ಅರಣ್ಯಕ್ಕೆ ಬೆಂಕಿ ಹಾಕಿದವರು ಸರ್ವನಾಶವಾಗಲು ದೇವರಿಗೆ ಹರಕೆ
Team Udayavani, Apr 22, 2022, 11:34 AM IST
ಚಿಕ್ಕಮಗಳೂರು: ಅರಣ್ಯಕ್ಕೆ ಬೆಂಕಿ ಬೀಳುವುದನ್ನು ತಡೆಗಟ್ಟಲು ಅರಣ್ಯ ಇಲಾಖೆ ಹಲವು ಯೋಜನೆಗಳನ್ನು ರೂಪಿಸಿದೆ. ಇಲಾಖೆ ವ್ಯಾಪ್ತಿಯ ಕಾರ್ಯಗಳ ಜೊತೆಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸವೂ ನಿರಂತರವಾಗಿದೆ. ಆದರೆ ಕಿಡಿಗೇಡಿಗಳ ಕೃತ್ಯಕ್ಕೆ ಹಾಗೂ ಮೂಢನಂಬಿಕೆಯ ಕಾರಣಕ್ಕೆ ಇನ್ನು ಅಲ್ಲಲ್ಲಿ ಬೆಂಕಿ ಅವಘಡಗಳು ಕಾಣಿಸಿಕೊಳ್ಳುತ್ತಿದ್ದು ತಾಲೂಕಿನ ಸಿಂದಿಗೆರೆ ಗ್ರಾಮಸ್ಥರ ಪರಿಸರಾಸಕ್ತರು ಈಗ ದೇವರ ಮೊರೆ ಹೋಗಿದ್ದಾರೆ.
ಅರಣ್ಯಕ್ಕೆ ಬೆಂಕಿ ಬೀಳುವುದನ್ನು ತಡೆಗಟ್ಟಲು ದೇವರ ಮೊರೆ ಅಂದುಕೊಂಡರೆ ಇದು ನಿಜಕ್ಕೂ ಸತ್ಯ. ಇತ್ತೀಚೆಗೆ ಅರಣ್ಯ ಇಲಾಖೆ ಚಿಕ್ಕಮಗಳೂರು ವಲಯ ತಮ್ಮ ವ್ಯಾಪ್ತಿಯಲ್ಲಿ ಬೆಂಕಿ ಅವಘಡಗಳನ್ನು ತಪ್ಪಿಸಲು ಡ್ರೋಣ್ ಮೊರೆಹೋಗಿತ್ತು. ಸೂಕ್ಷ್ಮ ಅರಣ್ಯಗಳ ವ್ಯಾಪ್ತಿಯಲ್ಲಿ ಡ್ರೋಣ್ ಹಾರಾಟ ನಡೆಸಿ ಕಾಡ್ಗಿಚ್ಚಿಗೆ ಕಾರಣವಾಗುವವರ ಮೇಲೆ ಹದ್ದಿನ ಕಣ್ಣಿಡಲಾಗಿತ್ತು. ಇದರ ಜೊತೆಗೆ ಹಲವು ಯೋಜನೆಗಳನ್ನು ರೂಪಿಸಿದ್ದರೂ ಬೆಂಕಿ ಅವಘಡಗಳು ಪತ್ತೆಯಾಗಿದ್ದವು. ಇದಕ್ಕೂ ಒಂದು ಹೆಜ್ಜೆ ಮುಂದೆ ಹೋದ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗಳು ತನ್ನೂರಿನ ಅರಣ್ಯ ಉಳಿಸಲು ಹೊಸ ತಂತ್ರದೊಂದಿಗೆ ಮುಂದಾಗಿದ್ದಾರೆ.
ಇದನ್ನೂ ಓದಿ:ಉಡುಪಿ ಕಾಲೇಜಿನಲ್ಲಿ ಹೈಡ್ರಾಮಾ: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಒತ್ತಾಯ; ಅವಕಾಶ ನಿರಾಕರಣೆ
ಸಿಂದಿಗೆರೆ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಹೊಸ ತಂತ್ರಕ್ಕೆ ಮುಂದಾದ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಂದಿಗೆರೆ ಮೀಸಲು ಅರಣ್ಯಕ್ಕೆ ಬೆಂಕಿ ಹಾಕುವವರ ಜೀವನ ಸರ್ವನಾಶವಾಗಲೆಂದು ಶ್ರೀ ರೇವಣಸಿದ್ದೇಶ್ವರ ಹಾಗೂ ಪುರದಮ್ಮ ದೇವರಿಗೆ ಹರಕೆ ಹೊರಲಾಗಿದೆ ಎಂದು ಅರಣ್ಯ ವ್ಯಾಪ್ತಿಯ ದೇವಗೊಂಡನಹಳ್ಳಿ, ಕರಡಿಗವಿಮಠ, ಸಿಂದಿಗೆರೆ, ಎಸ್.ಬಿದರೆ, ಭೂಚೇನಹಳ್ಳಿ ಕಾವಲ್ ನ ಹಲವು ಕಡೆಗಳಲ್ಲಿ ಈ ರೀತಿಯ ಬ್ಯಾನರ್ ಅಳವಡಿಸಿದ್ದಾರೆ.
ಈ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಇಲಾಖೆ ಅಳವಡಿಸಿದ ಬ್ಯಾನರ್ ನಿಂದ ಈ ಭಾಗದಲ್ಲಿ ಬೆಂಕಿ ಅವಘಡ ನಿಯಂತ್ರಣಕ್ಕೆ ಬಂದಿದೆ. ಮೇವಿನ ಕಾರಣಕ್ಕೆ ಹಾಗೂ ಇನ್ನಿತರ ಕೃತ್ಯದಿಂದ ಪ್ರತಿವರ್ಷ ಸಾಕಷ್ಟು ಬೆಂಕಿ ಅವಘಡಗಳು ಸಂಭವಿಸುತ್ತಿದ್ದವು. ಆದರೆ ಈ ಬಾರಿ ಇದು ಸಂಪೂರ್ಣ ಹಿಡಿತಕ್ಕೆ ಬಂದಿದ್ದು, ಯಾವುದೇ ಪ್ರಕರಣ ಈ ಬಾರಿ ಕಂಡು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.