ಸರ್ಕಾರಗಳು ಜನರಿಗೆ ದುಡಿಯುವ ಮಾರ್ಗ ತೋರಿಸಲಿ; ಡಾ| ಶ್ರೀ ಗುರುಬಸವ ಸ್ವಾಮೀಜಿ

ನಮ್ಮ ವಿದ್ಯೆಯನ್ನು ಕಲಿತ ವಿದೇಶಿಗಳು ಅಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

Team Udayavani, Apr 19, 2022, 5:35 PM IST

ಸರ್ಕಾರಗಳು ಜನರಿಗೆ ದುಡಿಯುವ ಮಾರ್ಗ ತೋರಿಸಲಿ; ಡಾ| ಶ್ರೀ ಗುರುಬಸವ ಸ್ವಾಮೀಜಿ

ದಾವಣಗೆರೆ: ಸರ್ಕಾರಗಳು ಯುವ ಪೀಳಿಗೆ ಬಾಳಿಗೆ ಬೆಳಕು ನೀಡುವ ಕೆಲಸ ಮಾಡಬೇಕು ಎಂದು ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ವಿರಕ್ತ ಮಠದ ಡಾ| ಶ್ರೀ ಗುರುಬಸವ ಸ್ವಾಮೀಜಿ ತಿಳಿಸಿದರು.

ಸೋಮವಾರ ಕುವೆಂಪು ಕನ್ನಡ ಭವನದಲ್ಲಿ ರಾಜ್ಯ ಗಿಡಮೂಲಿಕಾ ಪ್ರಾಧಿಕಾರ, ಜೀವ ವೈವಿಧ್ಯ ಮಂಡಳಿ, ಪಾಂರಪರಿಕ ವೈದ್ಯ ಸಂಘದ ಸಂಯುಕ್ತಾಶ್ರಯದಲ್ಲಿ ಔಷಧಿ ಸಸ್ಯ ಕಾರ್ಯಾಗಾರದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಸರ್ಕಾರಗಳು ಹಲವು ಯೋಜನೆಗಳ ಮೂಲಕ ಜನರನ್ನು ಸೋಮಾರಿಗಳನ್ನಾಗಿ ಮಾಡಿವೆ. ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿವೆ.

ಸೋಮಾರಿಗಳಾಗುವಂತಹ ಯೋಜನೆಗಳನ್ನು ಮಾಡುವ ಬದಲು ದುಡಿಯುವ ದಾರಿ ಮಾಡಿಕೊಡಬೇಕು. ಆಗ ರೈತರು ಸಾಲಗಾರರು ಆಗುವುದಿಲ್ಲ. ರೈತರೇ ಸರ್ಕಾರಗಳಿಗೆ ಸಾಲ ಕೊಡುವಷ್ಟು ಬಲಾಡ್ಯರಾಗಲಿದ್ದಾರೆ ಎಂದು ತಿಳಿಸಿದರು.

ಎಲ್ಲೋ ಮಠದಲ್ಲಿ ಕಾಡಿನಲ್ಲಿ ಕುಳಿತು ತಪಸ್ಸು ಮಾಡುವವರು ಯೋಗಿಗಳಲ್ಲ. ದೇಶಕ್ಕೆ ಅನ್ನ ನೀಡಲು ಹಗಲಿರುಳು ದುಡಿಯುವ ರೈತರೇ ಈ ದೇಶನ ನಿಜವಾದ ಯೋಗಿಗಳು. ಅಂತಹ ರೈತಾಪಿ ವರ್ಗದ ಬೆನ್ನೆಲುಬನ್ನೇ ಸರ್ಕಾರಗಳು ಮುರಿಯವಂತಹ ಕೆಲಸ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಉತ್ತಮ ಆರೋಗ್ಯ ನಮ್ಮ ಜೀವನಕ್ಕೆ ಭಾಗ್ಯ. ಆದರೆ, ದೌರ್ಭಾಗ್ಯದ ಜೀವನ ಎದುರಾಗಿದೆ. ಎಲ್ಲದಕ್ಕೂ ಭಾವನೆ, ಪರಿಸರ ಸರಿ ಇರಬೇಕು. ನಮಗೆ ನಮ್ಮಲ್ಲೇ ಇರುವ ಗಿಡಮೂಲಿಕೆಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ತಿರಸ್ಕಾರಕ್ಕೆ ಒಳಗಾಗಿವೆ. ಸರ್ಕಾರ ಪಾರಂಪರಿಕ ವೈದ್ಯ ಪದ್ಧತಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಾರಕ ರೋಗಗಳನ್ನು ಗುಣಪಡಿಸುವ ಗುಣ ಗಿಡ ಮೂಲಿಕೆಗಳಿಗೆ ಇದೆ ಎಂದು ತಿಳಿಸಿದರು.

ಕರ್ನಾಟಕ ಔಷಧ ಸಸ್ಯಗಳ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ.ಸುದರ್ಶನ್‌ ಮಾತನಾಡಿ, ಜೀವನ ಶೈಲಿಯನ್ನು ಉತ್ತಮ ಪಡಿಸುವಲ್ಲಿ ಮಹತ್ತರ ಪಾತ್ರ ವಹಿಸುವ ಗಿಡಮೂಲಿಕೆಗಳ ಲಭ್ಯತೆ ಕಡಿಮೆ ಆಗುತ್ತಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರ ಅವನ್ನು ಉಳಿಸಿ, ಬೆಳೆಸುವ ಕಾರ್ಯಕ್ಕೆ ಮುಂದಾಗಿದೆ. ನಮ್ಮ ವಿದ್ಯೆಯನ್ನು ಕಲಿತ ವಿದೇಶಿಗಳು ಅಲ್ಲಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಭಾರತದಲ್ಲಿ ಕಡಿಮೆ ಆಗುತ್ತಿದೆ. ಪಾರಂಪರಿಕ ವೈದ್ಯಪದ್ಧತಿಯನ್ನು ಬೆಳೆಸಲು ಮುಂದಾಗಬೇಕು ಎಂದರು.

ಕರ್ನಾಟಕ ಜೀವ ವೈವಿಧ್ಯ ಮಂಡಳಿ ಸದಸ್ಯ ಕಾರ್ಯದರ್ಶಿ ಅನಿತಾ ಅರೇಕಲ್‌ ಮಾತನಾಡಿ, ಭಾರತದಲ್ಲಿ ಬೆಳೆಯುವ ಪ್ರತಿಯೊಂದು ಗಿಡದಿಂದ ಅನುಕೂಲ ಇದೆ. ರೈತರು ಒಂದೇ ರೀತಿಯ ಬೆಳೆಗಳನ್ನು ಬೆಳೆಯುವ ಮೂಲಕ ಮಣ್ಣಿನಲ್ಲಿನ ಜೀವಾಂಶದ ಜೊತೆ ಜೀವ ವೈವಿಧ್ಯತೆಗೆ ಹಾನಿ ಆಗುತ್ತಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಸಲಹೆಯಂತೆ ಬೇರೆ ಬೇರೆ ಬೆಳೆಗಳನ್ನು ಬೆಳೆದು ಜೀವಾಂಶ ಉಳಿಸಬೇಕು ಎಂದು ಮನವಿ ಮಾಡಿದರು. ಹೆಬ್ಟಾಳು ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಪಾರಂಪರಿಕ ವೈದ್ಯ ಸಂಘದ ರಾಜ್ಯ ಅಧ್ಯಕ್ಷ ನೇರ್ಲಿಗೆ ಗುರುಸಿದ್ದಪ್ಪ, ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ| ಆರ್‌. ತಿಪ್ಪೇಸ್ವಾಮಿ, ಡಾ.ಜಿ. ರವಿಕುಮಾರ್‌, ಡಾ| ವೇಣುಗೋಪಾಲ್‌, ಸದಾಶಿವ, ಡಾ| ಪ್ರಭು, ಪ್ರಕಾಶ್‌ ಇತರರು ಇದ್ದರು.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.