![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 21, 2022, 1:40 PM IST
ಬೆಂಗಳೂರು: ‘ಹುಬ್ಬಳ್ಳಿ ವಿಚಾರದಲ್ಲಿ ಶಾಂತಿ ಕಾಪಾಡಲು ನಮ್ಮ ಪಕ್ಷದ ಎಲ್ಲ ನಾಯಕರು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದಾರೆ. ಆದರೂ ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಎಲ್ಲ ಘಟನೆಗಳಿಗೆ ಮೂಲ ಪ್ರಚೋದನೆ ಬಿಜೆಪಿಯವರ ಕುಮ್ಮಕ್ಕಿನಿಂದಾದ ಟ್ವೀಟ್. ಇದಕ್ಕೆ ಬಿಜೆಪಿಯವರೇ ಕಾರಣ. ಅದರ ಬಗ್ಗೆ ತನಿಖೆ ಆಗಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಗ್ರಹಿಸಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ‘ಕೆಲವು ಕಿಡಿಗೇಡಿಗಳು ಕಾನೂನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ. ನಮ್ಮ ಜಿಲ್ಲಾಧ್ಯಕ್ಷರಾದ ಅಲ್ತಾಫ್ ಪರಿಸ್ಥಿತಿ ನಿಯಂತ್ರಿಸುವ ಸಂದರ್ಭದಲ್ಲಿ ಕಲ್ಲೇಟು ತಿಂದು, ಕೈ ಮುರಿದುಕೊಂಡು, ನೋವು ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಗಂಗಾವತಿಗೆ ಇಕ್ಬಾಲ್ ಅನ್ಸಾರಿ ಕೈ ಅಭ್ಯರ್ಥಿ ವರಿಷ್ಠರ ನಿರ್ಧಾರ :ಶಾಸಕ ಹಿಟ್ನಾಳ್
ಆದರೆ ಯಡಿಯೂರಪ್ಪ ಅವರಾಗಲಿ , ಅಶೋಕ್ ಅವರಾಗಲಿ ಪರಿಸ್ಥಿತಿ ತಿಳಿಗೊಳಿಸಲು ಯಾವುದೇ ಪ್ರಯತ್ನ ಮಾಡಿಲ್ಲ. ಬದಲಿಗೆ ಅವರು ಬೇಕೆಂದು ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ. ಸುಮ್ಮನೆ ನಮ್ಮ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದರೆ ಯಾವುದೇ ಪ್ರಯೋಜನವಿಲ್ಲ.ಅವರು ತಮ್ಮ 40 % ಕಮಿಷನ್ ವಿಚಾರ ಮುಚ್ಚಿಹಾಕಲು ಈ ವಿಚಾರವನ್ನು ದೊಡ್ಡದಾಗಿ ಬಿಂಬಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.
ಕಾಂಗ್ರೆಸ್ ನವರಿಗೂ ಹುಬ್ಬಳ್ಳಿ ಗಲಭೆಗೂ ಯಾವುದೇ ಸಂಬಂಧ ಇಲ್ಲ. ನಮ್ಮವರು ಶಾಂತಿ ಕಾಪಾಡಲು ಶ್ರಮಿಸಿದ್ದಾರೆ ಅಷ್ಟೇ ಎಂದು ಹೇಳಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.