ಕೊಚ್ಚೆ ಗುಂಡಿಯಲ್ಲಿದೆ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಳ್ಳಿ !
Team Udayavani, Apr 20, 2022, 5:22 PM IST
ತೀರ್ಥಹಳ್ಳಿ : ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಳ್ಳಿಗಳ ಜನರ ಪ್ರತಿಯೊಬ್ಬರ ಆರೋಗ್ಯ ದೃಷ್ಠಿಯಿಂದ ಶುದ್ಧ ನೀರು ಕುಡಿಯಬೇಕೆನ್ನುವ ವಿಶೇಷ ಕಾಳಜಿಯಿಂದ ಕೋಟ್ಯಂತರ ರೂ ವೆಚ್ಚದಲ್ಲಿ ಪ್ರತಿ ಮನೆ ಮನೆಗೆ, ಗಂಗೆ (ಜೆಜೆಎಂ) ಶುದ್ಧ ಕುಡಿಯುವ ನಲ್ಲಿ ನೀರಿನ ಯೋಜನೆ ನೀಡಿರುತ್ತಾರೆ.
ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರ ವಿಶೇಷ ಪರಿಶ್ರಮದಿಂದ ಕೋಟ್ಯಂತರ ರೂಪಾಯಿಗಳ ಅನುದಾನ ಹರಿದು ಬಂದಿದ್ದು ಕಾಮಗಾರಿಗಳು ಭರದಿಂದ ನೆಡೆಯುತ್ತಿದೆ. ಆದರೆ ಕೆಲವು ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಗುತ್ತಿಗೆ ವಹಿಸಿಕೊಂಡ ಗುತ್ತಿಗೆದಾರರು ಬೇಕಾ ಬಿಟ್ಟಿ ಕೆಲಸ ಮಾಡಿ ತಮ್ಮ ಬಿಲ್ ಮಂಜೂರು ಮಾಡಿಸಿಕೊಂಡು ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಗುತ್ತಿಗೆದಾರರು ಇನ್ನು ಕೆಲವೊಂದು ಭಾಗದಲ್ಲಿ ಕಾಮಗಾರಿಯನ್ನು ಒಳಗುತ್ತಿಗೆ ನೀಡಿ ನಾಮಕಾವಸ್ಥೆಗೆ ಮನೆ ಮನೆಗೆ ನಳ್ಳಿ ಜೋಡಣೆ ಮಾಡಿದ್ದು ಅದರ ನೆಲಭಾಗದ ಕೆಳಗೆ ನೀರಿನ ಪೈಪ್ ನ ಸಂಪರ್ಕವೇ ಇಲ್ಲದೇ ನಲ್ಲಿಯಲ್ಲಿ ನೀರೇ ಇಲ್ಲ ಎಂಬ ಮಾತು ಕೇಳಿಬರುತ್ತಿದೆ.
ಇನ್ನು ಕೆಲವು ಭಾಗಗಳಲ್ಲಿ ಬಚ್ಚಲು ಮನೆಯ ನೀರು ಹೋಗುವ ಕೊಚ್ಚೆ ಗುಂಡಿಯಲ್ಲಿ ಕುಡಿಯುವ ನಳ್ಳಿ ನೀರಿನ ಸಂಪರ್ಕ ಜೋಡಿಸಿ ಗುತ್ತಿಗೆದಾರರು ಕಾಮಗಾರಿಯ ಸಾಧನೆ ಗೈದಿದ್ದಾರೆ. ಉದಾಹರಣೆ ಎಂಬಂತೆ ತಾಲೂಕಿನ ಅರೇಹಳ್ಳಿ ಗ್ರಾಮಪಂಚಾಯಿತಿ ಜೋಡುಕಟ್ಟೆ ಬಯಲು ಎಸ್.ಸಿ ಕಾಲೋನಿಯಲ್ಲಿ ಮನೆ ಮನೆಗೆ ಗಂಗೆ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಳ್ಳಿ ಕೊಚ್ಚೆ ಗುಂಡಿಯಲ್ಲಿ ನಿರ್ಮಿಸಿದ್ದು ಕಂಡುಬರುತ್ತಿದೆ.
ಇದನ್ನೂ ಓದಿ : ಆಲಮಟ್ಟಿ: ಕುಡಿಯುವ ನೀರಿಗಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಧರಣಿ ನಿರತರು ಅಸ್ವಸ್ಥ
ತಕ್ಷಣವೇ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿ, ಹಾಗೂ ಅಭಿವೃದ್ಧಿ ಅಧಿಕಾರಿಗಳು ನಿದ್ರಾವಸ್ಥೆಯಿಂದ ಎದ್ದು ಗಮನಹರಿಸಿ ಕುಡಿಯುವ ನೀರಿನ ನಳ್ಳಿಯನ್ನು ಕೊಚ್ಚೆ ಗುಂಡಿಯಿಂದ ತೆಗೆಸಿ ಸೂಕ್ತ ಜಾಗದಲ್ಲಿ ಅಳವಡಿಸಿ ಜೋಡುಕಟ್ಟೆ ಬಯಲು ಎಸ್. ಸಿ ಕಾಲೋನಿಯವರ ಆರೋಗ್ಯ ಕಾಪಾಡಲಿ ಎನ್ನುವ ಮಾತು ಆ ಭಾಗದ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.