ಪೊಲೀಸ್‌ ವ್ಯವಸ್ಥೆಯ ನೈತಿಕ ಸ್ಥೈರ್ಯ ಕುಸಿಯದಂತೆ ನೋಡಿಕೊಳ್ಳಿ

Team Udayavani, Apr 20, 2022, 6:00 AM IST

ಪೊಲೀಸ್‌ ವ್ಯವಸ್ಥೆಯ ನೈತಿಕ ಸ್ಥೈರ್ಯ ಕುಸಿಯದಂತೆ ನೋಡಿಕೊಳ್ಳಿ

ಕಳೆದ ಕೆಲವು ದಿನಗಳಿಂದ ದೇಶದ ವಿವಿಧೆಡೆ ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಅಹಿತಕರ ಘಟನೆಗಳು ನಡೆಯುತ್ತಿರುವುದು ಆಘಾತಕಾರಿ. ರಾಮನವಮಿ, ಹನುಮ ಜಯಂತಿಯಂದು ರಾಜಸ್ಥಾನ, ಹಾಗೂ ದಿಲ್ಲಿಗಳಲ್ಲಿ ನಡೆದ ಘಟನೆಗಳಾಗಲಿ, ಈಚೆಗೆ ಹುಬ್ಬಳ್ಳಿಯಲ್ಲಿ ನಡೆದ ದೊಂಬಿಯಾಗಲಿ ಯಾವ ಕಾರಣಕ್ಕೂ ಕ್ಷಮ್ಯವಲ್ಲ.

ಚುನಾವಣೆ ನಡೆಯುವ ಸಂದರ್ಭದಲ್ಲಿ ಸಮಾಜವನ್ನು ಕದಡುವ ಘಟನೆಗಳು ನಡೆಯುವುದು ಅಥವಾ ನಡೆಸುವುದು ಸಾಮಾನ್ಯ ಎನಿಸಿ ಬಿಟ್ಟಿದೆ. ಆದರೆ ಇಂಥ ಘಟನೆಗಳು ಇಡೀ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಸಾಮಾಜಿಕ ಸಂರಚನೆ ಮೇಲೆ ಇವುಗಳಿಂದಾಗುವ ಪರಿಣಾಮ ಅನೂಹ್ಯ. ಈ ಮೇಲಿನ ಘಟನೆಗಳಲ್ಲಿ ಒಂದು ಬಗೆಯ ಸಾಮ್ಯತೆಯನ್ನು ಕಾಣುವುದು ಮತ್ತಷ್ಟು ಆತಂಕಕಾರಿಯಾಗಿದೆ. ಎರಡು ಸಮುದಾಯಗಳ ನಡುವಿನ ಸಂಘರ್ಷದ ಜತೆಗೆ ಪೊಲೀಸ್‌ ವ್ಯವಸ್ಥೆಗೆ ಸಡ್ಡು ಹೊಡೆಯುವ ಪ್ರವೃತ್ತಿ ಇಲ್ಲಿ ಕಾಣಿಸುತ್ತಿದೆ. ಸಮಾಜವನ್ನು ರಕ್ಷಿಸ ಬೇಕಾದ ಪೊಲೀಸ್‌ ವ್ಯವಸ್ಥೆಯ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡು ವುದು ಈ ದೊಂಬಿಗಳ ಉದ್ದೇಶದಂತೆ ಕಾಣಿಸುತ್ತಿದೆ. ನಮ್ಮನ್ನು ಕಾಯಬೇ ಕಾದ ಪೊಲೀಸರು ದಿಕ್ಕೆಟ್ಟರೆ ಇಡೀ ಸಮಾಜದ ಬುನಾದಿಯೇ ಕುಸಿಯು ತ್ತದೆ. ಕಾಶ್ಮೀರದಲ್ಲಿ ಹಿಂದೆ ಇದೇ ಮಾದರಿಯಲ್ಲಿ ಪೊಲೀಸ್‌ ಹಾಗೂ ಸೈನ್ಯದ ನೈತಿಕತೆ ಕುಸಿಯುವಂತೆ ಅವರ ಮೇಲೆ ದಾಳಿ ನಡೆಸಲಾ ಗುತ್ತಿತ್ತು. ಪೊಲೀಸ್‌ ಠಾಣೆ ಮೇಲೆ ಹಲವು ನಕ್ಸಲ್‌ ದಾಳಿಗಳೂ ನಡೆದಿರು ವುದು ಇಲ್ಲಿ ಉಲ್ಲೇಖಾರ್ಹ. ಇಂಥ ದಾಳಿಯು ವ್ಯವಸ್ಥೆಯನ್ನು ಅರಾಜಕ ತೆಗೆ ತಳ್ಳಬಹುದು ಎನ್ನುವುದು ಈ ಘಟನೆಗಳಲ್ಲಿ ಬಿಚ್ಚಿಕೊಳ್ಳುತ್ತಿರುವ ಸತ್ಯ.

ಕಾಶ್ಮೀರ ಮಾದರಿಯಲ್ಲಿ ಕರ್ನಾಟಕದಲ್ಲಿ ಪೊಲೀಸ್‌ ವ್ಯವಸ್ಥೆ ಮೇಲೆ ದಾಳಿಯಾಗುವುದನ್ನು ತಪ್ಪಿಸಬೇಕಾದರೆ ಅಂಥ ಪುಂಡರನ್ನು ಯಾವುದೇ ಮುಲಾಜಿಲ್ಲದೆ ಮತ್ತು ಒತ್ತಡಕ್ಕೆ ಮಣಿಯದೆ ಕಾನೂನಿನ ಮುಂದೆ ನಿಲ್ಲಿಸಬೇಕಾಗಿದೆ. ಎಷ್ಟೋ ಸಂದರ್ಭಗಳಲ್ಲಿ ಪೊಲೀಸ್‌ ವ್ಯವಸ್ಥೆ ಜತೆ ನಿಂತು ಅವರ ನೈತಿಕತೆಯನ್ನು ವೃದ್ಧಿಸಬೇಕಾದ ಜನಪ್ರತಿನಿಧಿಗಳು ಸಹ ಈ ವ್ಯವಸ್ಥೆ ಮೇಲೆ ಸಮಾಜಕ್ಕೆ ಅನುಮಾನ ಬರುವಂತೆ ಮಾತನಾಡುವುದು, ನಡೆದು ಕೊಳ್ಳುವುದು ದುರಂತ. ದೇಶದ ಪೊಲೀಸ್‌ ವ್ಯವಸ್ಥೆ ಸದೃಢವಾಗಿದೆ ಎನ್ನುವುದರಲ್ಲಿ ಯಾವ ಅನುಮಾನವೂ ಇಲ್ಲ. ಆದರೆ ಇಲ್ಲಿ ರಾಜಕೀಯ ಒತ್ತಡ ದಿಂದ ಯಾವುದೇ ಘಟನೆಯ ನಿಷ್ಪಕ್ಷ ತನಿಖೆ ಸಾಧ್ಯವಾಗುವುದಿಲ್ಲ.

ಹುಬ್ಬಳ್ಳಿ ಘಟನೆಯಲ್ಲೂ ಇದು ಕಾಣಿಸುತ್ತಿದೆ. ಪುಂಡರ ಗುಂಪೊಂದು ಠಾಣೆ ಮೇಲೆ ದಾಳಿ ನಡೆಸಿದ ಘಟನೆ ಬೆನ್ನಲ್ಲೇ ವಿವಿಧ ಪಕ್ಷಗಳ ನಾಯಕರು ತಮ್ಮ ಮೂಗಿನ ನೇರಕ್ಕೆ ಹೇಳಿಕೆಗಳನ್ನು ನೀಡುತ್ತಿರುವುದರಿಂದ ಸಹಜವಾಗಿಯೇ ಪೊಲೀಸರು ಇನ್ನೊಮ್ಮೆ ದಿಕ್ಕೆಡುತ್ತಾರೆ. ಅತ್ತ ಸಮಾಜವಿದ್ರೋಹಿ ಗುಂಪು ಭೌತಿಕವಾಗಿ ಪೊಲೀಸ್‌ ವ್ಯವಸ್ಥೆಯನ್ನು ಜರ್ಝರಿತಗೊಳಿಸಿದರೆ ಇತ್ತ ರಾಜಕಾರಣಿಗಳು ಇಲ್ಲ ಸಲ್ಲದ ಹೇಳಿಕೆಗಳಿಂದ, ಒತ್ತಡಗಳಿಂದ ಪೊಲೀಸ್‌ ವ್ಯವಸ್ಥೆಯನ್ನು ಮಾನಸಿಕವಾಗಿ ಕುಗ್ಗಿಸಿಬಿಡುತ್ತಾರೆ. ಇವೆರಡೂ ಮಾರಕವೇ.

ಇದರಿಂದ ಯಾವುದೇ ಪ್ರಕರಣದ ನಿಷ್ಪಕ್ಷಪಾತ ತನಿಖೆ ಅಸಾಧ್ಯ ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗದೇ ಹೋಗಬಹುದು. ಬೆಂಗಳೂರಿನ ಚಂದ್ರು ಕೊಲೆ ಪ್ರಕರಣದಿಂದ ಹಿಡಿದು ಹುಬ್ಬಳ್ಳಿ ಘಟನೆಯ ತನಕವೂ ಪೊಲೀಸರ ನೈತಿಕತೆಯನ್ನು ಕುಗ್ಗಿಸುವ ಪ್ರಯತ್ನಕ್ಕೆ ಕೈ ಹಾಕುವುದು ನಿಲ್ಲಲಿ. ವ್ಯವಸ್ಥೆ ಮೇಲೆ ನಂಬಿಕೆ ಇಟ್ಟು ಪ್ರಾಮಾಣಿಕ ತನಿಖೆಗೆ ಅವಕಾಶ ಕೊಡಬೇಕಾದರೆ, ರಾಜಕಾರಣಿಗಳು ಮೌನಕ್ಕೆ ಶರಣಾಗುವುದು ಲೇಸು.

ಟಾಪ್ ನ್ಯೂಸ್

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

14

Editorial: ಕಾಮಗಾರಿಯ ವಿಳಂಬ ಸಲ್ಲದು

8

Editorial: ಕುಂದಾಪುರದ ಹೆದ್ದಾರಿ ಸಮಸ್ಯೆ ಸರಿಪಡಿಸಿ

6

Editorial: ಸಂಚಾರ, ಪಾರ್ಕಿಂಗ್‌; ಸಮನ್ವಯದ ಕ್ರಮ ಆಗಬೇಕು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.