ಗೌರವಧನ ಹೆಚ್ಚಿಸಲು ಜಿಲ್ಲಾಡಳಿತಕ್ಕೆ ಆಗ್ರಹ

ಗ್ರಾಪಂ ಮುಖ್ಯ ಪುಸ್ತಕ ಬರಹಗಾರ್ತಿಯರಿಂದ ಜಿಪಂ ಸಿಇಒಗೆ ಮನವಿ

Team Udayavani, Apr 22, 2022, 9:56 AM IST

3

ಕಾರವಾರ: ಜಿಲ್ಲೆಯ ಗ್ರಾಪಂಗಳ ಮುಖ್ಯ ಪುಸ್ತಕ ಬರಹಗಾರ್ತಿಯರು ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ತಮ್ಮ ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ ಜಿಪಂ ಸಿಇಒ ಪ್ರಿಯಾಂಕಾಗೆ ಮನವಿ ಸಲ್ಲಿಸಿದರು.

ಮಹಿಳಾ ಸ್ವಸಹಾಯ ಸಂಘಗಳಿಗೆ ನೆರವು ನೀಡುವುದು ಹಾಗೂ ಸರ್ಕಾರದ ಯೋಜನೆಗಳಾದ ವಿಪಿ ಆರ್‌ಪಿ ಜಿಪಿಡಿಪಿ ಸರ್ವೇ ಕೆಲಸ ಮಾಡುವುದು, ಸ್ವತ್ಛ ಭಾರತ ಅಭಿಯಾನದಡಿ ಅರಿವು ಮೂಡಿಸುವ ಕೆಲಸವನ್ನು ಮುಖ್ಯ ಬರಹಗಾರ್ತಿಯಾರಾದ ನಾವು ಮಾಡುತ್ತಿದ್ದೇವೆ. ಮನೆ ಮನೆ ಅರಿವು ಕಾರ್ಯಕ್ರಮದ ಬಗ್ಗೆ ಮಹಿಳಾ ಸಂಘಗಳಿಗೆ ಮಾಹಿತಿ ನೀಡುವ ಮುಖ್ಯ ಪುಸ್ತಕ ಬರಹಗಾರ್ತಿಯರು ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ಗೌರವ ಧನ ಹೆಚ್ಚಿಸಲು ಜಿಪಂ ಸಿಇಒಗೆ ಮನವಿ ಸಲ್ಲಿಸಿ, ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು.

ಜಿಲ್ಲೆಯ ಪ್ರತಿ ಗ್ರಾಪಂನಿಂದ ಆಗಮಿಸಿದ್ದ ಸಂಜೀವಿನಿ ಗ್ರಾಪಂ ಒಕ್ಕೂಟದಲ್ಲಿ ಕೆಲಸ ಮಾಡುವ ಮುಖ್ಯ ಪುಸ್ತಕ ಬರಹಗಾರ್ತಿಯರು ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಸಮವಸ್ತ್ರದಲ್ಲಿ ಏಕರೂಪತೆ ರೂಪಿಸಬೇಕು, ಗುರುತಿನ ಚೀಟಿ ಸೌಲಭ್ಯ ನೀಡಬೇಕು ಹಾಗೂ ತಿಂಗಳ ಗೌರವಧನವನ್ನು 15000 ರೂ.ಗಳಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು. 300ಕ್ಕೂ ಹೆಚ್ಚು ಮುಖ್ಯ ಪುಸ್ತಕ ಬರಹಗಾರ್ತಿಯರು ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಾಗಿ ಕೆಲಸ ಮಾಡುವವರು ಕಾರವಾರಕ್ಕೆ ಆಗಮಿಸಿ, ವಿವಿಧ ಬೇಡಿಕೆಗಳನ್ನು ಸರ್ಕರದ ಮುಂದಿಟ್ಟರು.

ಗ್ರಾಪಂ ಲೆಕ್ಕಪತ್ರ ಪುಸ್ತಕ ನಿರ್ವಹಿಸುತ್ತಿದ್ದು, ದಿನನಿತ್ಯದ ದಾಖಲಾತಿ ನಿರ್ವಹಣೆ ಸಹ ಮಾಡುತ್ತಿದ್ದೇವೆ. ಸ್ವಸಹಾಯ ಸಂಘಗಳ ಬಂಡವಾಳ ಮರುಪಾವತಿ ನಿಧಿ ನಿರ್ವಹಣೆ ಮಾಡುವುದರ ಜೊತೆಗೆ ಜೀವನೋಪಾಯ ನಿರ್ವಹಣೆ ಸಲಹೆಗಳನ್ನು ನೀಡುತ್ತಿದ್ದೇವೆ. ಗ್ರಾಪಂಗೆ ಸಂಜೀವಿನಿಯಂತೆ ಕೆಲಸ ಮಾಡುವ ನಮಗೆ ಕಡಿಮೆ ಗೌರವಧನ ನೀಡಲಾಗುತ್ತಿದೆ. ಇದನ್ನು ಹೆಚ್ಚಿಸಬೇಕೆಂದು ಆಗ್ರಹಿಸಿದರು.

ಗೌರವ ಧನ ಹೆಚ್ಚು ಮಾಡುವ ಅಧಿಕಾರ ನನ್ನ ಬಳಿ ಇಲ್ಲ. ಇದು ಸರ್ಕಾರದ ಮಟ್ಟದಲ್ಲಿ ಆಗಬೇಕು. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಇಲಾಖೆ ಹಿರಿಯ ಅಧಿಕಾರಿಗಳ ಗಮನ ಸೆಳೆಯುವೆ. ನಿಮ್ಮ ಬೇಡಿಕೆಯನ್ನು ಅವರಿಗೆ ತಿಳಿಸುವೆ. ವರ್ಷದ ರಜಾ ದಿನ ಬಿಟ್ಟು ಎಲ್ಲಾ ದಿನ ಪಂಚಾಯಿತಿಗಳಲ್ಲಿ ಕೆಲಸ ಮಾಡುವುದು ಗಮನಕ್ಕೆ ಬಂದಿದೆ. ಪಂಚಾಯಿತಿಯ ಎಲ್ಲಾ ಮಾಹಿತಿಗಳನ್ನು ಜನರಿಗೆ, ಸ್ವಸಹಾಯ ಸಂಘಗಳಿಗೆ ತಿಳಿಸಲು ಮೊಬೈಲ್‌ ಹಾಗೂ ನೆಟ್‌ ಪ್ಯಾಕ್‌ ಬಳಸುವುದು ಅನಿವಾರ್ಯ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ನಿಮ್ಮ ಬೇಡಿಕೆಗಳ ಕುರಿತು ಹಿರಿಯ ಅಧಿಕಾರಿಗಳಿಗೆ, ಇಲಾಖೆ ಎಂಡಿ ಹಾಗೂ ಕಾರ್ಯದರ್ಶಿಗಳ ಗಮನಕ್ಕೆ ತರುವೆನು ಎಂದು ಮುಖ್ಯ ಪುಸ್ತಕ ಬರಹಗಾರ್ತಿಯರಿಗೆ ಸಿಇಒ ಪ್ರಿಯಾಂಕಾ ಭರವಸೆ ನೀಡಿದರು.

ಜಿಲ್ಲೆಯ ಎಲ್ಲಾ 12 ತಾಲೂಕಿನಿಂದ ಪಂಚಾಯತ್‌ ಸಂಜೀವಿನಿ ಸದಸ್ಯರು ಆಗಮಿಸಿದ್ದರು.

ಹೇಮಾವತಿ ನಾಯ್ಕ, ಸವಿತಾ ನಾಯ್ಕ, ಭುವನೇಶ್ವರಿ ನಾಯ್ಕ, ಸವಿತಾ ಪಟಗಾರ, ಗೀತಾ ನಾಯಕ, ಸುಮಿತ್ರಾ ಹರಿಕಂತ್ರ, ಮಮತಾ, ಸಾವಿತ್ರಿ ಗೌಡ, ಮಂಗಲಾ ನಾಯ್ಕ, ರಮ್ಯ ಶೆಟ್ಟಿ, ನೇತ್ರಾವತಿ ಮುಕ್ರಿ, ನಿಖೀತಾ ಮಾಂಜ್ರೆàಕರ್‌, ಗ್ರೀಷ್ಮಾ ನಾಯ್ಕ, ಸಾಧನಾ, ಜ್ಯೋತಿ ದೇವಳಿ, ಮೋಹಿನಿ ನಾಯ್ಕ, ಭಾರತಿ, ಶ್ವೇತಾ, ವರ್ಷಾ, ಸುಜಾತಾ ಮುಂತಾದವರು ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.