ಪಿಎಚ್ ಡಿ ಕೋರ್ಸಿನ 40 ತಿಂಗಳ ಫೆಲೋಶಿಪ್ ಕೇಳಿದ್ದಕ್ಕೆ ವಿದ್ಯಾರ್ಥಿಗಳಿಗೆ ನೋಟಿಸ್

ವಿದ್ಯಾರ್ಥಿ ಸಂಘಟನೆಗಳಿಂದ ಆಕ್ರೋಶ: ಹೋರಾಟದ ಎಚ್ಚರಿಕೆ

Team Udayavani, Apr 20, 2022, 11:39 AM IST

6PHD

ಗಂಗಾವತಿ: ಕನ್ನಡದ ಪ್ರತಿಷ್ಠಿತ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ ಕೋರ್ಸ್ ಮಾಡುತ್ತಿರುವ ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಬಾಕಿ ಇರುವ 40 ತಿಂಗಳ ಫೆಲೋಶಿಪ್ (ಶಿಷ್ಯವೇತನ)ಕೂಡಲೇ ಮಂಜೂರು ಮಾಡುವಂತೆ ವಿವಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ವಿದ್ಯಾರ್ಥಿಗಳು ಮನವಿ ಮಾಡಿದ್ದನ್ನು ಕಾರಣವಾಗಿಟ್ಟುಕೊಂಡು ಹಂಪಿ ವಿವಿಯ ಕುಲಸಚಿವರು ವಿದ್ಯಾರ್ಥಿಗಳನ್ನು ವಿವಿಯಿಂದ ಹೊರ ಹಾಕಲು ಶೋಕಾಸ್ ನೋಟಿಸ್ ನೀಡಿರುವುದನ್ನು ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್ ಎಫ್ ಐ )ಖಂಡಿಸುತ್ತದೆ ವಿವಿಯವರು ಕೂಡಲೇ ನೋಟಿಸ್ ವಾಪಸ್ ಪಡೆಯುವಂತೆ ಸಂಘಟನೆಯ ರಾಜ್ಯಾಧ್ಯಕ್ಷ ಅಮರೇಶ್ ಕಡಗದ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಪಿಎಚ್ ಡಿ ಸಂಶೋಧನಾ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಕಳೆದ 40 ತಿಂಗಳಿಂದ ಫೆಲೋಶಿಪ್ ಬಾರದೇ ಇರುವುದರಿಂದ ವಿದ್ಯಾರ್ಥಿಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಸಂಶೋಧನೆ ಮತ್ತು ದಾಖಲೆಗಳ ಜೋಡಣೆಗೆ ಹಣ ಅವಶ್ಯಕವಾಗಿದ್ದು, ಹಣದ ಕೊರತೆಯಿಂದಾಗಿ ವಿದ್ಯಾರ್ಥಿಗಳು ಓದಿನ ಕಡೆ ಲಕ್ಷ್ಯ ವಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೂಡಲೇ ಶಿಷ್ಯ ವೇತನವನ್ನು ಬಿಡುಗಡೆ ಮಾಡುವಂತೆ ಹಂಪಿ ವಿವಿಗೆ ಇತ್ತೀಚೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕಾರ್ಯಕ್ರಮದಲ್ಲಿ ಮನವಿ ಮಾಡಿದ್ದೇನೆ, ಇದನ್ನು ನೆಪವಾಗಿಟ್ಟುಕೊಂಡು ಎ.ಕೆ. ದೊಡ್ಡಬಸವರಾಜ್ ಎಂಬ ಸಂಶೋಧನಾ ವಿದ್ಯಾರ್ಥಿಗೆ ಕುಲಸಚಿವರು ನಿಮ್ಮನ್ನು ವಿವಿಯಿಂದ ಅಥವಾ ಪಿಎಚ್ ಡಿ ಕೋರ್ಸ್ ನಿಂದ ಯಾಕೆ ಹೊರಗೆ ಹಾಕಬಾರದು ಎನ್ನುವ ಶೋಕಾಸ್ ನೋಟಿಸನ್ನು ಜಾರಿ ಮಾಡಿದ್ದು ಇದು ಪ್ರಜಾಪ್ರಭುತ್ವ, ಸಂವಿಧಾನಕ್ಕೆ ವಿರುದ್ಧವಾಗಿದೆ. ಉನ್ನತ ಶಿಕ್ಷಣದಲ್ಲಿ ಎಸ್ಸಿ ಎಸ್ಟಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಓದಬೇಕು. ಹೆಚ್ಚಿನ ಸಂಶೋಧನೆ ಮಾಡಿ ಉನ್ನತ ಹುದ್ದೆಗೇರಬೇಕೆನ್ನುವ ಸರ್ಕಾರದ ಉದ್ದೇಶಗಳಿಗೆ ವಿವಿಯ ಕುಲಸಚಿವರು ನೀಡಿರುವ ನೋಟಿಸ್ ಮಾರಕವಾಗಿದೆ ಎಂದರು.

ಇದನ್ನೂ ಓದಿ:ಯುವಕನ ಕಣ್ಣಿನಲ್ಲಿತ್ತು 3 ಸೆಂಮೀ ಜೀವಂತ ಹುಳ!: ಶಸ್ತ್ರಚಿಕಿತ್ಸೆ ಯಶಸ್ವಿ

ವಿವಿಗೆ ಮುಖ್ಯಮಂತ್ರಿಗಳು ಭೇಟಿ ನೀಡಿದಾಗ ಬೇಡಿಕೆಗಳನ್ನ ಸಲ್ಲಿಸುವುದು ವಾಡಿಕೆಯಾಗಿದ್ದು, ಇದನ್ನೇ ಕಾರಣವಾಗಿಟ್ಟುಕೊಂಡು ನೋಟಿಸ್ ನೀಡಿರುವುದು ಕಳವಳಕಾರಿಯಾಗಿದೆ. ಶೋಕಾಸ್ ನೋಟಿಸ್ ನಲ್ಲಿ ಈ ಹಿಂದೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣ ವಿವಿಯಲ್ಲಿ ಎ.ಕೆ. ದೊಡ್ಡಬಸವರಾಜ್ ಅವರು ಹೋರಾಟ ಮಾಡಿದ ಸಂದರ್ಭದಲ್ಲಿ ದಾಖಲಾಗಿರುವ ಕೇಸ್ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೆ ಕೌಂಟರ್ ಕೇಸ್ ಮಾಡಿರುವ ಕುರಿತು ಮಾಹಿತಿ ನೀಡಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಹೋರಾಟದ ಹಕ್ಕನ್ನು ಅಡಗಿಸುವ ಷಡ್ಯಂತ್ರ ನಡೆಯುತ್ತಿದ್ದು, ವಿವಿಧ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ. ಕೂಡಲೇ ವಿವಿ ಯವರು ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕು. ಜತೆಗೆ ಹಿಂದುಳಿದ ವಿದ್ಯಾರ್ಥಿಗಳಿಗೆ ಹಣವನ್ನು ನೇರವಾಗಿ ಅವರ ವೈಯಕ್ತಿಕ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೂ ಸಹ ನೇರವಾಗಿ ವಿದ್ಯಾರ್ಥಿಗಳ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರದಿಂದ ವಿವಿಗೆ ಮಂಜೂರಾಗಿರುವ ಎಸ್ಸಿ ಎಸ್ಟಿ 24 ಕೋಟಿ ಹಣದ ಕುರಿತು ವಿವಿ ಕುಲಪತಿ ಅವರು ಲೆಕ್ಕ ಪತ್ರ ಕೊಡಬೇಕು. 40 ತಿಂಗಳ ಫೆಲೋಶಿಪ್ ಹಣ ಮಂಜೂರು ಮಾಡುವಂತೆ ಹಲವು ತಿಂಗಳುಗಳಿಂದ ಹೋರಾಟ ನಡೆಸಲಾಗುತ್ತಿದೆ. ಸಚಿವರಾದ ಬಿ. ಶ್ರೀರಾಮುಲು, ಆನಂದ್ ಸಿಂಗ್ ಸೇರಿದಂತೆ ಉನ್ನತ ಶಿಕ್ಷಣ ಸಚಿವರಿಗೂ ಮನವಿ ಪತ್ರ ಸಲ್ಲಿಸಿದರೂ ಇದುವರೆಗೂ ಸಮಸ್ಯೆಯ ಪರಿಹಾರಕ್ಕೆ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಉನ್ನತ ಶಿಕ್ಷಣದಲ್ಲಿ ಎಸ್ಸಿ ಎಸ್ಟಿ ಹಿಂದುಳಿದ ವಿದ್ಯಾರ್ಥಿಗಳು ಮೇಲೆ ಬರಬಾರದು ಎನ್ನುವ ದುರುದ್ದೇಶ ಸರ್ಕಾರಕ್ಕೆ ಇದ್ದಂತಿದೆ ಎಂದು ಕಡಗದ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.