ಪಿಎಸ್ಐ ನೇಮಕಾತಿ ಹಗರಣ: ಇಂದು ಟಾಪರ್ ವಿಚಾರಣೆ;ನೀರಾವರಿ ಇಲಾಖೆ ಎಂಜಿನಿಯರ್ ಕಿಂಗ್ಪಿನ್?
ಮುಖ್ಯೋಪಾಧ್ಯಾಯ ಕಾಶೀನಾಥ ನಾಪತ್ತೆ
Team Udayavani, Apr 20, 2022, 7:05 AM IST
ಬೆಂಗಳೂರು/ಕಲಬುರಗಿ: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಪಿಎಸ್ಐ ನೇಮಕಾತಿ ಹಗರಣವು ಈಗ ಪರೀಕ್ಷೆಯ ಟಾಪರ್ಗಳ ಕೊರಳಿಗೆ ಸುತ್ತಿಕೊಳ್ಳಲಾರಂಭಿಸಿದೆ.
ಸಿಐಡಿ ಪೊಲೀಸರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಟಾಪ್ 50 ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಿ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಸಿಐಡಿ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. 545 ಅಭ್ಯರ್ಥಿಗಳ ಪೈಕಿ 50 ಮಂದಿಗೆ ನೋಟಿಸ್ ಜಾರಿಯಾಗಿದ್ದು, ಬುಧವಾರ ಈ ಅಭ್ಯರ್ಥಿಗಳು ಬೆಂಗಳೂರಿನ ಸಿಐಡಿ ಪೊಲೀಸ್ ಕಚೇರಿಯಲ್ಲಿ ಪರೀಕ್ಷೆ ಬರೆದ ಒಎಂಆರ್ ಕಾರ್ಬನ್ ಪ್ರತಿಯೊಂದಿಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಬೆಳಗ್ಗೆ 10ಕ್ಕೆ ಸಿಐಡಿ ಡಿವೈಎಸ್ಪಿ ಪಿ. ನರಸಿಂಹ ಮೂರ್ತಿ ಅವರ ಸಮಕ್ಷಮ ವಿಚಾರಣೆ ನಡೆಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಿಎಸ್ಐ ನೇಮಕಾತಿಯಲ್ಲಿ ಅವ್ಯವಹಾರ ಆರೋಪ ಕೇಳಿಬಂದು, ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಸರಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಆ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ದಾಳಿ ನಡೆಸಿರುವ ಪೊಲೀಸರು ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಪತಿ ರಾಜೇಶ್ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. 2021ರ ಅ. 3ರಂದು ರಾಜ್ಯದ ಸುಮಾರು 92 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 54,104 ಅಭ್ಯರ್ಥಿ ಗಳು ಪರೀಕ್ಷೆಗೆ ಹಾಜರಾಗಿದ್ದರು.
ಕಾಂಗ್ರೆಸ್ ಮುತ್ತಿಗೆ ಎಚ್ಚರಿಕೆ
ಮಂಗಳವಾರ ಬಂಧಿತ ಮೂವರು ಅಭ್ಯರ್ಥಿಗಳು ಮತ್ತು ಮೂವರು ಮೇಲ್ವಿಚಾರಕರ ಹೇಳಿಕೆಗಳನ್ನು ಸಿಐಡಿ ಅಧಿಕಾರಿಗಳು ದಿನವಿಡೀ ಅಧಿಕೃತವಾಗಿ ದಾಖಲಿಸಿಕೊಂಡಿದ್ದಾರೆ. ಎ. 21ರಂದು ಸಿಎಂ ಬಸವರಾಜ ಬೊಮ್ಮಾಯಿ ಕಲಬುರಗಿಗೆ ಎರಡು ದಿನಗಳ ಕಾಲ ಆಗಮಿಸಲಿದ್ದಾರೆ. ಅಷ್ಟರೊಳಗೆ ಹಾಗರಗಿ ಬಂಧನವಾಗಬೇಕೆಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಎರಡು ದಿನದೊಳಗೆ ದಿವ್ಯಾ ಹಾಗರಗಿ ಬಂಧನವಾಗದಿದ್ದರೆ ಸಿಎಂಗೆ ಮುತ್ತಿಗೆ ಹಾಕುವುದಾಗಿ ಕಾಂಗ್ರೆಸ್ ಎಚ್ಚರಿಕೆ ನೀಡಿದೆ.
ದಿವ್ಯಾ ಪತ್ತೆಗೆ ತೀವ್ರ ಶೋಧ
ಹಗರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಬಂಧನಕ್ಕೆ ಸಿಐಡಿ ತಂಡಗಳು ವಿವಿಧ ಸ್ಥಳಗಳಿಗೆ ತೆರಳಿವೆ. ಹಾಗರಗಿ ಒಡೆತನದ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕ ಕಾಶೀನಾಥ ಕೂಡ ನಾಪತ್ತೆಯಾಗಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ. ಮೂಲಗಳ ಪ್ರಕಾರ ನೀರಾವರಿ ಇಲಾಖೆ ಎಂಜಿನಿಯರ್ ಇದರ ಹಿಂದಿನ ಕಿಂಗ್ಪಿನ್ ಎನ್ನಲಾಗಿದೆ. ಈತನೂ 5 ದಿನ ಗಳಿಂದ ನಾಪತ್ತೆ ಯಾಗಿದ್ದಾನೆ. ಈತ ಅಭ್ಯರ್ಥಿಗಳನ್ನು ಸಂಪರ್ಕಿಸಿ ವ್ಯವಹಾರ ಕುದುರಿಸಿದ್ದಲ್ಲದೆ ಉತ್ತರಗಳನ್ನೂ ಪೂರೈಸಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.