶೋಭೆ ತರುತ್ತದೆ ಎಂದರು.
ದೇವಾಲಯಗಳು ಶತ ಶತಮಾನಗಳ ತನಕ ಶಾಶ್ವತವಾಗಿರುವಂತ ನಮ್ಮ ನಂಬಿಕೆ, ಶೃದ್ದಾ ಭಕ್ತಿಯ ಕೇಂದ್ರಗಳು. ಒಂದು ದೇವಾಲಯ ಮಾತ್ರವಲ್ಲ ಎಲ್ಲಾ ನಮ್ಮ ಸುತ್ತಮುತ್ತಲಿನ ದೇವಾಲಯಗಳನ್ನು ಕೂಡಾ ಉದ್ಧಾರ ಮಾಡಬೇಕು ಎಂದ ಅವರು ಶಿರಾಲಿಯ ಸಾರದಹೊಳೆ ಹಳೇಕೋಟೆ ಶ್ರೀ ಹನುಮಂತ ದೇವಾಲಯ ಅತ್ಯಂತ ಸುಂದರವಾಗಿ ಮೂಡಿ ಬಂದಿದೆ. ವಿಶೇಷವಾಗಿ ಈ ದೇವಾಲಯವನ್ನು ಇಲ್ಲಿನ ಶಿಲ್ಪಿಗಳೇ ನಿರ್ಮಿಸಿದ್ದಾರೆ ಎನ್ನುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಹಿಂದೂ ಧರ್ಮ ಜಗತ್ತಿಗೇ ಜ್ಞಾನದ ಬೆಳಕನ್ನು ನೀಡಿದ ಶ್ರೇಷ್ಟ ಧರ್ಮವಾಗಿದ್ದು ನಮ್ಮ ವೇದ ಉಪನಿಷತ್ತುಗಳು ಸರ್ವೇಜನಾಃ ಸುಖಿನೋ ಭವಂತು ಎಂದು ಸಾರಿವೆ. ನಾವು ಗೋವುಗಳನ್ನು ಪೂಜಿಸುವ ಸಂಸ್ಕೃತಿಯವರಾದರೆ, ನಮ್ಮಲ್ಲಿಯೇ ಗೋ ಹತ್ಯೆ ನಡೆಯುತ್ತದೆ. ರಾಮನ ಬಗ್ಗೆ, ಗೋವಿನ ಬಗ್ಗೆ, ದೇವರ ಬಗ್ಗೆ ಹಗುರವಾಗಿ ಮಾತನಾಡುವವರು ನಮ್ಮಲ್ಲಿಯೇ ಇದ್ದಾರೆ ಎಂದ ಅವರು ದೇಶದಲ್ಲಿ ನೂರಾರು ವರ್ಷಗಳಿಂದ ಸಾಗಿದ್ದ ರಾಮ ಮಂದಿರ ನಿರ್ಮಾಣದ ಕನಸು ಮೋದೀಜಿಯವರು ಬಂದ ನಂತರ ನನಸಾಗಿದೆ. ನಮ್ಮ ಎದುರಗಡೆಯಲ್ಲಿ ಅನೇಕ ಸವಾಲುಗಳಿಗೆ ಅವುಗಳನ್ನು ವಿಶ್ವಾಸದಿಂದ ಎದುರಿಸಬೇಕಾಗಿದೆ ಎಂದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ಆರ್. ಎನ್. ನಾಯ್ಕ ಮಾತನಾಡಿ ಹನುಮಂತ ಸಾವಿರ ಸಾವಿರ ವರ್ಷಗಳ ಹಿಂದೆಯೇ ನಮ್ಮ ಇಂದಿನ ಸಂವಿಧಾನದ ಆಶಯವನ್ನು ಎತ್ತಿ ಹಿಡಿದ ಮಹಾನ್ ವ್ಯಕ್ತಿಯಾಗಿದ್ದಾನೆ. ರಾಮಾಯಣದಲ್ಲಿ ಸ್ತ್ರೀ ಸಂಸ್ಕೃತಿಯನ್ನು ಎತ್ತಿ ಹಿಡಿಯಲು ಆತನೇ ಕಾರಣೀಕರ್ತನಾಗಿದ್ದು ಆತನ ಆದರ್ಶ, ರಾಮ ಭಕ್ತಿಯಿಂದ ದೇವರಾಗಿದ್ದಾನೆ ಎಂದರು.
ಮಾಜಿ ಶಾಸಕ ಜೆ.ಡಿ. ನಾಯ್ಕ ಮಾತನಾಡಿ, ರಾಜಕೀಯ ಇಂದು ಹಳಿತಪ್ಪಿದೆ ಎನ್ನುವುದನ್ನು ಎಲ್ಲರೂ ಒಪ್ಪಿಕೊಳ್ಳಲೇ ಬೇಕಾಗಿದೆ. ಇದಕ್ಕೆ ಪಕ್ಷ ರಾಜಕಾರಣವೇ ಮುಖ್ಯ ಕಾರಣವಾಗಿದೆ. ಪಕ್ಷ ರಾಜಕಾರಣದಲ್ಲಿ ವ್ಯಕ್ತಿ ಮುಖ್ಯವೇ ಹೊರತು ವ್ಯಕ್ತಿತ್ವ ಅಲ್ಲ ಎಂದು ಹೇಳಿದ ಅವರು ಪಕ್ಷದಲ್ಲಿ ಕೇವಲ ಗೆಲ್ಲುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದೆ. ಆತನ ಹಿನ್ನೆಲೆಯನ್ನು ಯಾವ ಪಕ್ಷವೂ ಗಮನಿಸದಿರುವುದು ಇಂದಿನ ಈ ಸ್ಥಿತಿಗೆ ಕಾರಣವಾಗಿದೆ ಎಂದರು.
ಮಾಜಿ ಶಾಸಕ ಮಂಕಾಳ ಎಸ್. ವೈದ್ಯ ಮಾತನಾಡಿ, ಹನುಮಂತ ದೇವಸ್ಥಾನದ ನಿರ್ಮಾಣದ ಆರಂಭದಿಂದಲೂ ಸಮಿತಿಯವರೊಂದಿಗೆ ಸಮನ್ವಯ ಸಾಧಿಸಿ ಬಂದಿದ್ದೇನೆ. ಅವರು ಅನೇಕ ಕಷ್ಟಗಳನ್ನು ಕಂಡಿದ್ದಾರೆ ಹಣ ಸಂಗ್ರಹಣೆಗೆ ಕಷ್ಟವಾಗಿಲ್ಲವಾದರೂ ಅನೇಕ ಬಾರಿ ಸಕಾಲಕ್ಕೆ ದೊರೆಯದೆ ತೊಂದರೆಯಾಗಿದೆ ಎಂದ ಅವರು ಸದಾ ನಿಮ್ಮೊಂದಿಗಿದ್ದೇನೆ ಎನ್ನುವ ಭರವಸೆಯನ್ನು ನೀಡಿದರು.
ವೇದಿಕೆಯಲ್ಲಿ ಶಾಸಕ ಸುನಿಲ್ ನಾಯ್ಕ, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸುಬ್ರಾಯ ನಾಯ್ಕ, ಧರ್ಮದರ್ಶಿ ಸುಬ್ರಾಯ ನಾಯ್ಕ ಕಾಯ್ಕಿಣಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣ ನಾಯ್ಕ, ನಾಥಪಂತದ ಪ್ರಮುಖ ಶಿವರಾಮ ಬಳೇಗಾರ, ಶಿರಸಿ ಮಾರಿಕಾಂಬಾ ದೇವಾಲಯದ ಮಾಜಿ ಅಧ್ಯಕ್ಷ ಡಾ. ವೆಂಕಟೇಶ ನಾಯ್ಕ, ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್., ತಹಸೀಲ್ದಾರ್ ಡಾ. ಸುಮಂತ್ ಬಿ.ಇ., ಕೊಪ್ಪ ಗ್ರಾ.ಪಂ. ಅಧ್ಯಕ್ಷ ರಾಜು ನಾಯ್ಕ, ಮಾವಳ್ಳಿ ಗ್ರಾ,ಪಂ. ಅಧ್ಯಕ್ಷ ಮಹೇಶ ನಾಯ್ಕ, ಪ್ರಸಾದ ಮುನಿಯಂಗಳ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.