ಖಜೂರಿ ಬಿಸಿಯೂಟ ದುರುಪಯೋಗ: ಆರೋಪ
Team Udayavani, Apr 20, 2022, 9:20 AM IST
ಕಲಬುರಗಿ: ಆಳಂದ ತಾಲೂಕಿನ ಖಜೂರಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರು ಶಾಲೆಗೆ ಬಂದ ಬಿಸಿಯೂಟದ ಆಹಾರಧಾನ್ಯಗಳಾದ ಅಕ್ಕಿ, ಗೋಧಿ ಮತ್ತು ತೊಗರಿ ಬೆಳೆ ಸೇರಿದಂತೆ ಅಲ್ಲಿನ ಎಲ್ಲ ವಸ್ತುಗಳನ್ನು ಮಾರಿ ಹಣ ದುರುಪಯೋಗ ಮಾಡಿಕೊಂಡಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಬಸವರಾಜ ಕೋರಳ್ಳಿ ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲೇ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಿಗೆ, ಡಿಡಿಪಿಐ, ಆಳಂದ ಬಿಇಒ ಅವರಿಗೆ ದೂರು ಸಲ್ಲಿಸಲಾಗಿದೆ. ಒಂದು ವಾರದೊಳಗೆ ಕ್ರಮ ಕೈಗೊಳ್ಳದೇ ಇದ್ದರೇ ಅಪರ ಆಯುಕ್ತರ ಕಚೇರಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಖಜೂರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಗಿಡಗಳನ್ನು ಕಡಿಸಿ ಮಾರಿಕೊಂಡು ಹಣ ದುರುಪಯೋಗ ಮಾಡಿಕೊಂಡಿದ್ದಾರೆ. ಈ ವಿಷಯದ ಕುರಿತು ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಗೆ ದೂರು ನೀಡಿದಾಗ, ಅರಣ್ಯ ಇಲಾಖೆ ಪ್ರಕರಣ ದಾಖಲು ಮಾಡಿಕೊಂಡು, ಅವರ ಕಡೆಯಿಂದ 3000ರೂ. ದಂಡ ವಸೂಲಿ ಮಾಡಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.