ಚಾಮರಾಜನಗರ: ಅಪ್ರಾಪ್ತ ಬಾಲಕಿ ಅಪಹರಿಸಿ ವಿವಾಹ; ಅಪರಾಧಿಗೆ 20 ವರ್ಷ ಶಿಕ್ಷೆ
Team Udayavani, Apr 20, 2022, 8:24 PM IST
ಚಾಮರಾಜನಗರ: ತಾಲೂಕಿನ ಗ್ರಾಮವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿಕೊಂಡು ಮದುವೆಯಾಗಿ ದೈಹಿಕ ಸಂಬಂಧ ಬೆಳೆಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ತಾಲೂಕಿನ ಹೊನ್ನಹಳ್ಳಿ ಗ್ರಾಮದ ಮಹೇಶ್ (ಮಾಯಿ) (28 ವರ್ಷ) ಶಿಕ್ಷೆಗೆ ಗುರಿಯಾದ ಅಪರಾಧಿ. ಕಳೆದ 2019ರ ಮಾರ್ಚ್ 17ರಂದು 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿಕೊಂಡು ಮದುವೆಯಾಗಿ ನಂತರ ಬೆಂಗಳೂರಿಗೆ ತೆರಳಿ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ನಡೆಸಿದ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ವಿಚಾರಣೆ ನಡೆದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಆರೋಪಿತ ವ್ಯಕ್ತಿಗೆ ಪೋಕ್ಸೋ ಕಾಯ್ದೆ ಕಲಂ 6ರ ಅನ್ವಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರಿಡಲು ತೀರ್ಮಾನ
ಅಲ್ಲದೇ ಕಾನೂನು ಸೇವಾ ಪ್ರಾಧಿಕಾರದಿಂದ ನೊಂದ ಬಾಲಕಿಗೆ ಪರಿಹಾರದ ರೂಪದಲ್ಲಿ 5 ಲಕ್ಷ ರೂ. ಹಣವನ್ನು ಒಂದು ತಿಂಗಳೊಳಗೆ ನೀಡುವಂತೆ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ. ಯೋಗೇಶ್ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Covid Scam: ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Waqf Notice: ವಕ್ಫ್ ಬೋರ್ಡ್ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ
By Election: ಗದ್ದುಗೆ ಸೈನಿಕ ಯೋಗೇಶ್ವರ್ಗೋ? ನಿಖಿಲ್ ಕುಮಾರಸ್ವಾಮಿಗೋ?
Election Campaign: ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ
MUST WATCH
ಹೊಸ ಸೇರ್ಪಡೆ
Bantwala: ಪ್ರಿಯತಮೆಯನ್ನು ಭೇಟಿಯಾಗಲು ಬಂದ ಯುವಕನಿಗೆ ಸ್ಥಳೀಯರಿಂದ ಹಲ್ಲೆ: ಪ್ರಕರಣ ದಾಖಲು
Tollywood: ‘ಕಣ್ಣಪ್ಪʼ ಚಿತ್ರದ ಫೋಟೋ ಲೀಕ್; 5 ಲಕ್ಷ ರೂ. ಘೋಷಿಸಿದ ಬಳಿಕ ವ್ಯಕ್ತಿ ಪತ್ತೆ
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Belagavi: ಮರಾಠ ರೆಜಿಮೆಂಟ್ನಲ್ಲಿ ನೇಮಕಾತಿ ರಾಲಿ; ಯುವಕರಿಂದ ನೂಕುನುಗ್ಗಲು, ತಳ್ಳಾಟ
BMTC Bus: ಎಲ್ಲ ಬಿಎಂಟಿಸಿ ಬಸ್ಸಲ್ಲೂ ಸಿಗ್ತಿಲ್ಲ ಯುಪಿಐ ಟಿಕೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.