ಬಡವರ ಆರೋಗ್ಯ ಕಾಪಾಡಲು ಆಯುಷ್ಮಾನ್ ಯೋಜನೆ ಜಾರಿ
ಸಾವಿರಾರು ಜನ ಚಿಕಿತ್ಸೆ ಪಡೆಯಲು ಬರುತ್ತಿದ್ದಾರೆ. ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಹ ಇರಲಿಲ್ಲ.
Team Udayavani, Apr 19, 2022, 5:28 PM IST
ದಾವಣಗೆರೆ: ಜನಸಾಮಾನ್ಯರು ಉತ್ತಮ ಆರೋಗ್ಯ ಸೇವೆ ಪಡೆಯಬೇಕು ಎಂಬ ಸದುದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತರಲಾಗಿದೆ ಎಂದು ಸಂಸದ ಡಾ| ಜಿ.ಎಂ. ಸಿದ್ದೇಶ್ವರ ತಿಳಿಸಿದರು.
75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೋಮವಾರ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಬಡವರು ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಪಡೆಯಲು ಹೊಲ-ಮನೆಗಳನ್ನು ಮಾರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುವುದನ್ನು ತಡೆಯುವ ಸಲುವಾಗಿಯೇ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದರು.
ಜನರ ದೃಷ್ಟಿಯಲ್ಲಿ ವೈದ್ಯರೇ ದೇವರು. ಹಾಗಾಗಿ ಪ್ರತಿಯೊಬ್ಬ ವೈದ್ಯರು ಪ್ರಾಮಾಣಿಕವಾಗಿ ಸೇವೆ ಮಾಡಬೇಕು. ಸೇವಾವಲಯದಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬರು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಸೌಲಭ್ಯಗಳು ಜನರಿಗೆ ತಲುಪುತ್ತವೆ. ಕುಷ್ಠ ಹಾಗೂ ಕ್ಷಯರೋಗದಂತಹ ಕಾಯಿಲೆಗಳ ನಿರ್ಮೂಲನೆಗಾಗಿ ವೈದ್ಯರು ಶ್ರಮಿಸುತ್ತಿದಾರೆ. ಕ್ಷಯರೋಗ ಜಿಲ್ಲೆಯಲ್ಲಿ ಶೇ. 20 ರಷ್ಟು ಕಡಿಮೆಯಾಗಿದೆ. ಅದಕ್ಕಾಗಿ ಕೇಂದ್ರ ಸರ್ಕಾರ ಕಂಚಿನ ಪದಕ ನೀಡಿ ಗೌರವಿಸಿದೆ. ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ವ್ಯವಸ್ಥಿತವಾಗಿ ಮುನ್ನಡೆಸಲು ಶ್ರಮಿಸೋಣ ಎಂದರು.
ಮನುಷ್ಯನಿಗೆ ಅನೇಕ ರೋಗಗಳು ಬರುವುದು ಸಹಜ. ಆದರೆ, ಅವುಗಳಿಗೆ ಸೂಕ್ತ ಚಿಕಿತ್ಸೆ ಪಡೆಯಲು ಬೇರೆ ಬೇರೆ ಆಸ್ಪತ್ರೆಗಳಿಗೆ ಹೋಗಿ ಹಣ ಕಳೆದುಕೊಂಡವರನ್ನು ಮತ್ತು ಚಿಕಿತ್ಸೆ ಪಡೆಯಲು ಸಾಧ್ಯವಾಗದವರನ್ನು ನಾವು ಕಾಣಬಹುದು. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂತಹ ಪರಿಸ್ಥಿತಿ ನಿಭಾಯಿಸಲು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಜಾರಿಗೊಳಿಸಿ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರಿಗೆ ಐದು ಲಕ್ಷದ ವರೆಗೆ ಉಚಿತ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯ ಬಹುದಾಗಿದೆ. ಉನ್ನತ ಮಟ್ಟದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಕಾರ್ಡ್ ಅನುಕೂಲವಾಗಲಿದೆ ಎಂದು ತಿಳಿಸಿದರು.
ಕೊರೊನಾ ಸಂದರ್ಭದಲ್ಲಿ ಜೀವವೇ ಉಳಿಯದ ಪರಿಸ್ಥಿತಿ ಕಂಡಿದ್ದೇವೆ. ಆಗ ವೈದ್ಯರು ಜನರಿಗೆ ಸೂಕ್ತ ಮಾರ್ಗದರ್ಶನ ಮಾಡುವ ಪ್ರಾಮಾಣಿಕ ಕೆಲಸ ಮಾಡಿದ್ದಾರೆ. ದೇಶದ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗಿದೆ. ಬಡವರಿಗೆ ಒಂದೂವರೆ ವರ್ಷಗಳ ಕಾಲ ಉಚಿತವಾಗಿ ಆಹಾರ ಒದಗಿಸಲಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಮಾತನಾಡಿ, ಈ ಹಿಂದೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬರುವುದಕ್ಕೆ ಜನ ಭಯ ಪಡುತ್ತಿದ್ದರು. ಆದರೆ, ಈಗ ವಾತಾವರಣ ಬದಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಸೇವೆ ದೊರೆಯುವ ಹಿನ್ನೆಲೆಯಲ್ಲಿ ನಿತ್ಯ ಸಾವಿರಾರು ಜನ ಚಿಕಿತ್ಸೆ ಪಡೆಯಲು ಬರುತ್ತಿದ್ದಾರೆ. ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಹ ಇರಲಿಲ್ಲ. ಈಗ ಅದನ್ನು ಕಲ್ಪಿಸಲಾಗಿದೆ. ಕೋವಿಡ್ ವೇಳೆಯಲ್ಲಿ ವೈದ್ಯರು ಹಗಲು-ರಾತ್ರಿ ಎನ್ನದೇ ನಿರ್ವಹಿಸಿದ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.
ಮೇಯರ್ ಆರ್.ಜಯಮ್ಮ ಗೋಪಿನಾಯ್ಕ, ತಹಶೀಲ್ದಾರ್ ಬಸವನಗೌಡ ಕೊಟೂರು, ಮಾಜಿ ಶಾಸಕ ಎಂ. ಬಸವರಾಜ್ ನಾಯ್ಕ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ನಾಗರಾಜ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಷಣ್ಮುಖಪ್ಪ, ಆಯುಷ್ ಅಧಿಕಾರಿ ಡಾ| ಶಂಕರಗೌಡ, ಡಾ| ನೀಲಕಂಠ ನಾಯ್ಕ, ಡಾ| ಮೀನಾಕ್ಷಿ, ಜಿಲ್ಲಾ ಸರ್ವೇಕ್ಷಣಾ ಧಿಕಾರಿ ಡಾ| ಡಿ.ಜಿ. ರಾಘವನ್, ಡಾ| ಸುರೇಶ್ ಎನ್.ಬಾರ್ಕಿ ಇತರರು ಇದ್ದರು. ಹೆಲ್ತ್‌ಕಾರ್ಡ್, ವಿವಿಧ ಸವಲತ್ತು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.