ಶ್ರೀ ಸದ್ಗುರು ಚಿದಾನಂದ ಮಹಾಸ್ವಾಮಿ ಅವಧೂತರ ದೇವಸ್ಥಾನದಲ್ಲಿ ಸರ್ವಧರ್ಮಿಯರ ಸಾಮೂಹಿಕ ವಿವಾಹ


Team Udayavani, Apr 20, 2022, 2:38 PM IST

Untitled-1

ಕುರುಗೋಡು: ಗ್ರಾಮೀಣ ಪ್ರದೇಶಗಳಲ್ಲೂ ಜನರು ಅದ್ಧೂರಿ ವಿವಾಹ ಮಾಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಅನಾವಶ್ಯಕ ವೆಚ್ಚ ತಡೆಗೆ ಸಾಮೂಹಿಕ ವಿವಾಹ ಬಡವರಿಗೆ ವರದಾನವಾಗುತ್ತಿವೆ. ಸಮಾಜದಲ್ಲಿ ಸರಳ ವಿವಾಹಗಳು ಹೆಚ್ಚು ನಡೆಯಬೇಕು ಎಂದು ಸೋಮಲಾಪುರ ಗ್ರಾಮದ ಶ್ರೀ ಶ್ರೀ ಸದ್ಗುರು ಚಿದಾನಂದ ಮಹಾಸ್ವಾಮಿಯ ಸಂಸ್ಥಾನ ಮಠದ ಪಂಚ ಪಿಠಾಧಿಪತಿ ಶ್ರೀ ಷಡಕ್ಷರ ಮಹಾಸ್ವಾಮಿ ಶ್ರೀಗಳು ಕರೆ ನೀಡಿದರು.

ಪಟ್ಟಣದ  ಸಮೀಪದ ಸೋಮಲಾಪುರ ಗ್ರಾಮದ ಶ್ರೀ ಶ್ರೀ ಸದ್ಗುರು ಚಿದಾನಂದ ಮಹಾಸ್ವಾಮಿ ಅವಧೂತರ 30ನೇ ವರ್ಷದ ಪುಣ್ಯಾ ರಾಧನೆ, ಜಾತ್ರಾ ಮಹೋತ್ಸವ ಹಾಗೂ ಉಚಿತ ಸರ್ವಧರ್ಮಿಯರ 61 ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಾಮೂಹಿಕ ವಿವಾಹದಿಂದ ಜನರು ಭವಿಷ್ಯದಲ್ಲಿ ನೆಮ್ಮದಿ ಜೀವನ ನಡೆಸಬಹುದಾಗಿದೆ. ಸಾಮೂಹಿಕ ವಿವಾಹಗಳು ಸಾಮರಸ್ಯದ ಪ್ರತೀಕವಾಗಿದ್ದು, ಸಮಾಜದಲ್ಲಿಸಮಾನತೆ ಸಹಕಾರ, ಸಹಬಾಳ್ವೆ ಬರಬೇಕಾದರೆ ಇಂತಹ ಮಾದರಿ ಮದುವೆಯನ್ನು ಮಾಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.  ಇದರ ಜೊತೆಗೆ ದೇವರು ಶ್ರೀಮಂತಿಕೆ ಕೊಟ್ಟಾಗ ಸಮಾಜದಲ್ಲಿ ಹಿಂದುಳಿದ ಮತ್ತು ಬಡಜನರಿಗೆ ನೆರವಾಗುವಂತಹ ಕಲ್ಯಾಣ ಕೆಲಸ ಮಾಡಿದಾಗ ಜೀವನ ಸಾರ್ಥಕವಾಗುತ್ತದೆ. ಎಷ್ಟೋ ಜನ ಸಾಕಷ್ಟು ಸ್ಥಿತಿವಂತರಿದ್ದರೂ ಸೇವೆ ಮಾಡುವ ಗುಣ ಇರುವುದಿಲ್ಲ. ಮಾನವ ಜನ್ಮ ತಾಳಿದ ನಾವೆಲ್ಲಹೆತ್ತ ತಂದೆ-ತಾಯಿ, ವಿದ್ಯೆ ನೀಡಿದ ಗುರು ಹಾಗೂ ಸಮಾಜದ ಋುಣ ತೀರಿಸಿದಾಗ ಬದುಕು ಸಾರ್ಥಕವಾಗೊಳ್ಳುತ್ತದೆ. ಅದರಲ್ಲೂ ಕಷ್ಟಪಟ್ಟು ಸಂಪಾದಿಸಿದ ಸಂಪತ್ತಿನಲ್ಲಿ ಬಡವರಿಗೆ ದಾನ, ಧರ್ಮ ಮಾಡುವ ಗುಣ ನಮ್ಮದಾಗಬೇಕು ಎಂದು ಹೇಳಿದರು.

ಪ್ರಾರಂಭದಲ್ಲಿ ಬೆಳಿಗ್ಗೆಯಿಂದ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಪೂಜೆ ಕಾರ್ಯಕ್ರಮ ಗಳು ಜರುಗಿದವು.

ತದನಂತರ ಹಾಲಿ ಶಾಸಕ ಜೆ. ಎನ್. ಗಣೇಶ್ ಮತ್ತು ಮಾಜಿ ಶಾಸಕ ಟಿ. ಎಚ್. ಸುರೇಶ್ ಬಾಬು ದೇವಸ್ಥಾನಕ್ಕೆ ಭೇಟಿ ನೀಡಿ ಅಶ್ರಿವಾದ ಪಡೆದು ನೂತನ ವಧು ವರರಿಗೆ ಶ್ರೀ ಗಳ ಜೊತೆಗೆ ಶುಭ ಹಾರೈಸಿದರು.

ಕಾರ್ಯಕ್ರಮ ದಲ್ಲಿ ದೇವರ ದರ್ಶನ ಪಡೆದು ಬಂದಂತಹ ಭಕ್ತಾದಿಗಳಿಗೆ ಜೋರಾಗಿ ಮಾಜಿ ಶಾಸಕ ಸುರೇಶ್ ಬಾಬು ಕಾರ್ಯಕರ್ತರೊಂದಿಗೆ ಅನ್ನ ದಾಸೋಹ ನೀಡಿದರೆ ಹಾಲಿ ಶಾಸಕ ಗಣೇಶ್ ಅವರು ಕಾರ್ಯಕರ್ತರೊಂದಿಗೆ ದೇವರ ದರ್ಶನ ಪಡೆದು ಮನೆಗಳಿಗೆ ಭೇಟಿ ನೀಡಿದ ಸಂದರ್ಭ ಕಂಡುಬಂದಿತು.

ಟಾಪ್ ನ್ಯೂಸ್

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

1-redddi

Ballari;13 ವರ್ಷದ ಬಳಿಕ ಜನಾರ್ದನ ರೆಡ್ಡಿ ಗ್ರ್ಯಾಂಡ್ ಎಂಟ್ರಿ: ಅಭಿಮಾನಿಗಳ ಸಂಭ್ರಮಾಚರಣೆ

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

ಬಳ್ಳಾರಿ: ತಾರಾನಾಥ ಆಯುರ್ವೇದ ಆಸ್ಪತ್ರೆ ಕಟ್ಟಡ ಶೀಘ್ರ ನಿರ್ಮಾಣ- ಭರತ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.