ಬಳವಡಗಿ ಜಲ ಸಂಕಷ್ಟ ನಿವಾರಣೆಗೆ 3 ಕೋಟಿ
Team Udayavani, Apr 20, 2022, 2:56 PM IST
ವಾಡಿ: ಕಲ್ಲು ಗಣಿಗಳಿಂದ ನೀರು ಹೊತ್ತು ಅಕ್ಷರಶಃ ಜಲ ಸಂಕಷ್ಟ ಅನುಭವಿಸುತ್ತಿರುವ ಬಳವಡಗಿ ಗ್ರಾಮಸ್ಥರ ನೀರಿನ ಬವಣೆ ನೀಗಿಸಲು ಶಾಸಕ ಪ್ರಿಯಾಂಕ್ ಖರ್ಗೆ 2.49 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಮನೆ-ಮನೆಗೆ ನಳ ಸಂಪರ್ಕ ಜೋಡಣೆ ಕಾಮಗಾರಿಗೆ ಚಾಲನೆ ದೊರೆತಿದೆ.
ಬಳವಡಗಿ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯ್ಯದ್ ಮಹೆಮೂದ್ ಸಾಹೇಬ, ಕುಡಿಯುವ ನೀರಿನ ಹಾಹಾಕಾರವಿದ್ದ ಚಿತ್ತಾಪುರ ಮತಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ಶಾಸಕರಾದ ಬಳಿಕ ನೀರಿನ ಕೊರತೆ ನೀಗಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಸದ್ಯ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜೆಜೆಎಂ ಅನುದಾನದಡಿ ಬಳವಡಗಿ ಗ್ರಾಮಕ್ಕೆ 249.40ಲಕ್ಷ ರೂ., ಎಸ್‌ಡಿಪಿ ಅನುದಾನದಲ್ಲಿ ಸುಗೂರ (ಎನ್) ಗ್ರಾಮಕ್ಕೆ 10ಲಕ್ಷ ರೂ. ಹಾಗೂ ಸನ್ನತಿ ಗ್ರಾಮಕ್ಕೆ 40ಲಕ್ಷ ರೂ., ರಾಂಪೂರಹಳ್ಳಿ ಹಾಗೂ ತರ್ಕಸ್‌ಪೇಟೆಗೆ 36.89ಲಕ್ಷ ರೂ. ಮಂಜೂರು ಮಾಡಿದ್ದಾರೆ ಎಂದರು.
ಚಿತ್ತಾಪುರ ಮತಕ್ಷೇತ್ರದಲ್ಲಿ ಭೀಮಾ ಮತ್ತು ಕಾಗಿಣಾ ಮಹಾ ನದಿಗಳು ಹರಿಯುತ್ತಿವೆ. ಆದರೂ ಹಲವು ಗ್ರಾಮಗಳು ಸೇರಿದಂತೆ ಚಿತ್ತಾಪುರ, ವಾಡಿ ನಗರಗಳ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿಯಿತ್ತು. ಶಾಸಕ ಖರ್ಗೆ ಅವರ ಕ್ರಿಯಾಶೀಲ ನಡೆಯಿಂದ ಹಾಗೂ ಜನಪರ ಕಾಳಜಿಯಿಂದಾಗಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿದೆ ಎಂದು ಹೇಳಿದರು.
ಯುವ ಕಾಂಗ್ರೆಸ್ ಅಧ್ಯಕ್ಷ ಶರಣು ವಾರದ, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜ ಸಜ್ಜನ್, ಸನ್ನತಿ ಗ್ರಾಪಂ ಅಧ್ಯಕ್ಷ ಸುಭಾಷ, ಗುರುಗೌಡ ಇಟಗಿ, ಭೀಮರಾಯ, ಸಲೀಮಸಾಬ್ ಮುಗಳ್ಳಿ, ರಾಮರೆಡ್ಡಿ ಕೊಳ್ಳಿ, ಮಲ್ಲಿನಾಥ ಪಾಟೀಲ ಸನ್ನತಿ, ದೇವೇಗೌಡ ತೋಟದ, ಪರ್ವತರೆಡ್ಡಿ ಪಾಟೀಲ, ಮಲ್ಲಿಕಾರ್ಜುನ ಮದನಕರ, ಗೋಪಾಲ ಜಾಧವ, ಮಹ್ಮದ್ ಕರೀಮ್ ಹಾಗೂ ಮತ್ತಿತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.