ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ: ಸೆಕ್ಷನ್‌ 5ರ ಜಾರಿಗೆ ಅನುಮತಿಸಿ ಹೈಕೋರ್ಟ್‌ ಆದೇಶ

Team Udayavani, Apr 18, 2022, 9:45 PM IST

ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ: ಸೆಕ್ಷನ್‌ 5ರ ಜಾರಿಗೆ ಅನುಮತಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಜಾನುವಾರುಗಳ ಸಾಗಾಟ ಸಂಬಂಧಿಸಿದ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ-2020’ರ ಸೆಕ್ಷನ್‌ 5ರ ಜಾರಿಗೆ ಅನುಮತಿ ನೀಡಿ ಹೈಕೋರ್ಟ್‌ ಆದೇಶ ನೀಡಿದೆ.

ಆದರೆ ಈ ಅನುಮತಿಯು, ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದೂ ಹೈಕೋರ್ಟ್‌ ಹೇಳಿದೆ. ಇದರಿಂದ ಕಾಯ್ದೆಯ ಜಾರಿಗೆ ಎದುರಾಗಿದ್ದ ತಾಂತ್ರಿಕ ಅಡಚಣೆ ದೂರವಾದಂತಾಗಿದೆ.

ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್‌ ಆರಿಫ್ ಜಮೀಲ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾ| ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ಈ ಆದೇಶ ನೀಡಿತು.

ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ನ್ಯಾಯಾಲಯದ ಆದೇಶದಂತೆ, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಸಂರಕ್ಷಣ ಕಾಯ್ದೆ ಸೆಕ್ಷನ್‌ 5ರ ಜಾರಿಗೆ ನಿಯಮಗಳನ್ನು ರೂಪಿಸಲಾಗಿದೆ. ಆದ್ದರಿಂದ ಕಾಯ್ದೆಯ ಸೆಕ್ಷನ್‌ 5ರ ಜಾರಿಗೆ ಅನುಮತಿ ನೀಡಬೇಕು. ಅದಕ್ಕಾಗಿ ನಿಯಮ ರೂಪಿಸಿ ಅವುಗಳನ್ನು ಜಾರಿಗೆ ತರುವವರೆಗೆ ಯಾವುದೇ ವ್ಯಕ್ತಿಯ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು 2021ರ ಜನವರಿ 20ರಂದು ನೀಡಿದ್ದ ಆದೇಶವನ್ನು ಮಾರ್ಪಡಿಸಬೇಕು ಎಂದು ಕೋರಿದರು.

ಅದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿ, ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿದೆ. ಕಾಯ್ದೆ ಮತ್ತು ನಿಯಮಗಳು ಜಾರಿ ಮಾಡುವುದರಿಂದ ನಿರ್ದಿಷ್ಟ ಸಮುದಾಯಕ್ಕೆ ತೊಂದರೆ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ಸೆಕ್ಷನ್‌ 5ರ ಜಾರಿಗೆ ಅನುಮತಿಸಬಾರದು ಎಂದು ಮನವಿ ಮಾಡಿದರು.

ಸರಕಾರದ ಮನವಿ ಮತ್ತು ಅರ್ಜಿದಾರ ಆಕ್ಷೇಪವನ್ನು ದಾಖಲಿಸಿಕೊಂಡ ನ್ಯಾಯಪೀಠ, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯ್ದೆ-2020 ಅನ್ನು ಸರಕಾರ 2021ರ ಫೆ.15ರಂದು ಜಾರಿ ಮಾಡಿದೆ. 2021ರ ಮೇ 24ರಂದು ಅಧಿಸೂಚನೆ ಹೊರಡಿಸಲಾಗಿದೆ. 2021ರ ಮೇ 25ರಂದು ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಈಗ ಕಾಯ್ದೆ ಸೆಕ್ಷನ್‌ 5 ಮತ್ತದರ ಅಡಿ ನಿಯಮ ರೂಪಿಸಲಾಗಿದ್ದು, ಜಾರಿಗೊಳಿಸಲು ನ್ಯಾಯಾಲಯದ ಅನುಮತಿ ಕೋರಿದೆ. ಆದ್ದರಿಂದ 2021ರ ಜ.20ರಂದು ನ್ಯಾಯಾಲಯ ಹೊರಡಿಸಿರುವ ಆದೇಶವನ್ನು ಮಾರ್ಪಾಡು ಮಾಡಲಾಗುತ್ತಿದ್ದು, ಸೆಕ್ಷನ್‌ 5ರ ಜಾರಿಗೆ ಅನುಮತಿ ನೀಡಲಾಗುತ್ತಿದೆ. ಆದರೆ ಇದು ಅರ್ಜಿ ಕುರಿತು ನ್ಯಾಯಾಲಯ ಹೊರಡಿಸುವ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ’ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.

ಇದನ್ನೂ ಓದಿ : ಛತ್ತೀಸ್‌ಗಢ: ನಕ್ಸಲರ ದಾಳಿಯಲ್ಲಿ ನಾಲ್ವರು ಪೊಲೀಸ್‌ ಸಿಬ್ಬಂದಿಗೆ ಗಾಯ

ಹಿನ್ನೆಲೆ:
ಕಾಯ್ದೆಯ ಸೆಕ್ಷನ್‌ 5ರ ಪ್ರಕಾರ ಜಾನುವಾರುಗಳನ್ನು ಸಾಗಿಸುವುದು ಕೂಡ ಅಪರಾಧವಾಗಿದೆ. ಇದರಿಂದ ತಮ್ಮದೇ ಜಾನುವಾರುಗಳನ್ನು ಸಾಗಿಸಲು ರೈತರಿಗೆ ಕಷ್ಟವಾಗಲಿದೆ ಎಂದು ಆಕ್ಷೇಪಿಸಿದ್ದ ಅರ್ಜಿದಾರರು, ಸುಗ್ರೀವಾಜ್ಞೆಗೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದರು. ಆ ಮನವಿ ಪುರಸ್ಕರಿಸಿದ್ದ ಹೈಕೋರ್ಟ್‌, ಕಾಯ್ದೆಗೆ ನಿಯಮಗಳನ್ನು ಅಂತಿಮಗೊಳಿಸಿ ಜಾರಿಯಾಗುವವರೆಗೆ ರಾಜ್ಯದಲ್ಲಿ ಜಾನುವಾರುಗಳನ್ನು ಸಾಗಣೆ ಮಾಡುವವರ ವಿರುದ್ಧ ಸೆಕ್ಷನ್‌ 5ರ ಪ್ರಕಾರ ಯಾವುದೇ ಕಠಿಣ ಕ್ರಮ ಜರುಗಿಸಬಾರದು ಎಂದು ಸರ್ಕಾರಕ್ಕೆ ನಿರ್ದೇಶಿಸಿ 2021ರ ಜ.20ರಂದು ಹೈಕೋರ್ಟ್‌ ಮಧ್ಯಂತರ ಆದೇಶ ಹೊರಡಿಸಿತ್ತು.

ಟಾಪ್ ನ್ಯೂಸ್

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Cong-sabhe

Congress Session: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಜ.21ಕ್ಕೆ ಮರುನಿಗದಿ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Cong-sabhe

Congress Session: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಜ.21ಕ್ಕೆ ಮರುನಿಗದಿ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ

Cong-sabhe

Congress Session: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಜ.21ಕ್ಕೆ ಮರುನಿಗದಿ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.