ಎಪಿಎಂಸಿ: ಕಾಂಗ್ರೆಸ್‌ ಬೆಂಬಲಿಗರ ಮೇಲುಗೈ; ಬಿಜೆಪಿ 4, 1 ಪಕ್ಷೇತರ ಗೆಲುವು

ಬಿಜೆಪಿ ಹಾಗೂ ಕಾಂಗ್ರೆಸ್‌ ಬೆಂಬಲಿತರು ಮತ ಎಣಿಕೆ ಕೇಂದ್ರ ಮುಂದೆ ಜಮಾಯಿಸಿದ್ದರು.

Team Udayavani, Apr 21, 2022, 6:03 PM IST

ಎಪಿಎಂಸಿ: ಕಾಂಗ್ರೆಸ್‌ ಬೆಂಬಲಿಗರ ಮೇಲುಗೈ; ಬಿಜೆಪಿ 4, 1 ಪಕ್ಷೇತರ ಗೆಲುವು

ಚಾಮರಾಜನಗರ: ಚಾಮರಾಜನಗರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತರು ಮೇಲುಗೈ ಸಾಧಿಸಿದ್ದಾರೆ. 7 ಮಂದಿ ಕಾಂಗ್ರೆಸ್‌ ಬೆಂಬಲಿತರು, 4 ಮಂದಿ ಬಿಜೆಪಿ ಬೆಂಬಲಿತರು ಹಾಗೂ ವರ್ತಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಜಯಗಳಿಸಿದ್ದಾರೆ.

ನಗರದ ಸೋಮವಾರ ಪೇಟೆಯ ಬಳಿ ಯುನಿರ್ವಸ್‌ ಶಾಲೆಯಲ್ಲಿ ಬುಧವಾರ ಮತಗಳ ಎಣಿಕೆ ನಡೆಯಿತು. ಕಾಂಗ್ರೆಸ್‌ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ ಕಾಂಗ್ರೆಸ್‌ 7 ಸ್ಥಾನಗಳಲ್ಲಿ ಗೆ ಲುವಿನ ನಗೆ ಬೀರಿದೆ. ಬಿಜೆಪಿ ನಾಲ್ಕು ಸ್ಥಾನಕ್ಕೆ ತೃಪ್ತಿ ಪಟ್ಟಿಕೊಂಡರೆ, ವರ್ತಕರ ಕ್ಷೇತ್ರದಿಂದ ಪಕ್ಷೇತರ ಅಭ್ಯ ರ್ಥಿ ವೆಂಕಟರಾವ್‌ ಜಯಗಳಿಸಿದ್ದಾರೆ. ಇವರು ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗೆ ಪ್ರಮುಖ ಪಾತ್ರ ವಹಿಸಲಿದ್ದಾರೆ.

ಬೆಳಗ್ಗೆ 8 ಗಂಟೆಗೆ ಆರಂಭವಾದ ಮತ ಏಣಿಕೆ ಮಧ್ಯಾಹ್ನ ದವರಗೆ ಮಂದ ಗತಿಯಲ್ಲಿ ಸಾಗಿತ್ತು. ವರ್ತಕರ ಕ್ಷೇತ್ರದಿಂದ ಪ್ರಥಮ ವಾಗಿ 90 ಮತಗಳ ಅಂತರದಲ್ಲಿ ವೆಂಕಟರಾವ್‌ ಗೆಲುವು ಸಾಧಿಸಿದರು. ನಂತರ ಹೊಂಗನೂರು ಕ್ಷೇತ್ರದಿಂದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಹೊಮ್ಮದ ಜಿ.ಎಂ. ರವಿಶಂಕರ್‌ ಮೂರ್ತಿ ಹಾಗೂ ನಾಗವಳ್ಳಿ ಕ್ಷೇತ್ರದಿಂದ ಅಲೂರು ಎ.ಎಸ್‌. ಪ್ರದೀಪ್‌ ಮಧ್ಯಾಹ್ನ ವೇಳೆಗೆ ಗೆಲುವು ಸಾಧಿಸಿದ್ದರು. ಮಧ್ಯಾಹ್ನ 3.30 ರ ನಂತರ ಇನ್ನುಳಿದ ಎಲ್ಲಾ
ಕ್ಷೇತ್ರಗಳ ಫ‌ಲಿತಾಂಶಗಳು ಒಂದೊಂದಾಗಿ ಪ್ರಕಟವಾದವು.

ವಿಜೇತರ ಪಟ್ಟಿ: ಚಾಮರಾಜನಗರ ಕ್ಷೇತ್ರ ದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ಮನೋಜ್‌ ಪಟೇಲ್‌ 396 ಮತಗಳ ಅಂತರದಿಂದ ಜಯಗಳಿಸಿದರು. ಬದನಗುಪ್ಪೆ ಕ್ಷೇತ್ರದಿಂದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ 140 ಮತಗಳ ಅಂತರದಿಂದ ಗೆದ್ದರು.

ಹರವೆ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಹದೇವ ಪ್ರಸಾದ್‌ 65 ಮತಗಳ ಅಂತರದಿಂದ, ಉಡಿಗಾಲ ಕ್ಷೇತ್ರದಿಂದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಪ್ರೇಮಾ ಶೇಖರಪ್ಪ 667 ಮತಗಳ ಅಂತರದಿಂದ, ಅಮಚವಾಡಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ರವಿಕುಮಾರ್‌ 24 ಮತಗಳ ಅಂತರದಿಂದ ಗೆಲುವು ಸಾಧಿಸಿದರು.ಹರದನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಎಚ್‌.ಎನ್‌.ಮಹದೇವಸ್ವಾಮಿ (ಸೋಮೇಶ್‌) 115 ಮತಗಳ ಅಂತರದಿಂದ, ನಾಗವಳ್ಳಿ ಕ್ಷೇತ್ರದಿಂದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಆಲೂರು ಎ.ಎಸ್‌. ಪ್ರದೀಪ್‌ 1674 ಮತಗಳ ಭರ್ಜರಿ ಅಂತರದಿಂದ ವಿಜಯ ಗಳಿಸಿದರು.

ಹೊಂಗನೂರು ಕ್ಷೇತ್ರದಿಂದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಜಿ.ಎಂ. ರವಿಶಂಕರ ಮೂರ್ತಿ 120 ಮತಗಳ ಅಂತರದಿಂದ, ಉಮ್ಮತ್ತೂರು ಕ್ಷೇತ್ರದಿಂದ ಬಿಜೆಪಿ ಬೆಂಬಲಿತೆ ಕಲಾವತಿ ಕೇವಲ 2 ಮತಗಳ ಅಂತರದಿಂದ, ಯಳಂದೂರು ಕಸಬಾ ಕ್ಷೇತ್ರದಿಂದ ಕಾಂಗ್ರೆಸ್‌ ಬೆಂಬಲಿತ ಎಂ. ಮಹೇಶ್‌ 485 ಮತಗಳ ಅಂತರದಿಂದ, ಅಗರ ಕ್ಷೇತ್ರ ದಿಂದ ಕಾಂಗ್ರೆಸ್‌ ಬೆಂಬಲಿತ ಎಲ್‌.ರಾಮಚಂದ್ರ 280 ಮತಗಳ ಅಂತರದಿಂದ ಹಾಗೂ ವರ್ತಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ವೆಂಕಟರಾವ್‌ 47 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಜಯಗಳಿಸಿದ ಎಲ್ಲರಿಗೂ ಚುನಾವಣಾಧಿಕಾರಿ ತಹಶೀಲ್ದಾರ್‌ ಚಿದಾನಂದ ಗುರುಸ್ವಾಮಿ ಪ್ರಮಾಣ ಪತ್ರಗಳನ್ನು ನೀಡಿ ಶುಭ ಕೋರಿದರು.

ವಿಜಯೋತ್ಸವ: ಬಿಜೆಪಿ ಹಾಗೂ ಕಾಂಗ್ರೆಸ್‌ ಬೆಂಬಲಿತರು ಮತ ಎಣಿಕೆ ಕೇಂದ್ರ ಮುಂದೆ ಜಮಾಯಿಸಿದ್ದರು. ಕಾಂಗ್ರೆಸ್‌ ಹಾಗೂ ಬಿಜೆಪಿ ಬಾವುಟಗಳು ರಾರಾಜಿಸಿದವು. ಕಾಂಗ್ರೆಸ್‌, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿ ಹೊರ ಬರುತ್ತಿದ್ದಂತೆ ಆಯಾಯ ಪಕ್ಷದ ಕಾರ್ಯಕರ್ತರು ಮುಖಂಡರು ಹೂವಿನ ಹಾರ ಹಾಕಿ ಪಕ್ಷದ ಶಲ್ಯ ತೊಡಿಸಿ, ಸಿಹಿ ತಿನ್ನಿಸಿ, ಜಯಕಾರ ಕೂಗಿ ಸಂಭ್ರಮಿಸಿದರು.

1,674 ಮತಗಳ ಅಂತರದಿಂದ ಭರ್ಜರಿ ಗೆಲುವು
ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕು ಎಪಿಎಂಸಿ ಎರಡೂ ಕ್ಷೇತ್ರಗಳ ಪೈಕಿ ಅತಿ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ ಶ್ರೇಯ ನಾಗವಳ್ಳಿ ಕ್ಷೇತ್ರದ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಆಲೂರು ಎ.ಎಸ್‌. ಪ್ರದೀಪ್‌ ಅವರದು. ಪ್ರದೀಪ್‌ 1674 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದರು. ಈ ಕ್ಷೇತ್ರದಲ್ಲಿ ಒಟ್ಟು ಚಲಾಯಿತ ಮತಗಳು 3436. ಸಿಂಧುವಾದ ಮತಗಳು 3,406. ಈ ಮತಗಳಲಿ ಪ್ರದೀಪ್‌ ಪಡೆದ ಮತಗಳು 2540, ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಜೆ.ಎನ್‌. ಶಿವಕುಮಾರ್‌ ಪಡೆದ ಮತಗಳು 866. ಚಾಮರಾಜನಗರ ಎಪಿಎಂಸಿ ಚುನಾವಣೆಯಲ್ಲಿ ಹೊಂಗನೂರು ಕ್ಷೇತ್ರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್‌ ಅಭ್ಯರ್ಥಿ ಹೊಮ್ಮದ ಜಿ.ಎಂ. ರವಿಶಂಕರಮೂರ್ತಿ ಕಾರ್ಯಕರ್ತರು ಸನ್ಮಾನಿಸಿ ವಿಜಯೋತ್ಸವ ಆಚರಣೆ ಮಾಡಿದರು.

ಟಾಪ್ ನ್ಯೂಸ್

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kollegala

Kollegala: ಕಲುಷಿತ ನೀರು ಸೇವಿಸಿ ನಾಲ್ವರು ಆಸ್ಪತ್ರೆಗೆ ದಾಖಲು

Elephanat-1

Chamarajanagara: ವಕ್ರದಂತ ಹೊಂದಿದ್ದ ಕಾಡಾನೆ ಸ್ವಾಭಾವಿಕ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.