ಆರೋಗ್ಯ ಮೇಳಕ್ಕೆ ಚಾಲನೆ

ಆರೋಗ್ಯವಂತ ಸಮಾಜದಿಂದ ಸದೃಢ ದೇಶ ನಿರ್ಮಾಣ : ಸಚಿವ ಸುಧಾಕರ್‌

Team Udayavani, Apr 19, 2022, 10:47 AM IST

5

ಮಂಡ್ಯ: ಪ್ರತಿಯೊಬ್ಬ ಪ್ರಜೆಗೂ ಉತ್ತಮ ಆರೋಗ್ಯ ಸೌಲಭ್ಯ ನೀಡಬೇಕು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಎಲ್ಲ ತಾಲ್ಲೂಕುಗಳಲ್ಲಿ ಆರೋಗ್ಯ ಮೇಳಗಳನ್ನು ಆಯೋಜಿಸಲಾಗಿದ್ದು ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಮನವಿ ಮಾಡಿದ್ದಾರೆ.

ಮಂಡ್ಯ ಹಾಗೂ ಕೆ.ಆರ್‌. ನಗರಗಳಲ್ಲಿ ನಡೆಯುತ್ತಿರುವ ಆರೋಗ್ಯ ಮೇಳಗಳಿಗೆ ಭೇಟಿ ನೀಡಿ ಪರಿಶೀಲಿಸಿ ಆರೋಗ್ಯ ತಪಾಸಣೆ ಕಾರ್ಯಕ್ಕೆ ಚಾಲನೆ ನೀಡಿದ ಅವರು, ಆರೋಗ್ಯವಂತ ಸಮಾಜದಿಂದ ಸದೃಢ ದೇಶ ನಿರ್ಮಾಣ ಸಾಧ್ಯ. ಆ ಉದ್ದೇಶದಿಂದಲೇ ದೇಶಾದ್ಯಂತ ಎಲ್ಲ ತಾಲ್ಲೂಕಿನಲ್ಲಿ ಆರೋಗ್ಯ ಮೇಳಗಳನ್ನು ಆಯೋಜಿಸಿ ಪ್ರತಿ ಪ್ರಜೆಯ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗೆ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ದೇಶದಲ್ಲೇ ಪ್ರಥಮ ಎಂದು ಹೇಳಿದರು.

ಐದು ದಿನಗಳ ಅವಧಿಯಲ್ಲಿ ಪ್ರತಿ ತಾಲ್ಲೂಕಿನಲ್ಲಿ ಒಂದು ದಿನ ಈ ಮೇಳ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವೀಯಾ ಅವರ ದೂರದರ್ಶಿತ್ವ ಮತ್ತು ಕ್ರಿಯಾಶೀಲತೆಯಿಂದ ಈ ವಿನೂತನ ಕಾರ್ಯಕ್ರಮ ಆಯೋಜನೆ ಆಗಿದೆ ಎಂದು ತಿಳಿಸಿದರು.

ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕು ಎಂಬ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರವೇ ಪ್ರತಿ ತಾಲ್ಲೂಕಿಗೆ ಎರಡು ಲಕ್ಷ ರೂ. ಆರ್ಥಿಕ ನೆರವು ನೀಡಿದೆ. ಈ ಮೇಳದಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ಪತ್ತೆಗಾಗಿ ರಕ್ತ ಪರೀಕ್ಷೆ ಮಾಡಲಾಗುತ್ತಿದೆ. ಆ ಮೂಲಕ ಆರಂಭಿಕ ಹಂತದಲ್ಲೇ ರೋಗಗಳನ್ನು ಪತ್ತೆ ಮಾಡಿದರೆ ರೋಗವನ್ನು ಗುಣಪಡಿ ಸಲು ಸಾಧ್ಯ. ಇದರ ಜತೆಗೆ, ನೇತ್ರ ಮತ್ತು ಮಾನಸಿಕ ರೋಗಗಳ ತಪಾಸಣೆ, ವಿಕಲಚೇತನರಿಗೆ ಯೂನಿಕ್‌ ಐಡೆಂಟೆಂಟಿ ಕಾರ್ಡ್‌ ವಿತರಣೆ, ಎಲ್ಲ ನಾಗರಿಕರಿಗೆ ಡಿಜಿಟಲ್‌ ಆರೋಗ್ಯ ಗುರುತಿನ ಐಡಿ ನೀಡಲಾಗುತ್ತಿದೆ. ಇದೆಲ್ಲಕ್ಕಿಂತ ಮಿಗಿಲಾಗಿ ಎಬಿ-ಎಆರ್‌ಕೆ ಕಾರ್ಡ್‌ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಆಂದೋಲನ ಆಗಬೇಕು: ಆಯುಷ್ಮಾನ್‌ ಕಾರ್ಡ್‌ ವಿತರಣೆ ಜಗತ್ತಿನಲ್ಲೇ ಯಾವುದೇ ದೇಶದಲ್ಲಿ ಜಾರಿಯಾಗಿಲ್ಲ. ಯಾವುದೇ ಪ್ರೀಮಿಯಂ ಆಗಲೀ ನವೀಕರಣ ಶುಲ್ಕಗಳಿಲ್ಲದೆ ವಿಮೆ ಸೌಲಭ್ಯ ನೀಡಿರುವುದು ಭಾರತದಲ್ಲಿ ಮಾತ್ರ. ಕುಟುಂಬದ ಎಲ್ಲ ಸದಸ್ಯರಿಗೂ, ಬಿಪಿಎಲ್‌ ಮತ್ತು ಎಪಿಎಲ್‌ ತಾರತಮ್ಯವಿಲ್ಲದೆ ಸೌಲಭ್ಯ ನೀಡಲಾಗಿದೆ. ಆ ಮೂಲಕ ವರ್ಷದಲ್ಲಿ ಗರಿಷ್ಟ ಐದು ಲಕ್ಷ ರೂ.ವರೆಗೆ ಚಿಕಿತ್ಸಾ ವೆಚ್ಚವನ್ನು ಭರಿಸಲಾಗುವುದು ಎಂದು ಹೇಳಿದರು.

ಆರೋಗ್ಯ ತಪಾಸಣೆಗೆ ನೆರವಾಗುವಂತೆ ಪಿಎಚ್‌ಸಿ ಮತ್ತು ಉಪ ಕೇಂದ್ರಗಳಲ್ಲೂ ವೈದ್ಯಕೀಯ ಉಪಕರಣಗಳನ್ನು ನೀಡಲಾಗಿದೆ. ವೆಲ್‌ನೆಸ್‌ ಕೇಂದ್ರಗಳ ಸ್ಥಾಪನೆ ಯಲ್ಲೂ ಗುರಿ ಮೀರಿ ಸಾಧನೆ ಮಾಡಲಾಗಿದೆ. ಇ- ಸಂಜೀವಿನಿ ಸೌಲಭ್ಯ ಜಾರಿಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದ್ದೇವೆ. ಕೋವಿಡ್‌ ಸಂದರ್ಭದಲ್ಲಿ ನೀಡಿರುವ ಟೆಲಿ ಕನ್ಸಲ್ಟಿಂಗ್‌ ಅನ್ನು ಪರಿಗಣಿಸಿದ್ದರೆ ನಾವು ಮೊದಲ ಸ್ಥಾನದಲ್ಲಿ ಇರುತ್ತಿದ್ದೆವು ಎಂದು ತಿಳಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.