ಜಹಾಂಗೀರ್‌ಪುರಿ ಹಿಂಸಾಚಾರ: ಗುಂಡಿನ ದಾಳಿ ನಡೆಸಿದ ಸೋನು ಚಿಕ್ನಾ ಅರೆಸ್ಟ್
ಬಾಟಲಿಗಳ ಸರಬರಾಜು ಮಾಡಿದವನೂ ಅರೆಸ್ಟ್
Team Udayavani, Apr 18, 2022, 9:19 PM IST
Image : ANI
ನವದೆಹಲಿ: ಜಹಾಂಗೀರ್‌ಪುರಿ ಹಿಂಸಾಚಾರ ಮತ್ತು ಕೋಮು ಘರ್ಷಣೆಯ ತನಿಖೆಯಲ್ಲಿ ಮತ್ತೊಂದು ಪ್ರಮುಖ ಪ್ರಗತಿಯಲ್ಲಿ ದೆಹಲಿ ಪೊಲೀಸರು ಸೋನು ಚಿಕ್ನಾ ಅಲಿಯಾಸ್ ಇಮಾಮ್ ಅಲಿಯಾಸ್ ಯೂನಸ್‌ನನ್ನು ಸೋಮವಾರ ಬಂಧಿಸಿದ್ದಾರೆ
ಪೊಲೀಸರ ಉಲ್ಲೇಖಿಸಿ ಎಎನ್‌ಐ ವರದಿಯಂತೆ 28 ವರ್ಷದ ಸೋನು ಚಿಕ್ನಾ ಉತ್ತರ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಹನುಮ ಜಯಂತಿಯ ಸಂದರ್ಭದಲ್ಲಿ ನಡೆದ ಘರ್ಷಣೆಯ ಸಂದರ್ಭದಲ್ಲಿ ಗುಂಡಿನ ದಾಳಿ ನಡೆಸಿದ ಆರೋಪಿಯಾಗಿದ್ದಾನೆ.
ದೆಹಲಿ ಪೊಲೀಸರ ಪ್ರಕಾರ, ಸೋನು ಅಲಿಯಾಸ್ ಇಮಾಮ್ ಅಲಿಯಾಸ್ ಯೂನಸ್ ಎಂದು ಗುರುತಿಸಲಾದ 28 ವರ್ಷದ ವ್ಯಕ್ತಿ ನೀಲಿ ಕುರ್ತಾದಲ್ಲಿ ಏಪ್ರಿಲ್ 16 ರಂದು ಜಹಾಂಗೀರ್ಪುರಿ ಪ್ರದೇಶದಲ್ಲಿ ನಡೆದ ಗಲಭೆಯಲ್ಲಿ ಗುಂಡು ಹಾರಿಸುತ್ತಿರುವುದನ್ನು ಸಾಮಾಜಿಕ ಮಾಧ್ಯಮಗಳ ವಿಡಿಯೋ ತುಣುಕಿನಲ್ಲಿ ತೋರಿಸಲಾಗಿದೆ.
ಪೊಲೀಸರ ಪ್ರಕಾರ, ಈತನ ಹುಡುಕಾಟಕ್ಕಾಗಿ ಮತ್ತು ಕುಟುಂಬ ಸದಸ್ಯರ ಪರೀಕ್ಷೆಗಾಗಿ ತಂಡವೊಂದು ಸಿಡಿ ಪಾರ್ಕ್ ರಸ್ತೆಯಲ್ಲಿರುವ ಅವರ ಮನೆಗೆ ಹೋಗಿತ್ತು.
ಬಾಟಲಿಗಳ ಸರಬರಾಜು ಮಾಡಿದವನೂ ಅರೆಸ್ಟ್
ಈ ನಡುವೆ ಸೋಮವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, 36 ವರ್ಷದ ಆರೋಪಿ ಶೇಖ್ ಹಮೀದ್ ಸ್ಕ್ರ್ಯಾಪ್ ಡೀಲರ್ ಆಗಿದ್ದು, ಜಹಾಂಗೀರ್‌ಪುರಿ ಹಿಂಸಾಚಾರದ ಸಂದರ್ಭದಲ್ಲಿ ಎಸೆಯಲು ಬಳಸಿದ ಬಾಟಲಿಗಳನ್ನು ತಾನು ಸರಬರಾಜು ಮಾಡಿದ್ದನ್ನು ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಿದ್ದಾನೆ.
ಇದನ್ನೂ ಓದಿ: ಹಿಂದೂ ದಂಪತಿಗಳು ತಲಾ 4 ಮಕ್ಕಳನ್ನು ಹುಟ್ಟಿಸಿ : ಸಾಧ್ವಿ ರಿತಂಬರಾ
ಇಲ್ಲಿಯವರೆಗೆ, ದೆಹಲಿ ಪೊಲೀಸರು ಘರ್ಷಣೆಯ ಹಿಂದಿನ “ಮುಖ್ಯ ಸಂಚುಕೋರರು” ಮತ್ತು ಸಬ್ ಇನ್ಸ್‌ಪೆಕ್ಟರ್‌ಗೆ ಗುಂಡು ಹಾರಿಸಿದ ವ್ಯಕ್ತಿ ಸೇರಿದಂತೆ 22 ಜನರನ್ನು ಬಂಧಿಸಿದ್ದಾರೆ.
ಹಿಂಸಾಚಾರ ಕುರಿತು ಕ್ರೈಂ ಬ್ರ್ಯಾಂಚ್ ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗಾಗಿ 14 ತಂಡಗಳನ್ನು ರಚಿಸಲಾಗಿದೆ. ಇಂದು ಘಟನೆ ನಡೆದ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ನಾಲ್ಕು ತಂಡ ಭೇಟಿ ನೀಡಿದ್ದು, ಸ್ಯಾಂಪಲ್ಸ್ ಸಂಗ್ರಹಿಸಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಮಾದರಿಯಾಗುವಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.