ಇಎಸ್‌ಐ ಬೇಡಿಕೆಗಾಗಿ ಕಾರ್ಮಿಕರ ಧರಣಿ
Team Udayavani, Apr 19, 2022, 12:27 PM IST
ಕುಂದಾಪುರ: ಇಎಸ್‌ಐ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ, ಉಡುಪಿ ಜಿಲ್ಲಾ ಹೆಂಚು ಕಾರ್ಮಿಕರ ಸಂಘ (ಸಿಐಟಿಯು)ದ ನೇತೃತ್ವದಲ್ಲಿ ಸೋಮವಾರ ಅಪರಾಹ್ನ ಕುಂದೇಶ್ವರ ದೇವಸ್ಥಾನ ರಸ್ತೆಯ ಬಳಿ ಇಎಸ್‌ಐ ಆಸ್ಪತ್ರೆ ಕಚೇರಿ ಎದುರು ಕಾರ್ಮಿಕರ ಬೃಹತ್ ಧರಣಿ ಮುಷ್ಕರ ಪ್ರತಿಭಟನೆ ನಡೆಯಿತು.
ಕುಂದಾಪುರ ಭಾಗದಲ್ಲಿ ಸುಮಾರು 10 ಸಾವಿರ ಮಂದಿ ಇಎಸ್‌ಐ ಕಾರ್ಡುದಾರರಿದ್ದಾರೆ. ಆದರೆ ಇಲ್ಲಿನ ಡಿಸ್ಪೆನ್ಸರಿಯಲ್ಲಿ ಖಾಯಂ ವೈದ್ಯರಿಲ್ಲ. ಕಳೆದ 1 ವರ್ಷದಿಂದ ವಿಮಾ ವೈದ್ಯಾಧಿಕಾರಿಗಳ ಹುದ್ದೆ ಖಾಲಿಯಿದೆ. ಇಎಸ್‌ಐ ಜತೆ ಒಪ್ಪಂದ ಮಾಡಿಕೊಂಡ ಆಸ್ಪತ್ರೆಗಳಿಗೆ ಬಾಕಿಯಾದ ಮೊತ್ತವನ್ನು ನೀಡಬೇಕು. ಅವರ ಮೊತ್ತ ಹೆಚ್ಚಿಸದ ಕಾರಣ ಅವರು ನಾನಾ ನಮೂನೆಯಲ್ಲಿ ಕಾರ್ಮಿಕ ರೋಗಿಗಳಿಂದ ವಸೂಲಿ ಮಾಡುತ್ತಾರೆ, ಅನಾದರ ಮಾಡುತ್ತಾರೆ. ಆದ್ದರಿಂದ ಅಂತಹ ಆಸ್ಪತ್ರೆಗಳನ್ನು ನಿಯಂತ್ರಿಸಲು ವಿಮಾ ವೈದ್ಯಾಧಿಕಾರಿಗೆ ಹೆಚ್ಚಿನ ಅಧಿಕಾರ ನೀಡಬೇಕು. ಕುಂದಾಪುರದಲ್ಲಿ ಇಎಸ್‌ಐ ಕಚೇರಿ ಬಾಡಿಗೆ ಕಟ್ಟಡದಲ್ಲಿದ್ದು ಮೊದಲ ಮಹಡಿಯಲ್ಲಿ ಇಕ್ಕಟ್ಟಿನಲ್ಲಿದೆ. ಸ್ವಂತ ಕಟ್ಟಡವನ್ನು ಸರಕಾರಿ ನಿವೇಶನದಲ್ಲಿ ನಿರ್ಮಿಸಬೇಕು. ಕುಂದಾಪುರದಲ್ಲಿ ಇಎಸ್‌ಐ ಸ್ಥಳೀಯ ಕಚೇರಿ ತೆರೆಯಬೇಕು.
ಚಿಕಿತ್ಸಾಲಯದ ಸಮಯ ಬದಲಿ ಸಬೇಕು. ವರ್ಷಪೂರ್ತಿ ಗುಣಮಟ್ಟದ ಔಷಧ ನೀಡಬೇಕು. ಸುಸಜ್ಜಿತ ಲ್ಯಾಬೋರೇಟರಿ ನೀಡಬೇಕು. ಉಡುಪಿ ಜಿಲ್ಲೆಗೊಂದು ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಮಂಜೂರು ಮಾಡಬೇಕೆಂಬ ಬೇಡಿಕೆಗಳನ್ನು ಇಡಲಾಯಿತು.
ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಹೆಂಚು ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ವಿ.ನರಸಿಂಹ, ಕಾರ್ಯದರ್ಶಿ ಎಚ್. ನರಸಿಂಹ, ಸಿಐಟಿಯು ಜಿಲ್ಲಾಧ್ಯಕ್ಷ ಕೆ. ಶಂಕರ್, ಜಿಲ್ಲಾ ಉಪಾಧ್ಯಕ್ಷ ಮಹಾಬಲ ವಡೇರಹೋಬಳಿ, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ವೆಂಕಟೇಶ ಕೋಣಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.