ಎಂ.ಬಿ.ಪಾಟೀಲ್‌ ವಿರುದ್ಧ ಲಕ್ಷ್ಮಣ ಸವದಿ ಸ್ಪರ್ಧೆ?

Team Udayavani, Apr 21, 2022, 6:05 AM IST

ಎಂ.ಬಿ.ಪಾಟೀಲ್‌ ವಿರುದ್ಧ ಲಕ್ಷ್ಮಣ ಸವದಿ ಸ್ಪರ್ಧೆ?

ವಿಜಯಪುರ : ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದ್ದರೂ ಜಿಲ್ಲೆಯಲ್ಲಿ ಈಗಾಗಲೇ ಚುನಾವಣೆ ಸಿದ್ಧತೆ ಆರಂಭಗೊಂಡಿವೆ. ನಾಯಕರ ಹೇಳಿಕೆಗಳು, ವರ್ತನೆಗಳು ಚುನಾವಣೆ ತಂತ್ರಗಾರಿಕೆ ಸಿದ್ಧತೆಗೆ ಪುಷ್ಟಿ ನೀಡಿವೆ.

ಕೆಪಿಸಿಸಿ ಚುನಾವಣ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಪ್ರತಿನಿಧಿ ಸುವ ಬಬಲೇಶ್ವರ ಕ್ಷೇತ್ರ ಈ ಬಾರಿ ರಾಜಕೀಯ ವರ್ಣರಂಜಿತ ರಣರಂಗಕ್ಕೆ ಸಾಕ್ಷಿಯಾಗುವ ಮುನ್ಸೂಚನೆ ಇದೆ. ಇವರ ವಿರುದ್ಧ ಜೆಡಿಎಸ್‌ನಿಂದ 2 ಬಾರಿ, ಬಿಜೆಪಿಯಿಂದ ಒಂದು ಬಾರಿ ಸೋತಿರುವ ವಿಜುಗೌಡ ಅವರಿಗಿಂತ ಬಲಿಷ್ಠ ಹೊಸ ಮುಖದ ಹುಡುಕಾಟ ನಡೆಸಿದೆ ಬಿಜೆಪಿ. ಆಪರೇಷನ್‌ ಕಮಲದಿಂದ ಅಥಣಿ ಕ್ಷೇತ್ರ ಕಳೆದುಕೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಣ್ಣು ಇದೇ ಕ್ಷೇತ್ರದ ಮೇಲಿದೆ. ಎಂ.ಬಿ. ಪಾಟೀಲ್‌ ಅವರನ್ನು ಹೇಗಾದರೂ ಮಾಡಿ ಸೋಲಿ ಸಲು ಕಮಲ ಪಾಳೆಯ ಅದಾಗಲೇ ಆಂತರಿಕ ರಣತಂತ್ರ ರೂಪಿಸಿದೆ.

ಇನ್ನು ಆಡಳಿತಾರೂಢ ಬಿಜೆಪಿ ಬಂಡುಕೋರ ಎಂದೇ ಕರೆಸಿಕೊಂಡಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಸೋಲಿಸಲೂ ತಂತ್ರಗಾರಿಕೆ ನಡೆದಿದೆ. ಮುಸ್ಲಿಮರು ಹೆಚ್ಚಿದ್ದಾರೆಂಬ ಕಾರಣಕ್ಕೆ ವಿಜಯಪುರ ಕ್ಷೇತ್ರವನ್ನು ಕಾಂಗ್ರೆಸ್‌ ಅಘೋಷಿತ ಮೀಸಲಿನಂತೆ ಇದೇ ಸಮುದಾಯಕ್ಕೆ ಟಿಕೆಟ್‌ ನೀಡುತ್ತಿದೆ. ಆದರೆ ಕಳೆದ ಎರಡೂವರೆ ದಶಕದಲ್ಲಿ ಕಾಂಗ್ರೆಸ್‌ ಒಂದು ಬಾರಿ ಮಾತ್ರ ಡಾ| ಎಂ.ಎಸ್‌.ಬಾಗವಾನ ಮೂಲಕ ಗೆಲ್ಲಲು ಸಾಧ್ಯವಾಗಿದೆ. ಹೀಗಾಗಿ ಯತ್ನಾಳ್‌ ಸೋಲಿಸಲು ಮುಸ್ಲಿಮೇತರ ಸಮುದಾಯದ ಸಮರ್ಥ ವ್ಯಕ್ತಿಯನ್ನು ಕಣಕ್ಕಿಳಿಸಬೇಕು. ಇದರಿಂದ ರಾಜಕೀಯ ಅವಕಾಶ ವಂಚಿತ ತಮ್ಮ ಸಮುದಾಯಕ್ಕೆ ರಾಜಕೀಯ ಅಧಿಕಾರದ ಪರ್ಯಾಯ ಅವಕಾಶ ಕಲ್ಪಿಸುವಂತೆ ಅಂತರಿಕ ಸಭೆಗಳನ್ನೂ ನಡೆಸಲಾಗಿದೆ.

ಇದನ್ನೂ ಓದಿ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹಠಾತ್‌ ನಿವೃತ್ತಿ ಘೋಷಿಸಿದ ಕೈರನ್‌ ಪೋಲಾರ್ಡ್‌

ರವಿಕಾಂತ ಪಾಟೀಲ್‌ ದುಂಬಾಲು : ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಇಂಡಿ ಕ್ಷೇತ್ರದಲ್ಲಿ ನನಗೆ ಬಿಜೆಪಿ ಟಿಕೆಟ್‌ ನೀಡಿದರೆ ಗೆದ್ದು ತೋರಿಸು ತ್ತೇನೆ ಎಂದು ಸತತ ಮೂರು ಬಾರಿ ಇದೇ ಕ್ಷೇತ್ರದಿಂದ ಪಕ್ಷೇತರರಾಗಿ ಗೆದ್ದಿದ್ದ ರವಿಕಾಂತ ಪಾಟೀಲ್‌ ಬಹಿರಂಗ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ಕಳೆದ ಬಾರಿಯ ಪರಾಜಿತ ದಯಾಸಾಗರ ಪಾಟೀಲ್‌, ಜಿ.ಪಂ. ಮಾಜಿ ಅಧ್ಯಕ್ಷ ಶಿವಯೋಗೆಪ್ಪ ನೇದಲಗಿ ಸೇರಿದಂತೆ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳು ದಿಗಿಲುಗೊಳ್ಳುವಂತೆ ಮಾಡಿದ್ದಾರೆ. ಬಸವನಬಾಗೇವಾಡಿ ಕ್ಷೇತ್ರಕ್ಕೆ ಈರಣ್ಣ ಪಟ್ಟಣಶೆಟ್ಟಿ ಮುಂದಿನ ಶಾಸಕ’ ಎಂದು ಕೆಲವು ಯುವಕರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್‌ ಶಾಸಕ ಶಿವಾನಂದ ಪಾಟೀಲ ಬೆಂಬಲಿಗರನ್ನು ಕೆರಳಿಸಿದೆ. ಇದರಿಂದ ಬೆಚ್ಚಿದ ಪಟ್ಟಣಶೆಟ್ಟಿ ನಾನು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಲ್ಲ, ಅವರಿಗೆ ದ್ರೋಹ ಬಗೆಯಲಾರೆ ಎಂದು ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ. ಈ ಬೆಳವಣಿಗೆ ಹಿಂದೆ ಪಕ್ಷದಲ್ಲೇ ಇರುವ ಕೆಲವು ನಾಯಕರು ನಡೆಸುತ್ತಿರುವ ಪಿತೂರಿ ಎಂಬ ಗುಮಾನಿಯೂ ಇದೆ.

ಇನ್ನು ಇದೇ ಕ್ಷೇತ್ರದಲ್ಲಿ ಶಿವಾನಂದ ಪಾಟೀಲರನ್ನು ಸೋಲಿಸಬೇಕೆಂದು ಜೆಡಿಎಸ್‌ ಪಕ್ಷದಿಂದ ಹ್ಯಾಟ್ರಿಕ್‌ ಸೋಲು ಕಂಡಿರುವ ಸೋಮನಗೌಡ ಪಾಟೀಲ್‌ ಮನಗೂಳಿ ಅವರನ್ನು ಬಿಜೆಪಿ ತನ್ನತ್ತ ಸೆಳೆದಿದೆ. ಟಿಕೆಟ್‌ ನೀಡಿಕೆ ಭರವಸೆ ಇದೆ ಎಂಬ ಮಾತಿದೆ. ಕಳೆದ ಬಾರಿ ಸಂಗರಾಜ ದೇಸಾಯಿಗೆ ಬಿಜೆಪಿ ಮಣೆ ಹಾಕಿದ್ದರಿಂದ ಟಿಕೆಟ್‌ ವಂಚಿತರಾಗಿದ್ದ ಬೆಳ್ಳುಬ್ಬಿ ವಿಜಯಪುರ ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ ಪಡೆದು ಹೀನಾಯ ಸೋಲು ಅನುಭವಿಸಿದ್ದರು. ಮತ್ತೆ ಬಿಜೆಪಿ ಸೇರಿರುವ ಮಾಜಿ ಸಚಿವ ಎಸ್‌.ಕೆ.ಬೆಳ್ಳುಬ್ಬಿ ಪಾಳೆಯದಲ್ಲಿ ಇದೀಗ ಮತ್ತೆ ಅಸಮಾಧಾನ ಹೊಗೆಯಾಡುತ್ತಿದೆ.

ರಾಜ್ಯ ರಾಜಕಾರಣಕ್ಕೆ ಸಂಸದ ಜಿಗಜಿಣಗಿ?
ಪರಿಶಿಷ್ಟ ಜಾತಿಗೆ ಮೀಸಲಾಗಿರುವ ನಾಗಠಾಣ ಕ್ಷೇತ್ರದಲ್ಲಿ ಸದ್ಯಕ್ಕೆ ಜೆಡಿಎಸ್‌ನ ದೇವಾನಂದ ಚವ್ಹಾಣ ಶಾಸಕರಾಗಿದ್ದು, ಬಿಜೆಪಿಯಿಂದ ಸ್ಪಧಿ ìಸಲು ಕೇಂದ್ರದ ಮಾಜಿ ಸಚಿವ-ಹಾಲಿ ಸಂಸದ ರಮೇಶ್‌ ಜಿಗಜಿಣಗಿ ಸಿದ್ಧತೆ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷ ಮಾಜಿ ಶಾಸಕ ವಿಠ್ಠಲ ಕಟಕದೊಂಡ ಬದಲಿಗೆ ಹೊಸ ಮುಖದ ಹುಡುಕಾಟದಲ್ಲಿದೆ. ಬಿಜೆಪಿ ಶಾಸಕ ಸೋಮನಗೌಡ ಸಾಸನೂರು ದೇವರಹಿಪ್ಪರಗಿ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಈ ಕ್ಷೇತ್ರದಲ್ಲಿ ಬಿಜೆಪಿ ಹೊಸ ಮುಖದ ಹುಡುಕಾಟದಲ್ಲಿದೆ. ಸಿಂದಗಿ, ಮುದ್ದೇಬಿಹಾಳ, ದೇವರಹಿಪ್ಪರಗಿ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ನಿಂದ ಸದ್ಯಕ್ಕೆ ಕಳೆದ ಬಾರಿಯ ಸಾಂಪ್ರದಾಯಿಕ ಎದುರಾಳಿಗಳೇ ಮತ್ತೆ ಮುಖಾಮುಖೀಯಾಗುವ ಸಾಧ್ಯತೆ ಇದೆ. ಸಂಘಟನೆ ದೃಷ್ಟಿಯಿಂದ ಜೆಡಿಎಸ್‌ ಜಿಲ್ಲೆಯಲ್ಲಿ ದುರ್ಬಲವಾಗಿದೆ, ಚುನಾವಣೆ ವೇಳೆಗೆ ಅನ್ಯ ಪಕ್ಷಗಳ ಟಿಕೆಟ್‌ ವಂಚಿತರು ಈ ಪಕ್ಷದತ್ತ ಜಿಗಿಯುವ ನಿರೀಕ್ಷೆ ಇರಿಸಿಕೊಳ್ಳಲಾಗಿದೆ. ಆಮ್‌ ಆದ್ಮಿ ಪಕ್ಷದಿಂದಲೂ ಅನ್ಯ ಪಕ್ಷಗಳ ಅಸಮಾಧಾನಿತರು ಸ್ಪ ರ್ಧಿಸುವ ನಿರೀಕ್ಷೆ ಇದೆ.

ಜಿ.ಎಸ್‌. ಕಮತರ

ಟಾಪ್ ನ್ಯೂಸ್

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.