ಕೆಎಸ್ಆರ್ಟಿಸಿ ಸಿಬ್ಬಂದಿ ವಿಷಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆ
Team Udayavani, Apr 19, 2022, 12:17 PM IST
ವಿಟ್ಲ: ವಿಷಸೇವಿಸಿ, ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕೆಎಸ್ಆರ್ಟಿಸಿ ಸಿಬಂದಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು ಪಡ್ಪು ಎಂಬಲ್ಲಿ ಮಂಗಳವಾರ ನಡೆದಿದೆ.
ಸೂರಿಕುಮೇರು ಪಡ್ಪು ನಿವಾಸಿ ಜನಾರ್ದನ ಮೂಲ್ಯ ಪಿ (54) ಮೃತಪಟ್ಟ ವ್ಯಕ್ತಿ.
ಮಂಗಳೂರು ಕೆಎಸ್ಆರ್ಟಿಸಿ ಡಿಪೋದಲ್ಲಿ ಟಿಸಿಯಾಗಿ ಕೆಲಸ ಮಾಡಿಕೊಂಡಿರುವ ಜನಾರ್ದನ ಅವರು ಎ.17 ರಂದು ಕೆಲಸ ಮುಗಿಸಿ ರಾತ್ರಿ ಮನೆಗೆ ಬಂದಿದ್ದರು. ಎ.18ರಂದು ಕೆಲಸಕ್ಕೆ ತೆರಳದೆ ಮನೆಯಲ್ಲಿಯೇ ಇದ್ದರು. ಮಧ್ಯಾಹ್ನದ ವೇಳೆ ಯಾವುದೋ ವಿಷ ಪದಾರ್ಥ ಸೇವಿಸಿ ಮನೆ ಹತ್ತಿರದ ಬಾವಿಗೆ ಹಾರಿದ್ದರು. ಇದನ್ನು ಕಂಡ ಅವರ ಪತ್ನಿ ರೇಣುಕಾ ಹಾಗೂ ಅವರ ಪುತ್ರ ಪ್ರಜ್ವಲ್ ಅವರು ಹಗ್ಗದ ಸಹಾಯದಿಂದ ಅವರನ್ನು ಮೇಲಕ್ಕೆತ್ತಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಕರೆದೊಯ್ದು ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ನಾನೇ ಕಾಂಗ್ರೆಸ್ ಅಭ್ಯರ್ಥಿ ನನ್ನ ವಿರುದ್ಧ ಷಡ್ಯಂತ್ರ ನಡೆಯೋಲ್ಲ: ಆಡಿಯೋ ವೈರಲ್
ಈ ಬಗ್ಗೆ ಮೃತರ ಪುತ್ರ ಪ್ರಜ್ವಲ್ ದೂರು ನೀಡಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.