ಪತ್ನಿಯನ್ನು ಕೊಲೆ ಮಾಡಿ ಮನೆಗೆ ಬೀಗ ಹಾಕಿ ಹೋದ ಪತಿ: ಬಂಧನ


Team Udayavani, Apr 22, 2022, 10:20 AM IST

2murder

ಬೆಂಗಳೂರು: ಪತ್ನಿಯ ಶೀಲ ಶಂಕಿಸಿದ ಪತಿಯು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾವೇರಿಪುರದ 13ನೇ ಅಡ್ಡರಸ್ತೆಯ ನಿವಾಸಿ ವನಜಾಕ್ಷಿ (31) ಕೊಲೆಯಾದ ಮಹಿಳೆ.

ಈಕೆ ಗಾರ್ಮೆಂಟ್ಸ್‌ ಉದ್ಯೋಗಿಯಾಗಿದ್ದು, ಪತಿ ಅಶೋಕ್‌ ಕಾರು ಚಾಲಕನಾಗಿದ್ದಾನೆ. ಏ.17ರಂದು ಪತ್ನಿ ಮೊಬೈಲ್‌ನಲ್ಲಿ ಮಾತನಾಡುವ ವಿಚಾರಕ್ಕೆ ಜಗಳವಾಗಿದ್ದು, ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ ಅಶೋಕ್‌, ಮನೆಗೆ ಹೊರಗಡೆಯಿಂದ ಬೀಗ ಹಾಕಿಕೊಂಡು ಪರಾರಿಯಾಗಿದ್ದ. ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಹುಲಿಯೂರು ದುರ್ಗದ  ‌ ಕೆಂಚಾಲಹಳ್ಳಿ ನಿವಾಸಿಯಾಗಿರುವ ಅಶೋಕ್‌ ಹಾಗೂ ವನಜಾಕ್ಷಿ 13 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಮೂವರು ಮಕ್ಕಳಿದ್ದಾರೆ. ಶಾಲೆಗೆ ರಜೆ ಇರುವುದರಿಂದ ಮಕ್ಕಳನ್ನು ಊರಿಗೆ ಕಳುಹಿಸಿದ್ದರು. ಕೊಲೆಯಾದ ಸಂಜೆ ಅಶೋಕ್‌ ಕ್ಯಾಬ್‌ ಚಾಲನೆ ವೃತ್ತಿ ಮುಗಿಸಿಕೊಂಡು ಬಂದಾಗ ಪತ್ನಿ ವನಜಾಕ್ಷಿ ಫೋನ್‌ನಲ್ಲಿ ಮಾತನಾಡುತ್ತಿರುವುದನ್ನು ಗಮನಿಸಿದ್ದರು. ಇದರಿಂದ ಸಿಟ್ಟಿಗೆದ್ದ ಆತ, “ಯಾರ ಜತೆ ಮಾತನಾಡುತ್ತಿದ್ದೀಯಾ? ಯಾವಾಗಲೂ ಫೋನ್‌ನಲ್ಲಿಯೇ ಬ್ಯುಸಿ ಇರ್ತಿಯಾ’ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ವನಜಾಕ್ಷಿ ಕೂಡ, “ನಾನು ಯಾರ ಜತೆ ಬೇಕಾದರೂ ಮಾತನಾಡುತ್ತೇನೆ’ ಎಂದು ಎದುರು ಉತ್ತರ ನೀಡಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ನಡುವೆ ಜಗಳ ನಡೆದಿತ್ತು. ಈ ವೇಳೆ ಕೋಪದಲ್ಲಿ ಅಶೋಕ್‌ ವನಜಾಕ್ಷಿಯ ಕತ್ತು ಹಿಸುಕಿ ಕೊಲೆ ಮಾಡಿ ಆಕೆಯ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿದ್ದಾನೆ. ಬಳಿಕ ವನಜಾಕ್ಷಿಯ ಮೃತದೇಹವನ್ನು ಮನೆಯ ಒಳಗಡೆ ಬಿಟ್ಟು, ಮನೆ ಹೊರಗಿನಿಂದ ಬೀಗ ಹಾಕಿಕೊಂಡು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಕುಡಿದ ಅಮಲಿನಲ್ಲಿ ಬಿದ್ದು ಯುವಕ ಸಾವು: ಕೊಲೆ ಎಂದು ದೂರು ನೀಡಿದ ದಾರಿಹೋಕರು

ವನಜಾಕ್ಷಿ ಸಹೋದರ ಕಳೆದ 3 ದಿನಗಳಿಂದ ಆಕೆಯ ಮೊಬೈಲ್‌ ನಂಬರ್‌ಗೆ ಕರೆ ಮಾಡಿದರೂ ಸ್ವಿಚ್ಡ್ ಆಫ್‌ ಬಂದಿದೆ. ಅಶೋಕ್‌ ನಂಬರ್‌ ಕೂಡ ಸ್ವಿಚ್ಡ್ ಆಫ್‌ ಆಗಿದ್ದರಿಂದ ಅನುಮಾನಗೊಂಡು ಬುಧವಾರ ರಾತ್ರಿ ಮನೆಯ ಹತ್ತಿರ ಹೋಗಿ ನೋಡಿದಾಗ ಬೀಗ ಹಾಕಿರುವುದು ಕಂಡು ಬಂದಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಮನೆಯ ಬಾಗಿಲು ಒಡೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಟಾಪ್ ನ್ಯೂಸ್

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.