ಕಸಾಯಿಖಾನೆ ಮುಚ್ಚಲು ನಗರಸಭೆ ತೀರ್ಮಾನ

ನಗರದ ಉದ್ಯಾನವನಗಳ ಅಭಿವೃದ್ಧಿ-ರಕ್ಷಣೆಗೆ ಬದ್ಧ

Team Udayavani, Apr 19, 2022, 3:47 PM IST

15

ರಬಕವಿ-ಬನಹಟ್ಟಿ: ಸ್ಥಳೀಯ ಬಿಲಾಲ್‌ ಮಸೀದಿ ಹತ್ತಿರ ಗೋಹತ್ಯೆ ಸೇರಿದಂತೆ ಅನಧಿಕೃತ ಚಟುವಟಿಕೆ ನಡೆಯುತ್ತಿದ್ದು, ಅಲ್ಲಿಯ ಮೌಂಸದ ಅಂಗಡಿಗಳನ್ನು ನಗರಸಭೆ ಹತೋಟೆಗೆ ತೆಗೆದುಕೊಳ್ಳುವುದರ ಜತೆಗೆ ಕಸಾಯಿ ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ತೀರ್ಮಾನವನ್ನು ಸೋಮವಾರ ನಡೆದ ರಬಕವಿ ಬನಹಟ್ಟಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಪಕ್ಷದ ಯುನಿಸ್‌ ಚೌಗಲಾ ಅನಧಿಕೃತ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಿ. ಆದರೆ ಪೂರ್ತಿ ಕಸಾಯಿಖಾನೆ ಬಂದ್‌ ಮಾಡುವುದು ಸಮಂಜಸವಲ್ಲ ಎಂದು ತಿಳಿಸಿದರು.

ಇಲ್ಲಿ ನಡೆಯುತ್ತಿರುವ ಅನಧಿಕೃತ ಚಟುವಟಿಕೆಗಳಿಂದ ಈ ಪ್ರದೇಶದಲ್ಲಿ ವಾಸಿಸುವ ಜನರಿಗೆ ತೊಂದರೆಯಾಗಿದೆ. ಈ ಕುರಿತು ಅನೇಕ ತಕರಾರುಗಳನ್ನು ಜನರು ನಗರಸಭೆಗೆ ನೀಡಿದ್ದರು. ಅಲ್ಲದೆ ಇಲ್ಲಿ ಗೋಹತ್ಯೆ ಮಾಡಲಾಗುತ್ತಿದೆ ಎಂಬ ದೂರುಗಳು ನಗರಸಭೆಗೆ ಬಂದ ಹಿನ್ನೆಲೆಯಲ್ಲಿ ಕಸಾಯಿ ಖಾನೆಗಳನ್ನು ಮುಚ್ಚುವ ತೀರ್ಮಾನ ಕೈಗೊಳ್ಳಲಾಯಿತು ಎಂದು ನಗರಸಭೆ ಅಧ್ಯಕ್ಷ ಸಂಜಯ ತೆಗ್ಗಿ ತಿಳಿಸಿದರು.

ಸಭೆಯಲ್ಲಿ ರಬಕವಿಯ 26 ಮತ್ತು ಬನಹಟ್ಟಿಯ 29 ತರಕಾರಿ ಕಟ್ಟೆಗಳ ಬಾಡಿಗೆಯನ್ನು ರೂ. 150 ರಷ್ಟು ಮತ್ತು ಸ್ವಯಃ ಆಸ್ತಿ ತೆರಿಗೆಯನ್ನು ಶೇ. 3 ಹೆಚ್ಚಳ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯಲ್ಲಿ 33 ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಯಿತು. ಸಭೆಯಲ್ಲಿ ನೂತನ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ನಗರಸಭೆಯ ಸದಸ್ಯ ಶ್ರೀಶೈಲ ಆಲಗೂರ ಮಾತನಾಡಿ, ಈ ಕುರಿತು ಯಾವುದೆ ಚರ್ಚೆ ಮಾಡದೆ ಮತ್ತು ತಮ್ಮನ್ನು ಗಣನೆಗೆ ತೆಗೆದುಕೊಳ್ಳದೆ ಸ್ಥಾಯಿ ಸಮಿತಿ ನಿರ್ಮಾಣ ಮಾಡಿರುವುದಕ್ಕೆ ವಿರೋಧಿಸಿದರು. ನಗರ ಸಭೆಯ ವ್ಯಾಪ್ತಿಯಲ್ಲಿ ಬರುವ ಹತ್ತಕ್ಕೂ ಹೆಚ್ಚು ಉದ್ಯಾನವನಗಳು ಖಾಸಗಿಯವರ ಪಾಲಾಗುತ್ತಿವೆ ಎಂದು ವಿರೋಧ ಪಕ್ಷದ ಬಸವರಾಜ ಗುಡೋಡಗಿ ತಿಳಿಸಿದರು.

ಮುಂದಿವ ದಿನಗಳಲ್ಲಿ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಉದ್ಯಾನವನಗಳಿಗೆ ಬೇಲಿ ಹಾಕುವುದರ ಜತೆಗೆ ಅವುಗಳ ಅಭಿವೃದ್ಧಿ ಮಾಡಲಾಗುವುದು ಎಂದು ಅಧ್ಯಕ್ಷ ಸಂಜಯ ತೆಗ್ಗಿ ತಿಳಿಸಿದರು.

ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಗೆ ಸಾರ್ವಜನಿಕರ ಸಹಭಾಗಿತ್ವ ಅವಶ್ಯ. ಆ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ ಎಂದು ಪೌರಾಯುಕ್ತ ಶ್ರೀನಿವಾಸ ಜಾಧವ ಹೇಳಿದರು.

ನಗರಸಭೆ ಉಪಾಧ್ಯಕ್ಷೆ ವಿದ್ಯಾ ಧಬಾಡಿ ಇದ್ದರು. ಅಧಿಕಾರಿಗಳಾದ ಸುಭಾಸ ಖುದಾನಪುರ, ಬಸವರಾಜ ಶರಣಪ್ಪನವರ, ಎಂ.ಎಂ.ಮುಗಳಖೋಡ, ರಾಜಕುಮಾರ ಹೊಸೂರ, ವೈಶಾಲಿ ಹಿಪ್ಪರಗಿ, ಬಸವರಾಜ ಮಠದ, ಡಿ.ಎಂ.ಡಾಂಗೆ, ಸಂಗೀತಾ ಕೋಳಿ, ಶೋಭಾ ಹೊಸಮನಿ ಇದ್ದರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.